Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಮರ್ಥನಂ ಸಂಸ್ಥೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ


ಮೈಸೂರು: ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ಸಮರ್ಥನಂ ಅಂಗವಿಕಲರ ಸಂಸ್ಥೆಯ ಆವರಣದಲ್ಲಿ 71ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿ0ದ ಆಚರಿಸಲಾಯಿತು.
ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಧ್ವಜಹರಣ ಮಾಡಲಾಯಿತು. ಸಂಸ್ಥೆಯ ಹಿತೈಷಿ ಪ್ರಸಾದ್ ಮಾತನಾಡಿ, ಕನ್ನಡ ಭಾಷೆ ನಮ್ಮ ನಾಡಿನ ಅಸ್ಮಿತೆ ಹಾಗೂ ಸಂಸ್ಕöÈತಿಯ ಪ್ರತೀಕವಾಗಿದೆ. ಕನ್ನಡ ಭಾಷೆ ಮತ್ತು ಸಾಹಿತ್ಯದ ಶ್ರೀಮಂತ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ನಾವೆಲ್ಲರೂ ದೈನಂದಿನ ಜೀವನದಲ್ಲಿ ಕನ್ನಡ ಭಾಷೆಯನ್ನು ಹೆಚ್ಚು ಬಳಸುವ ಮೂಲಕ ಕನ್ನಡದ ಬೆಳವಣಿಗೆಗೆ ಕೈಜೋಡಿಸಬೇಕು ಎಂದು ತಿಳಿಸಿದರು.
ಸಂಸ್ಥೆಯ ಮೈಸೂರು ವಿಭಾಗದ ಮುಖ್ಯಸ್ಥ ಶಿವರಾಜ್ ಎಂ. ಮಾತನಾಡಿ, ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ನಾಡಿನ ಇತಿಹಾಸ, ಸಂಸ್ಕöÈತಿ, ಪರಂಪರೆ ಮತ್ತು ಸ್ವಾಭಿಮಾನದ ಸಂಕೇತವಾಗಿದೆ. ವಿಶೇಷವಾಗಿ ವಿಕಲಚೇತನ ಮಕ್ಕಳು ಸೇರಿದಂತೆ ಪ್ರತಿಯೊಬ್ಬರಲ್ಲೂ ಕನ್ನಡ ಭಾಷೆ ಮತ್ತು ನಾಡಿನ ಸಂಸ್ಕöÈತಿಯ ಬಗ್ಗೆ ಅಭಿಮಾನ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬುದ್ಧಿಮಾಂದ್ಯ ಮಕ್ಕಳ ಶಾಲೆಯ ಮುಖ್ಯೋಪಾಧ್ಯಾಯರಾದ ಭ್ರಮರಾಂಬ, ಚೈತ್ರಕುಮಾರಿ, ಮಹಾಂತೇಶ್, ಬೃಂದಾ ಬಾಯಿ, ಅಭಿಲಾಷಾ, ತ್ರಿವೇಣಿ, ಸ್ಪರ್ಶ, ಮಹಾದೇವ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.