Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜನನ ಮತ್ತು ಮರಣ ಪ್ರಮಾಣಪತ್ರಗಳ ಮನೆಬಾಗಿಲು ವಿತರಣಾ ಸೌಲಭ್ಯದ ಪೋಸ್ಟರ್ ಬಿಡುಗಡೆ


ಮೈಸೂರು; ಮಹಾನಗರ ಪಾಲಿಕೆಯ ವತಿಯಿಂದ ಅಂಚೆ ಮೂಲಕ ಜನನ ಮತ್ತು ಮರಣ ಪ್ರಮಾಣಪತ್ರಗಳನ್ನು ನಾಗರಿಕರ ಮನೆಬಾಗಿಲಿಗೆ ತಲುಪಿಸುವ ನೂತನ ಸೌಲಭ್ಯದ ಪೋಸ್ಟರ್ ಅನ್ನು ಭಾನುವಾರ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.
ನಗರದ ಓವಲ್ ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಮೈಸೂರು ನಗರದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಸಮ್ಮುಖದಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಪೋಸ್ಟರ್‌ನಲ್ಲಿರುವ ಕ್ಯೂಆರ್ ಕೋಡ್ ಅನ್ನು ಸ್ಕಾ÷್ಯನ್ ಮಾಡುವ ಮೂಲಕ ಈ ಸೌಲಭ್ಯಕ್ಕೆ ಸಂಬAಧಿಸಿದ ಸಂಪೂರ್ಣ ಮಾಹಿತಿಯನ್ನು ನಾಗರಿಕರು ಪಡೆಯಬಹುದಾಗಿದೆ.
ಇದೇ ವೇಳೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕು, ಕೃಷಿ ಸಂಸ್ಕöÈತಿ ಹಾಗೂ ನೆಲದ ಸಂಬAಧದ ಅರಿವು ಮೂಡಿಸುವ ಗ್ರಾಮಾನುಭವ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಿದರು.