Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪರಭಾಷಿಗರ ಕೈಯಲ್ಲಿ ಕನ್ನಡದ ಬಾವುಟ, ಬಾಯಲ್ಲಿ ನಾಡಗೀತೆ !


ಮೈಸೂರು: ಕನ್ನಡ ರಾಜ್ಯೋತ್ಸವದ ಸಂಭ್ರಮದ ಅಂಗವಾಗಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದ ಗೋಕುಲಂನಲ್ಲಿ ವಿದೇಶಿಯರು ಹಾಗೂ ನೆರೆ ರಾಜ್ಯಗಳಿಂದ ಆಗಮಿಸಿ ಕೆಲಸ ನಿರ್ವಹಿಸುತ್ತಿರುವ ಟೆಕ್ಕಿಗಳಿಗೆ ಕನ್ನಡ ಬಾವುಟಗಳನ್ನು ವಿತರಿಸುವ ಮೂಲಕ ಕನ್ನಡ ಭಾಷೆ, ನಾಡು-ನುಡಿಯ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ವಿದೇಶಿಯರು ಹಾಗೂ ನೆರೆ ರಾಜ್ಯದ ಟೆಕ್ಕಿಗಳೊಂದಿಗೆ ಸಾಮೂಹಿಕವಾಗಿ ಕರ್ನಾಟಕದ ನಾಡಗೀತೆಯನ್ನು ಹಾಡುವ ಮೂಲಕ ಕನ್ನಡಾಭಿಮಾನ ಮೆರೆದರು. ಅಲ್ಲದೆ ಕರ್ನಾಟಕದ ನೆಲ, ಜಲ, ಕಲೆ, ಸಾಹಿತ್ಯ ಹಾಗೂ ಶ್ರೀಮಂತ ಸಂಸ್ಕöÈತಿಯ ಮಹತ್ವದ ಕುರಿತು ಅರಿವು ಮೂಡಿಸಲಾಯಿತು.
ಕನ್ನಡಿಗರಷ್ಟೇ ಅಲ್ಲದೆ, ರಾಜ್ಯದಲ್ಲಿ ವಾಸಿಸುವ ಪ್ರತಿಯೊಬ್ಬರೂ ಕನ್ನಡ ಭಾಷೆ ಮತ್ತು ಸಂಸ್ಕöÈತಿಯನ್ನು ಗೌರವಿಸಿ, ಕನ್ನಡ ಕಲಿಯಲು ಹಾಗೂ ಬಳಸಲು ಮುಂದಾಗಬೇಕು ಎಂಬ ಸಂದೇಶವನ್ನು ಈ ಕಾರ್ಯಕ್ರಮದ ಮೂಲಕ ಸಾರಲಾಯಿತು.
ಕಾರ್ಯಕ್ರಮದಲ್ಲಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ, ಬಿಜೆಪಿ ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷ ರಾಕೇಶ್ ಭಟ್, ಜಯಸಿಂಹ, ಶ್ರೀಧರ್, ಗಗನ್ ಗೌಡ, ಅಮಿತ್, ರಾಜೇಶ್, ಸಚಿನ್ ನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.