Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮಹಾಜನ ಕಾಲೇಜಿನಲ್ಲಿ ‘71ನೇ ಕನ್ನಡ ರಾಜ್ಯೋತ್ಸವ ಆಚರಣೆ’

ಮೈಸೂರು; ನಗರದ ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಈ ವೇಳೆ ಕಾಲೇಜಿನ ನೂತನ ಪ್ರಾಂಶುಪಾಲರಾದ ಡಾ. ಪುಷ್ಪರಾಣಿ ಪಿ.ಜಿ. ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಕೆ ಮಾಡುವುದರ ಮೂಲಕ ಕನ್ನಡವನ್ನು ಉಳಿಸಿ ಬೆಳೆಸಬೇಕೆಂದು ಹೇಳಿದರು. ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕಿರುವ ಪರಂಪರೆ ಮತ್ತು ಇತಿಹಾಸವನ್ನು ಕಾಪಾಡಿಕೊಳ್ಳುವುದು ಕನ್ನಡಿಗರ ಆದ್ಯಕರ್ತವ್ಯವಾಗಿದೆ ಎಂದರು. ಇಂದಿನ ನವತಂತ್ರಜ್ಞಾನ ಯುಗದಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಅಸ್ತಿತ್ವವನ್ನು ಸ್ಥಳಿಯವಾಗಿ ಮತ್ತು ಜಾಗತಿಕವಾಗಿ ಉಳಿಸುವಲ್ಲಿ ಕನ್ನಡಿಗರೆಲ್ಲರೂ ಒಟ್ಟಾಗಿ ಶ್ರಮಿಸಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಭಾಸ್ಕರ್ ಹೆಚ್.ಎನ್., ಭೂಗೋಳಶಾಸ್ತç ವಿಭಾಗದ ಮುಖ್ಯಸ್ಥ ಡಾ. ಸೋಮಶೇಖರ್ ಕೆ.ಕೆ., ಕನ್ನಡ ಸಹಾಯಕ ಪ್ರಾಧ್ಯಾಪಕ ನಾಗೇಶ ಎಂ, ಮತ್ತು ಅಧ್ಯಾಪಕರು, ಅಧ್ಯಾಪಕೇತರರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.