
ಮೈಸೂರು; ನಗರದ ಸರಸ್ವತಿಪುರಂನಲ್ಲಿರುವ ವಿಜಯ ವಿಠ್ಠಲ ವಿದ್ಯಾ ಸಂಸ್ಥೆವತಿಯಿAದ ಭಾನುವಾರ ಕನ್ನಡ ಹಬ್ಬವನ್ನುಅತ್ಯಂತ ವಿಜೃಂಭಣೆಯಿAದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸುತ್ತೂರು ಜೆ.ಎಸ್.ಎಸ್. ಸಂಸ್ಥೆಗಳ ಸಹಾಯಕ ಆಡಳಿತಾಧಿಕಾರಿ ಜಿ. ಎಲ್. ತ್ರಿಪುರಾಂತಕ ಮಾತನಾಡಿ, ಕನ್ನಡ ಭಾಷೆಯ ಸಂರಕ್ಷಣೆ ಮತ್ತು ಪ್ರಸಾರದ ಅತ್ಯಗತ್ಯತೆಯನ್ನು ಒತ್ತಿ ಹೇಳಿದರು. ದೈನಂದಿನ ವ್ಯವಹಾರಗಳಲ್ಲಿ ಅದರ ಬಳಕೆಯು ಕ್ಷೀಣಿಸುತ್ತಿರುವುದರ ಕುರಿತು ಕಳವಳ ವ್ಯಕ್ತಪಡಿಸಿದರು. ಕೇವಲ ವರ್ಷಕ್ಕೊಮ್ಮೆ ಆಚರಿಸುವ ಹಬ್ಬಗಳು ಅಥವಾಔಪಚಾರಿಕ ಮನ್ನಣೆಗಳಿಂದ ಮಾತ್ರವೇ ಭಾಷೆ ಜೀವಂತವಾಗಿ ಉಳಿಯಲು ಸಾಧ್ಯವಿಲ್ಲ; ಬದಲಿಗೆ ಪ್ರತಿಯೊಬ್ಬರ ಮನೆಗಳಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ಸಾಮಾಜಿಕ ಸಂಭಾಷಣೆಗಳಲ್ಲಿ ಅದರ ನಿರಂತರ ಬಳಕೆಯಿಂದ ಮಾತ್ರ ಭಾಷೆಯ ಉಳಿವು ಸಾಧ್ಯ ಎಂದು ಸ್ಪಷ್ಟಪಡಿಸಿದರು.
ಪ್ರತಿಯೊಬ್ಬರೂ ಕನ್ನಡ ಭಾಷೆಯ ಬಗ್ಗೆ ಹೆಮ್ಮೆಪಟ್ಟು, ನಿತ್ಯಜೀವನದ ಸಂವಹನದಲ್ಲಿ ಕನ್ನಡವನ್ನೇ ಬಳಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿ ವಿಜಯ ವಿಠ್ಠಲ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಆರ್. ವಾಸುದೇವ ಭಟ್, ಗೌರವ ಕಾರ್ಯದರ್ಶಿ ಸಿ.ಎ. ವಿಶ್ವನಾಥ್ ಎ, ವಿಜಯ ವಿಠ್ಠಲ ಸಂಯುಕ್ತ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಹೆಚ್. ಸತ್ಯಪ್ರಸಾದ್, ವಿಜಯ ವಿಠ್ಠಲ ವಿದ್ಯಾಶಾಲೆಯ ಪ್ರಾಂಶುಪಾಲ ವೀಣಾಎಸ್. ಎ. ಹಾಗೂ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.