ಕನ್ನಡ ಸಾಹಿತ್ಯ, ಇತಿಹಾಸ ಮತ್ತು ಸಂಸ್ಕೃತಿಯನ್ನು ಹೊಸ ಪೀಳಿಗೆಗೆ ತಲುಪಿಸಬೇಕು; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ
ಮೈಸೂರು; ಯುವ ಸಮೂಹ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕನ್ನಡ ಸಾಹಿತ್ಯ, ಇತಿಹಾಸ ಮತ್ತು ಸಂಸ್ಕೃತಿಯನ್ನು ಹೊಸ ಪೀಳಿಗೆಗೆ ತಲುಪಿಸಬೇಕು ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಭಾನುವಾರ ಮೈಸೂರಿನ ನಗರದ ಓವಲ್ ಮೈದಾನದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಉದ್ಘಾಟಿಸಿ, ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,ಕನ್ನಡದಲ್ಲಿ ಬರೆಯುವ, ಓದುವ, ಸಂಶೋಧನೆ ಮಾಡುವ ಮತ್ತು ಹೊಸ ಆಲೋಚನೆಗಳನ್ನು ಹಂಚಿಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ…