ಇಲವಾಲದ ಕರ್ನಾಟಕ ಪಬ್ಲಿಕ್ ಶಾಲೆಗೆ ಮಿನಿ ವಿಜ್ಞಾನ ಪ್ರಯೋಗಾಲಯ, ಡಿಜಿಟಲ್ ಸ್ಮಾರ್ಟ್ ಬೋರ್ಡ್ ಹಾಗೂ ಶೈಕ್ಷಣಿಕ ಕಿಟ್‌ಗಳ ಕೊಡುಗೆ
ಮೈಸೂರು: ಸಮರ್ಥನಂ ಟ್ರಸ್ಟ್ ಫಾರ್ ದಿ ಡಿಸೇಬಲ್ಡ್ ಹಾಗೂ ಐ.ಐ.ಎಫ್.ಎಲ್. ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ, ಸಿ.ಎಸ್.ಆರ್. ಯೋಜನೆಯಡಿ ಮೈಸೂರಿನ ಇಲವಾಲದ ಕರ್ನಾಟಕ ಪಬ್ಲಿಕ್ ಶಾಲೆಗೆ ಮಿನಿ ವಿಜ್ಞಾನ ಪ್ರಯೋಗಾಲಯ, ಡಿಜಿಟಲ್ ಸ್ಮಾರ್ಟ್ ಬೋರ್ಡ್ ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್‌ಗಳನ್ನು ಕೊಡುಗೆಯಾಗಿ ನೀಡಿ ಶಾಲೆಯ ಶೈಕ್ಷಣಿಕ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲಾಯಿತು.ಕಾರ್ಯಕ್ರಮದ ಶಾಲೆಯ ಪ್ರಭಾರ ಉಪಪ್ರಾಂಶುಪಾಲ ಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಮರ್ಥನಂ ಟ್ರಸ್ಟ್ ಹಾಗೂ ಐ.ಐ.ಎಫ್.ಎಲ್. ಫೌಂಡೇಶನ್ ವತಿಯಿಂದ ದೊರೆತಿರುವ ಮಿನಿ ವಿಜ್ಞಾನ ಪ್ರಯೋಗಾಲಯ ಮತ್ತು ಡಿಜಿಟಲ್ ಸ್ಮಾರ್ಟ್ ಬೋರ್ಡ್…