Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮಕ್ಕಳ ಗ್ರಾಮ ಸಭೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಬಗ್ಗೆ ಜಾಗೃತಿ ಮೂಡಿಸಿ: ಐಶ್ವರ್ಯ ಆರ್

ಮೈಸೂರು: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯು ಗ್ರಾಮ ಮಟ್ಟದಿಂದ ನಡೆಯಬೇಕು. ಮಕ್ಕಳ ಗ್ರಾಮ ಸಭೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಬಗ್ಗೆ ಜಾಗೃತಿ ಮೂಡಿಸಿ ಎಂದು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದರು.ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಹಾಗೂ ಕಾರ್ಯಪಡೆ ಸಮಿತಿಯ ಸಭೆ ನಡೆಸಿ ಮಾತನಾಡಿದ ಅವರು, ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು ಅಧಿಕಾರಿಗಳು ಪ್ರತಿ ಮಾಹೆ ನಿಗದಿಪಡಿಸಿರುವ ಕನಿಷ್ಠ 15 ತಪಾಸಣೆ ಅಥವಾ ದಾಳಿಗಳನ್ನು ನಡೆಸಿ…

Read More

ಚಾಮುಂಡಿಬೆಟ್ಟ ಪ್ಲಾಸ್ಟಿಕ್ ಮುಕ್ತ ವಲಯ:ಆಷಾಢ ಮಾಸದಲ್ಲಿ ಪ್ಲಾಸ್ಟಿಕ್ ಬಳಸದಂತೆ ಭಕ್ತರಿಗೆ ಪ್ರಾಧಿಕಾರ ಸೂಚನೆ

ಮೈಸೂರು: ನಗರದ ಚಾಮುಂಡಿಬೆಟ್ಟ ಪ್ಲಾಸ್ಟಿಕ್ ಮುಕ್ತ ವಲಯವಾಗಿದೆ. ಈ ಹಿನ್ನಲೆಯಲ್ಲಿ ಆಷಾಢ ಮಾಸದ ಶುಕ್ರವಾರಗಳು, ಪ್ರತಿ ಶನಿವಾರ, ಭಾನುವಾರ ಹಾಗೂ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವದ /ವರ್ಧಂತಿ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ, ಇಡೀಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಶ್ರೀ ಚಾಮುಂಡೇಶ್ವರಿಕ್ಷೇತ್ರಅಭಿವೃದ್ಧಿ ಪ್ರಾಧಿಕಾರವು ತೀರ್ಮಾನಿಸಿದೆ.ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯ ತೀರ್ಮಾನದಂತೆ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಭಕ್ತಾದಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧದ ಕುರಿತು ಅರಿವು ಮೂಡಿಸಲು ಉದ್ದೇಶಿಸಲಾಗಿದೆ.ಈ ಬಾರಿಯ…

Read More

ನಗರ ಪಾಲಿಕೆ ಆಯುಕ್ತರಾಗಿ ಎಂ.ಕೆ.ಸವಿತಾ ಅಧಿಕಾರ ಸ್ವೀಕಾರ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ಎಂ.ಕೆ.ಸವಿತಾ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಅವರು ಇಂದು ಅಧಿಕಾರ ವಹಿಸಿಕೊಂಡು, ನಗರ ಆಯುಕ್ತರಾಗಿದ್ದ ಶೇಖ್ ತಸ್ವೀರ್ ಆಸಿಫ್ ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ. ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾ ಗಿದ್ದ ಎಂ.ಕೆ. ಸವಿತಾ ಅವರನ್ನು ಆಯುಕ್ತರ ಹುದ್ದೆಗೆ ನೇಮಿಸಲಾಗಿದೆ. ಅವರು ನಗರಪಾಲಿಕೆಯ ಕಚೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ಶೇಖ್ ತಸ್ವೀರ್ ಆಸಿಫ್ ಅಧಿಕಾರ ಹಸ್ತಾಂತರಿಸಿದರು. ಸವಿತಾ ಅವರು ಈ ಹಿಂದೆ ತಿ.ನರಸೀಪುರ ತಾಲ್ಲೂಕು…

Read More

ಅಸಹಾಯಕರಾಗಿ ಬಿದ್ದಿದ್ದ ವೃದ್ಧೆಯ ರಕ್ಷಣೆ

ಮೈಸೂರು; ನಗರದ ಪೊಲೀಸ್ ಆಯುಕ್ತರ ಕಚೇರಿ ಬಳಿ ಅಸಹಾಯಕರಾಗಿ ಬಿದ್ದಿದ್ದ ನಿಂಗಮ್ಮ ಎಂಬ ವಯೋವೃದ್ಧೆಯನ್ನು `ಅಕ್ಕ ಪಡೆ’ಯ ಸಿಬ್ಬಂದಿಗಳು ತಕ್ಷಣವೇ ರಕ್ಷಿಸಿದ್ದಾರೆ. ಬಳಿಕ ಅವರನ್ನು ವಿಚಾರಿಸಿದಾಗ, ಅವರು ರೈಲ್ವೆ ಇಲಾಖೆಯ ನಿವೃತ್ತ ನೌಕರರೆಂದೂ ಮತ್ತು ಅವರ ಮನೆ ವೀರನಗೆರೆ ಬಳಿ ಇರುವುದಾಗಿಯೂ ತಿಳಿದುಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಅಕ್ಕ ಪಡೆಯ ಸಿಬ್ಬಂದಿ ವೃದ್ಧೆಯನ್ನು ಸುರಕ್ಷಿತವಾಗಿ ಅವರ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.

Read More

ವಿಜಯ ವಿಠಲ ವಿದ್ಯಾಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ, ಉಚಿತ ನೇತ್ರ ತಪಾಸಣಾ ಶಿಬಿರ

ಮೈಸೂರು; ನಗರದ ವಿಜಯ ವಿಠಲ ವಿದ್ಯಾಶಾಲೆಯಲ್ಲಿ, 2026-27ನೇ ಸಾಲಿನ ಇಂಟರ್ಯಾಕ್ಟ್ ಕ್ಲಬ್‌ನ ಪದಗ್ರಹಣ ಸಮಾರಂಭವು ಶಾಲಾ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು.ಈ ಸಮಾರಂಭಕ್ಕೆ ರೋಟರಿ ಮೈಸೂರಿನ ಅಧ್ಯಕ್ಷ ಆರ್.ಟಿ.ಎನ್. ಎಂ. ಎನ್. ವೆಂಕಟೇಶ್ ಅವರು ಮುಖ್ಯ ಅತಿಥಿಗಳಾಗಿ ಮತ್ತು ಪದಗ್ರಹಣ ಅಧಿಕಾರಿಯಾಗಿ ಆಗಮಿಸಿದ್ದರು. ರೋಟರಿ ಮೈಸೂರಿನ ಯುವ ಸೇವಾ ವಿಭಾಗದ ನಿರ್ದೇಶಕರಾದ ಆರ್.ಟಿ.ಎನ್. ಡಾ. ನಂಜರಾಜೇ ಎಸ್. ಅರಸ್ ಅವರು ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ಡಾ. ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆಯ ಕ್ಲಿನಿಕಲ್ ಸೇವೆಗಳ ಮುಖ್ಯಸ್ಥ ಡಾ. ಪವನ್ ವಿ….

Read More

ಯೋಜನೆಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ; ಜಿ.ಪಂ ಸಿಇಒ ಎಚ್ಚರಿಕೆ

• ಜೂನ್ ತಿಂಗಳಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸಿದ ಗ್ರಾಪಂಗಳಿಗೆ ಪ್ರಶಸ್ತಿ ಪತ್ರ ವಿತರಣೆಮೈಸೂರು: ಇ-ಹಾಜರಾತಿ, ಸಕಾಲ,ಮಾನವ ದಿನಗಳ ಸೃಜನೆ,ಕಂದಾಯ ವಸೂಲಾತಿ ಸೇರಿದಂತೆ ಇನ್ನಿತರ ಯೋಜನೆಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಯುಕೇಶ್‌ಕುಮಾರ್ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.ಬುಧವಾರ ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ 255 ಗ್ರಾಪಂಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ,ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬAಧಿಸಿದAತೆ ರಾಜ್ಯದ…

Read More

ಹೆಚ್ಚು ಅಂಕ ಪಡೆದ ಸರ್ಕಾರಿ ನೌಕರರ ಸಂಘದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ 

ಸರ್ಕಾರಿ ನೌಕರರ ಸಂಘದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ : ಹೊಸಹಳ್ಳಿ ಕೃಷ್ಣೇಗೌಡ ಪಿರಿಯಾಪಟ್ಟಣ : ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪಿರಿಯಾಪಟ್ಟಣ ಅಧ್ಯಕ್ಷ ಹೊಸಹಳ್ಳಿ ಕೃಷ್ಣೇಗೌಡ ತಿಳಿಸಿದರು. ಪಟ್ಟಣದ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜುಲೈ 11 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ…

Read More

ನರಸಿಂಹರಾಜ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಬೇಕು: ಸಂತೋಷ್ ಕುಮಾರ್ ಬಿ.ಎಂ

ಮೈಸೂರು: ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿ ನಡೆಯುತ್ತಿಲ್ಲ ಎಂದು ಬಿಜೆಪಿ ಮೈಸೂರು ನಗರ ಮಾಧ್ಯಮ ಸಹ ಸಂಚಾಲಕ ಸಂತೋಷ್ ಕುಮಾರ್ ಬಿ.ಎಂ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಸರ್ಕಾರದ ಮಾರ್ಗಸೂಚಿಯಂತೆ ಬೂತ್ ಮಟ್ಟದ ಅಧಿಕಾರಿಗಳು ವಿವಿಧ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರಗಳೊAದಿಗೆ ಮನೆ-ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಪರಿಶೀಲಿಸಬೇಕು. ಪರಿಶೀಲನೆ ನಡೆಸಿದ ಮನೆಗಳಿಗೆ ಸ್ಟಿಕ್ಕರ್ ಅಳವಡಿಸುವ ಮೂಲಕ ಪ್ರಕ್ರಿಯೆ ಪೂರ್ಣಗೊಂಡಿರುವುದನ್ನು ಖಚಿತಪಡಿಸಬೇಕು….

Read More

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ

ಮ್ಯೆಸೂರು; ನಗರದ ನಾದಬ್ರಹ್ಮ ಸಂಗೀತ ಮಹಾಸಭಾದಲ್ಲಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಏರ್ಪಡಿಸಿದ್ದ 2026-2027 ನೇ ಸಾಲಿನ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ, ಪ್ರತಿಭಾ ಪುರಸ್ಕಾರ,ಹಾಗೂ ಸ್ವಾಗತ ಸಮಾರಂಭ ದಲ್ಲಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಾಸಕ ಟಿ .ಎಸ್.ಶ್ರೀವತ್ಸ ಸನ್ಮಾನಿಸಿದರು.ವಿಜ್ಞಾನ ವಿಭಾಗ ದಲ್ಲಿ ಕು.ಕಾವ್ಯ. ಆರ್ 600ಕ್ಕೆ 580 ಅಂಕಗಳು, ವಾಣಿಜ್ಯ ವಿಭಾಗದಲ್ಲಿ ಕು.ವ್ಯೆಷ್ಣವಿ.ಎಸ್ 600ಕ್ಕೆ 581 ಅಂಕಗಳು,ಕಲಾ ವಿಭಾಗದಲ್ಲಿ ಕು.ಮೌನ 600ಕ್ಕೆ 539ಅಂಕಗಳಿಸಿದ…

Read More