Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಹೊಸ ಪರಿಕಲ್ಪನೆಯೊಂದಿಗೆ ದಸರಾ ದೀಪಾಲಂಕಾರ ರೂಪಿಸಿ: ಸೆಸ್ಕ್ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ

ಮೈಸೂರು: ಈ ಬಾರಿ ವಿಜೃಂಭಣೆಯಿAದ ಜರುಗಲಿರುವ ವಿಶ್ವ ಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ, ಆಕರ್ಷಕ ಪರಿಕಲ್ಪನೆಯಲ್ಲಿ ಮೂಡಿಬರಬೇಕು. ಈ ನಿಟ್ಟಿನಲ್ಲಿ ಸಿದ್ಧತೆಕೈಗೊಳ್ಳಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧ್ಯಕ್ಷರಾದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ದಸರಾ ವಿದ್ಯುತ್ ದೀಪಾಲಂಕಾರದ ಸಿದ್ಧತೆಗಳ ಕುರಿತು ಬುಧವಾರ ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಕಳೆದ ವರ್ಷಕ್ಕಿಂತ…

Read More

ಮೈಸೂರು ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ; ಜಿಲ್ಲಾಧಿಕಾರಿ ಜಿ. ಲಕ್ಷ್ಮಿ ಕಾಂತ ರೆಡ್ಡಿ

ಮೈಸೂರು ; ಈ ಬಾರಿ ಅದ್ಧೂರಿಯಾಗಿ ಜರುಗಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಕೊನೆ ದಿನ ನಡೆಯುವ ಐತಿಹಾಸಿಕ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ ಜಿ .ಲಕ್ಷ್ಮಿ ಕಾಂತ ರೆಡ್ಡಿ ತಿಳಿಸಿದರು.ಬುಧವಾರ ನಗರದ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಚಲನಚಿತ್ರ ರಂಗದ ಪದಾಧಿಕಾರಿಗಳ ಜೊತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಆಶಯದಂತೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ನಟ ನಟಿಯರು…

Read More

ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ; ಡಾ. ಟಿ.ರಮೇಶ್

ಮೈಸೂರು; ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತç ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಟಿ ರಮೇಶ್ ಹೇಳಿದರು.ಮಂಗಳವಾರ ನಗರದ ಮಹಾರಾಣಿ ಮಹಿಳಾ ಕಲಾ ಕಾಲೇಜಿ ನಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತç ಅಧ್ಯಾಪಕರ ಸಂಘ ಹಾಗೂ ಮಹಾರಾಣಿ ಕಲಾ ಮಹಿಳಾ ಕಾಲೇಜಿನ ಅರ್ಥಶಾಸ್ತç ವಿಭಾಗದ ಸಹಯೋಗದಲ್ಲಿ ಅರ್ಥಶಾಸ್ತçದ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತ ದೇಶ ಅತಿ ಹೆಚ್ಚು ಯುವಕರನ್ನು…

Read More

ಉತ್ತಮ ಪುಸ್ತಕಗಳನ್ನು ಓದಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ; ಡಾ.ಸಿ.ಪಿ.ರಾಮಶೇಷು

ಮೈಸೂರು; ಉತ್ತಮ ಪುಸ್ತಕಗಳನ್ನು ಓದಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಮೈಸೂರು ವಿಶ್ವ ವಿದ್ಯಾನಿಲಯದ ನಿವೃತ್ತ ಗ್ರಂಥಪಾಲಕ ಡಾ.ಸಿ.ಪಿ.ರಾಮಶೇಷು ಹೇಳಿದರು.ಮಂಗಳವಾರ ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನ ಗ್ರಂಥಾಲಯದಲ್ಲಿ ಏರ್ಪಡಿಸಲಾಗಿದ್ದ ನವಕರ್ನಾಟಕ ಪ್ರಕಾಶನದ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುಸ್ತಕಗಳು ನಮ್ಮ ಉತ್ತಮ ಸ್ನೇಹಿತರು, ಅವು ನಮಗೆ ಹೊಸ ವಿಚಾರಗಳನ್ನು ಪರಿಚಯಿಸುತ್ತವೆ ಮತ್ತು ನಮ್ಮ ಕಲ್ಪನಾ ಶಕ್ತಿಯನ್ನು ವಿಸ್ತರಿಸುತ್ತವೆ. ಒಳ್ಳೆಯ ಪುಸ್ತಕವನ್ನು ಓದುವುದರಿಂದ ನಮ್ಮ ಜ್ಞಾನ ಮಾತ್ರವಲ್ಲ, ನಮ್ಮ ವ್ಯಕ್ತಿತ್ವವೂ ಬೆಳೆಯುತ್ತವೆ ಎಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ…

Read More

ಹಸಿವು ಮತ್ತು ಅಪೌಷ್ಟಿಕತೆಯನ್ನು ದೂರಮಾಡೋಣ, ಆರೋಗ್ಯಕರ ಭಾರತವನ್ನು ನಿರ್ಮಿಸೋಣ;ಡಾ. ಸುಮನಾ ಕೆ

ಮೈಸೂರು: ಹಸಿವು ಮತ್ತು ಅಪೌಷ್ಟಿಕತೆಯನ್ನು ದೂರಮಾಡೋಣ, ಆರೋಗ್ಯಕರ ಭಾರತವನ್ನು ನಿರ್ಮಿಸುವುದಕ್ಕೆ ಎಲ್ಲರೂ ಕೈಜೋಡಿಸಿ, ಶ್ರಮಿಸಬೇಕು ಎಂದು ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಸೂಕ್ಷ್ಮಜೀವಶಾಸ್ತ್ರ ವಿಭಾಗ ಹಾಗೂ ಡೆಪ್ಯೂಟಿ ಡೀನ್–ಐಕ್ಯೂಎಸಿ ಡಾ. ಸುಮನಾ ಕೆ ತಿಳಿಸಿದರು.ಮೈಸೂರಿನ ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ವತಿಯಿಂದ ನಡೆದ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಮತೋಲಿತ ಹಾಗೂ ಪೌಷ್ಟಿಕ ಆಹಾರದ ಮಹತ್ವವನ್ನು ವಿವರಿಸಿದರು. ಇಂದಿನ ಯುವಜನರು ಆರೋಗ್ಯಕರ…

Read More

ರಾಧಾ,ಕೃಷ್ಣ ವೇಷದಲ್ಲಿ ಮಕ್ಕಳ ಸಂಭ್ರಮ

ಮೈಸೂರು; ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೈಸೂರಿನ ಸರಸ್ವತಿಪುರಂ ನಲ್ಲಿರುವ ಶ್ರೀ ಕೃಷ್ಣಧಾಮದಲ್ಲಿ ಚದ್ಮವೇಶ ಸ್ಪರ್ಧೆಯನ್ನು ಕಾಣಿಯೂರು ಮಠದ ಶ್ರೀ ವಿದ್ಯಾ ವಲ್ಲಭ ತೀರ್ಥ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಸಲಾಯಿತು.ಸುಮಾರು 120 ಮಕ್ಕಳು ಚದ್ಮ ವೇಷ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿಜೇತರಿಗೆ ಶ್ರೀ ಕಾಣೆಯೂರು ಮಠದ ವಿದ್ಯಾವಲ್ಲವ ತೀರ್ಥ ಸ್ವಾಮೀಜಿ ಬಹುಮಾನವನ್ನು ವಿತರಿಸಿದರು.ಚದ್ಮ ವೇಷ ಸ್ಪರ್ಧೆಯ ಮುಖ್ಯ ತೀರ್ಪುಗಾರರಾಗಿ ವಿಜಯ ವಿಠಲ ವಿದ್ಯಾ ಶಾಲೆಯ ಕವಿತಾ ಹಾಗೂ ತ್ರಿವೇಣಿ ಎಂಬುವರು ತೀರ್ಪುಗಾರರಾಗಿ ಕೆಲಸ ನಿರ್ವಹಿಸಿದರು.ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಮಿತ್ರ…

Read More

ಆಧುನಿಕ ತಂತ್ರಜ್ಞಾನವನ್ನ ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಅಭಿವೃದ್ಧಿಯ ಪಥದತ್ತ ಸಾಗಬಹುದು: ನರಸಿಂಹಮೂರ್ತಿ 

ಪಿರಿಯಾಪಟ್ಟಣ : ಆಧುನಿಕ ತಂತ್ರಜ್ಞಾನದ ಬಳಕೆಯನ್ನು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಅಭಿವೃದ್ಧಿಯ ಪಥದತ್ತ ಸಾಗಬಹುದು ಎಂದು ನಿವೃತ್ತ ಶಿಕ್ಷಕ ನರಸಿಂಹಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.  ತಾಲೂಕಿನ ಬೆಟ್ಟದಪುರ ಸಮೀಪದ ಅನಿಕೇತನ ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ಪಿರಿಯಾಪಟ್ಟಣ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಏರ್ಪಡಿಸಿದ್ದ ದೇಶದ ಅಭಿವೃದ್ಧಿಗೆ ‘ ಎ ಐ ತಂತ್ರಜ್ಞಾ ಮಾರಕವೇ ಅಥವಾ ಪೂರಕವೇ ಎಂಬ ವಿಷಯದ ಚರ್ಚಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾನವನು ಆಧುನಿಕತೆಯಿಂದ ಸಾಕಷ್ಟು ಬೌದ್ಧಿಕತೆಯನ್ನು ಬೆಳೆಸಿಕೊಂಡಿದ್ದಾನೆ. ಇಂದು ಆಧುನಿಕತೆ…

Read More

‘ಡಿಮೆನ್ಶಿಯಾ ಸ್ನೇಹಿ ಮೈಸೂರು’ ನಿರ್ಮಿಸುವ ಅಗತ್ಯವಿದೆ; ಡಾ. ಹನುಮಂತಾಚಾರ್ ಜೋಶಿ

ಮೈಸೂರು; ಡಿಮೆನ್ಶಿಯಾದಿಂದ ಬಳಲುತ್ತಿರುವ ವ್ಯಕ್ತಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ಅಗತ್ಯವಾದ ಬೆಂಬಲ, ಕಾಳಜಿ ಮತ್ತು ಗೌರವ ದೊರೆಯುವಂತೆ ಡಿಮೆನ್ಶಿಯಾ ಸ್ನೇಹಿ ಮೈಸೂರು” ನಿರ್ಮಿಸುವ ಅಗತ್ಯವಿದೆ ಎಂದು ಎಆರ್‌ಡಿಎಸ್‌ಐನ ಮೈಸೂರು ಶಾಖೆ ಅಧ್ಯಕ್ಷ ಡಾ. ಹನುಮಂತಾಚಾರ್ ಜೋಶಿ ಹೇಳಿದರು.ಅಲ್ಜೆöÊಮರ್ ಮತ್ತು ಸಂಬAಧಿತ ಕಾಯಿಲೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಲ್ಜೆöÊಮರ್‌ಸ್ ಅಂಡ್ ರಿಲೇಟೆಡ್ ಡಿಸಾರ್ಡರ್ಸ್ ಸೊಸೈಟಿ ಆಫ್ ಇಂಡಿಯಾ , ಮೈಸೂರು ಶಾಖೆ ವತಿಯಿಂದ ನಗರದ ವಿವೇಕ ಆಸ್ಪತ್ರೆಯಲ್ಲಿ ಆಯೋಜಿಸಲಾಗಿರುವ ವಿಶ್ವ ಅಲ್ಜೆöÊಮರ್ ತಿಂಗಳು ಕಾರ್ಯಕ್ರಮದಲ್ಲಿ…

Read More

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುದಾನಕ್ಕೆ ಯೋಜನೆ ರೂಪಿಸಿ: ಜಿಲ್ಲಾಧಿಕಾರಿ ಲಕ್ಷ್ಮಿ ಕಾಂತ ರೆಡ್ಡಿ ಜಿ

ಮೈಸೂರು: ಮೈಸೂರು ಮಹಾನಗರಪಾಲಿಕೆಯಲ್ಲಿ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುದಾನದಡಿ ಉಳಿದಿರುವ ಅನುದಾನದಲ್ಲಿ ವಸತಿ ಶಾಲೆಗಳಿಗೆ ಮೂಲಭೂತ ವಸ್ತುಗಳ ಖರೀದಿ, ಲ್ಯಾಪ್ ಟಾಪ್ ಖರೀದಿ, ಮನೆ ನಿರ್ಮಾಣ, ಸೈಕಲ ಖರೀದಿ ಸೇರಿದಂತೆ ವಿವಿಧ ಕೆಲಸಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿ ಕಾಂತ ರೆಡ್ಡಿ ಜಿ ತಿಳಿಸಿದರು.ಮಂಗಳವಾರ ನಗರದ ಡಾ: ಬಾಬು ಜಗಜೀವನರಾಂ ಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ದೌರ್ಜನ್ಯ ಕುರಿತು ಪೊಲೀಸ್ ಠಾಣೆಯಲ್ಲಿ ದೂರು…

Read More

ಆಧುನಿಕ ತಂತ್ರಜ್ಞಾನವನ್ನು ವಿವೇಕದಿಂದ ಬಳಸಬೇಕು; ಶ್ರೀ ವಿದ್ಯಾಬಲ್ಲಭತೀರ್ಥಸ್ವಾಮೀಜಿ

ಮೈಸೂರು; ಸಮಯದ ಸದ್ಬಳಕೆ, ವ್ಯಾಸಂಗದತ್ತ ಏಕಾಗ್ರತೆ ಹಾಗೂ ಸಚ್ಚಾರಿತ್ರ‍್ಯ ಮತ್ತು ಸತ್ಸಂಪ್ರದಾಯಗಳನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾಬಲ್ಲಭತೀರ್ಥಸ್ವಾಮೀಜಿ ತಿಳಿಸಿದರು.ಮೈಸೂರಿನ ವಿಜಯ ವಿಠಲ ವಿದ್ಯಾ ಸಂಸ್ಥೆಗಳಲ್ಲಿ ನಡೆದ ಶ್ರೀಗಳಿಂದ ಆಶೀರ್ವಚನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿ ಮಾತನಾಡಿದ ಶ್ರೀಗಳು, ಸಾರ್ಥಕ ಹಾಗೂ ಯಶಸ್ವಿ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಶಿಸ್ತು, ಭಕ್ತಿ, ಸನ್ಮೌಲ್ಯಗಳು ಮತ್ತು ಜವಾಬ್ದಾರಿಯುತ ನಡವಳಿಕೆಯ ಪ್ರಾಮುಖ್ಯತೆಯನ್ನು ತಿಳಿಸಿಕೊಟ್ಟರು. ಆಧುನಿಕ ತಂತ್ರಜ್ಞಾನವನ್ನು ವಿವೇಕದಿಂದ ಬಳಸಬೇಕು ಮತ್ತುಅದುಅಧ್ಯಯನ ಹಾಗೂ ಕರ್ತವ್ಯಗಳಿಂದ ಗಮನವನ್ನು ಬೇರೆಡೆಗೆ ಸೆಳೆಯದಂತೆ ಎಚ್ಚರ ವಹಿಸಬೇಕು…

Read More