ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಗುಜರಾತ್ ಕರಕುಶಲ ಉತ್ಸವಕ್ಕೆ ಚಾಲನೆ
ಮೈಸೂರು: ನಗರದ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಶುಕ್ರವಾರ ಸಂಜೆ ನಡೆದ ಸಮಾರಂಭದಲ್ಲಿ ಗುಜರಾತ್ ಕರಕುಶಲ ಉತ್ಸವ-2026ಕ್ಕೆ ಚಾಲನೆ ನೀಡಲಾಯಿತು.ಕೈಮಗ್ಗ ಮತ್ತು ಜವಳಿ ಇಲಾಖೆ, ಕರ್ನಾಟಕ ಸರ್ಕಾರದ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕ ಎ. ಬಿ. ಬಸವರಾಜು ಉತ್ಸವವನ್ನು ಉದ್ಘಾಟಿಸಿದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಎಚ್. ಆರ್. ರಾಜಪ್ಪ, ಇಂಡೆಕ್ಸ್÷್ಟ-ಸಿ, ಗುಜರಾತ್‌ನ ಪ್ರಧಾನ ವ್ಯವಸ್ಥಾಪಕ (ಹಾತ್) ಹಾಗೂ…