Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರು ಪ್ರತಿ ದಿನ ಸೈಕ್ಲಿಂಗ್ ಮಾಡಬೇಕು; ಎಸಿಪಿ ಚಂದ್ರಶೇಖರ್

ಮೈಸೂರು: ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರು ಪ್ರತಿ ದಿನ ಸೈಕ್ಲಿಂಗ್ ಅಭ್ಯಾಸ ಮಾಡಬೇಕು ನಗರ ಎಸಿಪಿ ಚಂದ್ರಶೇಖರ್ ತಿಳಿಸಿದರು.ಬುಧವಾರ ಸರ್ಕಾರಿ ಯುವ ಹಾಸ್ಸಲ್ ಮೈ ಭಾರತ್ ಮೈಸೂರು, ಮೈಸೂರು ಅಥ್ಲೀಟ್ಸ್ ಕ್ಲಬ್, ರಾಯಲ್ ರೈಡರ್ಸ್ ಮೈಸೂರು, ಸೈಕ್ಲೋಪೀಡಿಯಾ ಮೈಸೂರು ಹಾಗೂ ಮೈಸೂರು ಸೈಕ್ಲಿಂಗ್ ತಂಡಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬೈಸಿಕಲ್ ದಿನದ ಸೈಕಲ್ ರ‍್ಯಾಲಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು,ದೈಹಿಕ ಆರೋಗ್ಯ, ಶಿಸ್ತು ಹಾಗೂ ಪರಿಸರ ಸ್ನೇಹಿ ಜೀವನಶೈಲಿಯ ಮಹತ್ವವನ್ನು ಒತ್ತಿಹೇಳಿದರು. ಯುವಜನತೆ ಸೇರಿದಂತೆ…

Read More

ಜೂನ್ 7ರಂದು ಮೈಸೂರು ಯೋಗ ಒಕ್ಕೂಟದ 25ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

*ಶರೀರ ಶಾಸ್ತç, ಚಿಕಿತ್ಸಾ ಯೋಗ, ಸ್ವರ ಯೋಗ ಗೋಷ್ಠಿಗಳು ಮತ್ತು ಒಕ್ಕೂಟದ ಸದಸ್ಯರಿಗೆ ಗೌರವ ಸಮರ್ಪಣೆ ಮೈಸೂರು; ಮೈಸೂರು ಯೋಗ ಒಕ್ಕೂಟದ 25ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಜೂನ್ 7ರಂದು ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಕೆ.ಜಿ ದೇವರಾಜು ತಿಳಿಸಿದರು.ಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕೂಟದ ರಜತಮೋತ್ಸವ ಅಂಗವಾಗಿ ಆರೋಗ್ಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶರೀರ ಶಾಸ್ತç, ಚಿಕಿತ್ಸಾ ಯೋಗ, ಸ್ವರ ಯೋಗ ಗೋಷ್ಠಿಗಳು ಮತ್ತು ಒಕ್ಕೂಟದ ಸದಸ್ಯರಿಗೆ…

Read More

ನಾಡಿಗೆ ನಾಲ್ವಡಿ ಕೃಷ್ಣರಾಜರ ಕೊಡುಗೆ ಅಪಾರವಾಗಿದೆ; ಸಿ.ಎನ್.ಮಂಜೇಗೌಡ

ಮೈಸೂರು; ಅಭಿವೃದ್ಧಿಯ ಹರಿಕಾರರಾಗಿದ್ದ ಮೈಸೂರು ಸಂಸ್ಥಾನವನ್ನಾಳಿದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಈ ನಾಡಿಗೆ ನೀಡಿರುವ ಕೊಡುಗೆಗಳು ಅಪಾರವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಹೇಳಿದರು.ಮೈಸೂರಿನ ಅರಮನೆ ವರಹಾ ಗೇಟ್‌ನ ದಕ್ಷಿಣ ದ್ವಾರದ ಮುಂಭಾಗದಲ್ಲಿ ಕರ್ನಾಟಕ ಸೇನಾ ಪಡೆವತಿಯಿಂದ ಏರ್ಪಡಿಸಲಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು,ಹಿಂದುಳಿದ ವರ್ಗದ ಜನರಿಗೆ, ದಲಿತರಿಗೆ ಹಾಗೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದ ರಾಜರ್ಷಿ…

Read More

ಅಪಘಾತ ತಡೆಗಟ್ಟಲು ರಸ್ತೆಗಳ ಅಭಿವೃದ್ಧಿಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ ಜಿ

ಮೈಸೂರು; ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಅಪಘಾತಗಳು ಹೆಚ್ಚಾಗಿ ಸಂಭವಿಸುವ 120 ಬ್ಲಾ÷್ಯಕ್ ಸ್ಪಾಟ್ ಗಳನ್ನು ಪಟ್ಟಿ ಮಾಡಲಾಗಿದೆ. ಸದರಿ ರಸ್ತೆಗಳಲ್ಲಿ ಅಪಘಾತ ತಡೆಗಟ್ಟುವ ರೀತಿಯಲ್ಲಿ ಯೋಜನೆ ರೂಪಿಸಲಾಗಿರುತ್ತದೆ. ಸದರಿ ರಸ್ತೆಗಳ ಅಭಿವೃದ್ಧಿಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ.ಜಿ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದರು. ರಸ್ತೆ ಅಪಘಾತಗಳಲ್ಲಿ ಸಾವು ಸಂಭವಿಸುವ ರಸ್ತೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ನಿಖರ ಕಾರಣಗಳನ್ನು ಪಟ್ಟಿ ಮಾಡಿಕೊಂಡು ಸರಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದರು.120 ಬ್ಲಾ÷್ಯಕ್ ಸ್ಪಾಟ್ ರಸ್ತೆಗಳ…

Read More

ಜಯದೇವದಿಂದ ಚಾಮರಾಜನಗರದಲ್ಲಿ ವಾರಕ್ಕೊಮ್ಮೆ ಹೃದಯ ತಪಾಸಣೆ ಮಾಡಲು ಚಿಂತನೆ : ಡಾ. ಬಿ. ದಿನೇಶ್

ಮೈಸೂರು: ಜಯದೇವ ಹೃದ್ರೋಗ ಸಂಸ್ಥೆಯಿAದ ಚಾಮರಾಜನಗರ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಚಾಮರಾಜನಗರದಲ್ಲಿ ವಾರಕ್ಕೊಮ್ಮೆ ಸಾರ್ವಜನಿಕರಿಗೆ ಹೃದಯ ತಪಾಸಣೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಬಿ. ದಿನೇಶ್ ತಿಳಿಸಿದರು.ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಗಡಿನಾಡು ಚಾಮರಾಜನಗರದಲ್ಲಿ ಸಣ್ಣ ಹೃದ್ರೋಗ ಘಟಕವನ್ನು ಪ್ರಾರಂಭ ಮಾಡಿ ಪ್ರತಿ ಸೋಮವಾರ ಅಥವಾ ಬುಧವಾರ ಹೃದಯ ಸಮಸ್ಯೆ ಇರುವವರಿಗೆ ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆತಂದು ಚಿಕಿತ್ಸೆ ನೀಡಲಾಗುವುದು ಎಚಿದÀರು.ಮಳೆಗಾಲ ಪ್ರಾರಂಭವಾಗುತ್ತಿರುವುದರಿAದ…

Read More

ಇದೋ ನೋಡಿ ಚಿತ್ರ ನಟ ದರ್ಶನ್‌ರ ಹೊಸ ಲುಕ್ ಪೋಟೋ !

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಚಿತ್ರ ನಟ ದರ್ಶನ್ ಅವರ ಹೊಸ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ಸಿನಿರಂಗದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಹೊರಬಿದ್ದ ಈ ಚಿತ್ರದಲ್ಲಿ ದರ್ಶನ್ ಅವರು ಸರಳ ನೀಲಿ ಬಣ್ಣದ ಹುಡಿ ಧರಿಸಿದ್ದು, ಕ್ಯಾಮೆರಾ ಕಡೆಗೆ ತಿರುಗಿ ನೋಡುವ ಭಂಗಿಯಲ್ಲಿ ಕಾಣಿಸಿಕೊಂಡಿದ್ದಾರೆ.ಫೋಟೋದಲ್ಲಿ ದರ್ಶನ್ ಅವರ ಮುಖದಲ್ಲಿ ಗಂಭೀರತೆ ಮತ್ತು ಮೌನದ ಭಾವನೆ ಎದ್ದು ಕಾಣುತ್ತದೆ. ಇತ್ತೀಚಿನ ವರ್ಷಗಳ ಘಟನೆಗಳು ಹಾಗೂ ಕಾನೂನು ಹೋರಾಟಗಳ…

Read More

ಕಳುವಾಗಿದ್ದ 35 ಲಕ್ಷರೂ ಮೌಲ್ಯದ ಮೊಬೈಲ್‌ಗಳ ಪತ್ತೆ; ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ

ಮೈಸೂರು: ಜಿಲ್ಲೆಯ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಈವರೆಗೆ ಬೇರೆ ಬೇರೆ ಕಂಪನಿಯ ಸುಮಾರು 35,00,000 ರೂ ಬೆಲೆಬಾಳುವ ಒಟ್ಟು 173 ಅಂಡ್ರಾಯಿಡ್ ಮೊಬೈಲ್ ಫೋನ್, ಐಫೋನ್ ಗಳನ್ನು ಪತ್ತೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.ಮಂಗಳವಾರ ನಗರದ ತಮ್ಮ ಕಚೇರಿಯಲ್ಲಿ ಪತ್ತೆ ಮಾಡಲಾದ ಮೊಬೈಲ್‌ಗಳನ್ನು ಅವುಗಳ ವಾರಸುದಾರರಿಗೆ ಹಿಂತಿರುಗಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ನಾಗರೀಕರು ತಮ್ಮ ಮೊಬೈಲ್ ಕಳೆದುಹೋದ ತಕ್ಷಣ ಸಿಇಐಆರ್ ಪೋರ್ಟಲ್ ನಲ್ಲಿ ದೂರು ದಾಖಲಿಸುವುದರಿಂದ ಸುಲಭವಾಗಿ ಮೊಬೈಲ್…

Read More

ಯತೀಂದ್ರ ಸಿದ್ದರಾಮಯ್ಯರನ್ನು ಡಿಸಿಎಂ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ಉಪಮುಖ್ಯಮಂತ್ರಿ ಮಾಡಬೇಕೆಂದು ಎಂದು ಆಗ್ರಹಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿ ಕೆಲಕಾಲ ಘೋಷಣೆ ಕೂಗಿದರು.ಪ್ರತಿಭಟನೆಯಲ್ಲಿ ಯೂತ್ ಕಾಂಗ್ರೆಸ್ ನ ಪದಾಧಿಕಾರಿಗಳು, ಮುಖಂಡರುಗಳು ಭಾಗವಹಿಸಿದ್ದರು.

Read More

ಎಸ್.ಸಿ.ಬಸವರಾಜುಗೆ ವಿಧಾನ ಪರಿಷತ್ ಸ್ಥಾನ ಮತ್ತು ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ದೇವರಾಜ್ ಟಿ.ಕಾಟೂರು ಒತ್ತಾಯ

ಮೈಸೂರು; ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ಹಾಗೂ ಕಾಂಗ್ರೆಸ್ ಮುಖಂಡ ಎಸ್.ಸಿ.ಬಸವರಾಜು ಅವರಿಗೆ ವಿಧಾನಪರಿಷತ್ ಸ್ಥಾನ ನೀಡಬೇಕೆಂದು ಕರ್ನಾಟಕ ರಾಜ್ಯ ನಾಯಕರ ಯುವ ಸೇನೆಯ ರಾಜ್ಯಾಧ್ಯಕ್ಷ ದೇವರಾಜ್ ಟಿ.ಕಾಟೂರು ಒತ್ತಾಯಿಸಿದರು.ಮಂಗಳವವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ವಿಭಾಗದ ನಾಯಕ ಸಮಾಜದವರಿಗೆ ಸ್ವಾತಂತ್ರ ನಂತರದಿAದಲ್ಲೂ ಕಾಂಗ್ರೇಸ್ ಪಕ್ಷದಿಂದ ವಿಧಾನ ಪರಿಷತ್ ಸ್ಥಾನ ನೀಡದೆ, ರಾಜಕೀಯ ಅನ್ಯಾಯ ಮಾಡಿರುವ ಕಾಂಗ್ರೇಸ್ ಹೈಕಮಾಂಡ್, ಈ ಅನ್ಯಾಯವನ್ನು…

Read More

ವಿ.ಎಸ್.ಉಗ್ರಪ್ಪರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಲು ಒತ್ತಾಯ ದ್ಯಾವಪ್ಪ ನಾಯಕ

ಮೈಸೂರು; ಮಾಜಿ ಸಂಸದ ವಿ.ಎಸ್. ಉಗ್ರಪ್ಪರವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಬೇಕೆಂದು ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ಅಧ್ಯಕ್ಷ ದ್ಯಾವಪ್ಪ ನಾಯಕ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿ.ಎಸ್. ಉಗ್ರಪ್ಪ ಅವರು, ಸುಮಾರು 35 ವರ್ಷಗಳಿಂದ ಸಕ್ರಿಯವಾಗಿ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದು, ವಿಧಾನ ಪರಿಷತ್ ಸದಸ್ಯರಾಗಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ದಕ್ಷತೆಯಿಂದ, ಪ್ರಾಮಾಣಿಕತೆಯಿಂದ ಜನಪರವಾಗಿ ಧ್ವನಿಯೆತ್ತಿದ್ದರು. ನಾಯಕ ಹಾಗೂ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಸಮಿತಿಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಮಹಿಳೆಯ…

Read More