ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ: ಗೊರಹಳ್ಳಿ ಜಗದೀಶ್
ದೊಡ್ಡಕಮರಹಳ್ಳಿ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ ಪಿರಿಯಾಪಟ್ಟಣ : ಶಿಕ್ಷಕರು ನೀಡುವ ಶಿಕ್ಷಣ, ಸಂಸ್ಕಾರ ಹಾಗೂ ಮಾರ್ಗದರ್ಶನವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಪಿರಿಯಾಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಕಟ ಪೂರ್ವ ಅಧ್ಯಕ್ಷ ಗೊರಹಳ್ಳಿ ಜಗದೀಶ್ ಹೇಳಿದರು. ತಾಲೂಕಿನ ದೊಡ್ಡಕಮರಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ 2006-07ನೇ ಸಾಲಿನ ವಿದ್ಯಾರ್ಥಿಗಳಿಂದ ಆಯೋಜಿಸಿದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ಕಲಿಸುವ ಪಾಠಗಳು ತರಗತಿಗೆ ಮಾತ್ರ ಸೀಮಿತವಾಗದೆ, ಜೀವನದ…