Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೇಲುಸೇತುವೆ ಕಾಮಗಾರಿಯನ್ನು ಗುಣಮಟ್ಟ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

ಮೈಸೂರು : ನಗರದಲ್ಲಿ ಪ್ರಗತಿಯಲ್ಲಿರುವ ಮೇಲುಸೇತುವೆ ನಿರ್ಮಾಣ ಕಾಮಗಾರಿಯನ್ನು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಈ ವೇಳೆ ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಅನುಷ್ಠಾನದ ವಿವಿಧ ಅಂಶಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿದರು. ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಾಮಗಾರಿ ನಡೆಯುವ ಅವಧಿಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಸಂಚಾರ ತೊಂದರೆ ಅಥವಾ ಅನಾನುಕೂಲ ಉಂಟಾಗದAತೆ ಸೂಕ್ತ ಮುನ್ನೆಚ್ಚರಿಕೆ…

Read More

ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಜಿಲ್ಲೆಯಾದ್ಯಂತ ವಿಶೇಷ ಕ್ರಮ: ಆರ್. ಐಶ್ವರ್ಯ

ಮೈಸೂರು: ಕೌಟುಂಬಿಕ ಕಲಹ, ವರದಕ್ಷಿಣೆ ಕಿರುಕುಳ, ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಿಂದ ನೊಂದ ಮಹಿಳೆಯರಿಗೆ ನೆರವಾಗಲು ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ 24ಘಿ7 ಗಂಟೆಯೂ ಉಚಿತ ಕಾನೂನು ಸಲಹೆ ಮತ್ತು ಆಪ್ತಸಮಾಲೋಚನೆ ನೀಡಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಹೇಳಿದರು.ಮಂಗಳವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಅಪರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಸಖಿ ಒನ್…

Read More

ದಸರಾದಲ್ಲಿ ಪಾಲ್ಗೊಳ್ಳಲಿರುವ ಆನೆಗಳಿಗೆಲ್ಲಾ ಹೃದಯ, ಆರೋಗ್ಯ ತಪಾಸಣೆ

*20 ಆನೆಗಳ ಆರೋಗ್ಯವನ್ನು ತಪಾಸಣೆ ನಡೆಸಿದ ವೈದ್ಯರು, ಅರಣ್ಯ ಇಲಾಖೆಯ ಅಧಿಕಾರಿಗಳ ತಂಡಮೈಸೂರು: ಈ ಬಾರಿ ನಡೆಯಲಿರುವ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯ ಆಯ್ಕೆ ಪ್ರಕ್ರಿಯೆಯನ್ನು ಅರಣ್ಯ ಇಲಾಖೆ ಆರಂಭಿಸಿದ್ದು, ಆನೆಗಳ ಆರೋಗ್ಯವನ್ನು ತಪಾಸಣೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಆನೆಗಳ ಹೃದಯ ತಪಾಸಣೆಗಾಗಿ ಇಸಿಜಿ ಪರೀಕ್ಷೆ ನಡೆಸಲಾಗಿದೆ.ಮೊದಲ ಹಂತವಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯರ ತಂಡ, ತಮ್ಮ ಸಿಬ್ಬಂದಿಗಳೊ0ದಿಗೆ ಮಡಿಕೇರಿಯ ಮತ್ತಿಗೋಡು ಹಾಗೂ ದುಬಾರೆ, ಬಂಡೀಪುರದ ರಾಂಪುರ ಆನೆ ಶಿಬಿರಗಳಿಗೆ…

Read More

ಪರಿಶಿಷ್ಟಪಂಗಡಕ್ಕೆ ಶೇ 7ರಷ್ಟು ಮೀಸಲಾತಿ ನೀಡದಿದ್ದರೆ ಸರ್ಕಾರ ಉರುಳಿಸುವ ತನಕ ಹೋರಾಟ; ಮಾಜಿ ಸಚಿವ ಶ್ರೀರಾಮುಲು ಎಚ್ಚರಿಕೆ

ಮೈಸೂರು; ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಶೇ 7ಕ್ಕೇರಿಸಿ ಆದೇಶ ಹೊರಡಿಸಲಾಗಿತ್ತು. ಅದನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಬೇಕು. ಇಲ್ಲದಿದ್ದರೆ ಸರ್ಕಾರ ಉರುಳಿಸುವ ತನಕ ಹೋರಾಟವನ್ನು ನಡೆಸಲಾಗುವುದು ಎಂದು ಮಾಜಿ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದರು. ಮಂಗಳವಾರ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದಿಂದ ಏರ್ಪಡಿಸಲಾಗಿದ್ದ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚಿಸಿದಾಗಲೇ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿಯನ್ನು…

Read More

ದೇಶಕ್ಕೆ ಆಹಾರ ಭದ್ರತೆಯನ್ನು ಹಾಕಿಕೊಟ್ಟರು ಬಾಬು ಜಗಜೀವನ್ ರಾಮ್; ಎಸ್.ಜಯಪ್ರಕಾಶ್

ಮೈಸೂರು; ದೇಶಕ್ಕೆ ಆಹಾರ ಭದ್ರತೆಯನ್ನು ಹಾಕಿಕೊಟ್ಟರು ಬಾಬು ಜಗಜೀವನ್ ರಾಮ್ ರವರು ಎಂದು ಚಿತ್ರ ನಟ ಹಾಗೂ ಬಿಜೆಪಿ ಮುಖಂಡ ಎಸ್.ಜಯಪ್ರಕಾಶ್ (ಜೆಪಿ) ಹೇಳಿದರು.ಬಾಬು ಜಗಜೀವನ್ ರಾಮ್ ರವರ ಜಯಂತಿ ಪ್ರಯುಕ್ತ ಸೋಮವಾರ ನಗರದ ರೈಲು ನಿಲ್ದಾಣದ ಬಳಿಯಿರುವ ಬಾಬು ಜಗಜೀವನ್ ರಾಮ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ದೇಶದಲ್ಲಿ ಆಹಾರ ಕೊರತೆ ತೀವ್ರವಾಗಿದ್ದ ಕಾಲದಲ್ಲಿ ದೇಶದ ಉಪಪ್ರದಾನಿಯಾಗಿದ್ದ ಬಾಬು ಜಗಜೀವನ್ ರಾಮ್ ಅವರು ದೇಶದ್ಯಾಂತ ಹಸಿರು ಕ್ರಾಂತಿಯನ್ನು…

Read More

ಸಾಮಾಜಿಕ, ಆರ್ಥಿಕ ಹಾಗೂ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಅವಶ್ಯಕ ; ಪ್ರೊ. ಎಂ. ಆರ್. ಗಂಗಾಧರ್

ಮೈಸೂರು; ಸಾಮಾಜಿಕ, ಆರ್ಥಿಕ ಹಾಗೂ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಅವಶ್ಯಕ ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಎಂ. ಆರ್. ಗಂಗಾಧರ್ ಹೇಳಿದರು. ಸೋಮವಾರ ಮೈಸೂರಿನ ಸರಸ್ವತಿಪುರಂ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜೋತಿ ಸಭಾಂಗಣದಲ್ಲಿ ಏರ್ಪಡಿಸಿದ್ದ 2026-27ರ ದೀಕ್ಷಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ, ಆರ್ಥಿಕ ಹಾಗೂ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಅವಶ್ಯಕ ಎಂದು ತಿಳಿಸಿದರು. ದೀಕ್ಷಾರಂಭವು ಜ್ಞಾನದ ಆರಂಭ, ಜೊತೆಗೆ ಕಾಲೇಜನ್ನು ಪರಿಚಯಿಸುವುದು, ವಿದ್ಯಾರ್ಥಿಗಳನ್ನು ಒಟ್ಟುಗೂಡಿಸುವುದು ಹಾಗೂ ಜ್ಞಾನದ ಜೊತೆಗೆ ಕೌಶಲ್ಯ ಅಭಿವೃದ್ಧಿ ಮತ್ತು…

Read More

ಪಿರಿಯಾಪಟ್ಟಣ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

​ಅಧ್ಯಕ್ಷರಾಗಿ ಬಲರಾಂ, ಕಾರ್ಯದರ್ಶಿಯಾಗಿ ಬಿ.ಎಸ್.ಹರೀಶ್ ಪಿರಿಯಾಪಟ್ಟಣ:ಪಿರಿಯಾಪಟ್ಟಣ ರೋಟರಿ ಮಿಡ್ ಟೌನ್ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಪಟ್ಟಣದ ಕನಕ ಭವನದಲ್ಲಿ ನೆರವೇರಿತು. ಪಿರಿಯಾಪಟ್ಟಣ ರೋಟರಿ ಮಿಡ್ ಟೌನ್ ನೂತನ ಅಧ್ಯಕ್ಷರಾಗಿ ಕಿರನಲ್ಲಿ ಬಲರಾಮ ಕಾರ್ಯದರ್ಶಿಯಾಗಿ ಬಿ.ಎಸ್.ಹರೀಶ್ ಅಧಿಕಾರ ಸ್ವೀಕರಿಸಿದರು. ನೂತನ ಪದಾಧಿಕಾರಿಗಳಿಗೆ ಯಶಸ್ವಿನಿ ಸೋಮಶೇಖರ್ ಪ್ರಮಾಣವಚನ ಬೋಧಿಸಿ ಮಾತನಾಡಿದ ಅವರು ರೋಟರಿ ಸಂಸ್ಥೆಯು ಜಗತ್ತಿನಾದ್ಯಂತ ಮಾನವೀಯ ಸೇವೆಗೆ ಹೆಸರಾಗಿದೆ. ನೂತನ ಪದಾಧಿಕಾರಿಗಳು ಸೇವೆಯ ಮೂಲಕ ಸಮಾಜದಲ್ಲಿ ಶಾಶ್ವತ ಮತ್ತು ಸಕಾರಾತ್ಮಕ ಬದಲಾವಣೆ ತರುವ ಕಾರ್ಯಗಳಲ್ಲಿ…

Read More

ಹವ್ಯಾಸಿ ರಂಗಭೂಮಿಯೇ ರಂಗಚಳುವಳಿಯ ಜೀವಾಳ: ಪ್ರಸಾದ್ ಕುಂದೂರುಸಿಜಿಕೆ ನೆನಪಿನ ಗ್ರೀಷ್ಮ ರಂಗೋತ್ಸವ2026’ಕ್ಕೆ ಅದ್ಧೂರಿ ಚಾಲನೆ

ಮೈಸೂರು: ವೃತ್ತಿಪರ ರೆಪರ್ಟರಿಗಳ ಕೊಡುಗೆ ಮಹತ್ವದ್ದಾಗಿದ್ದರೂ, ರಂಗಚಳುವಳಿಯ ಉತ್ಸಾಹ, ಜೀವಂತಿಕೆ ಮತ್ತು ಸೃಜನಶೀಲತೆಯನ್ನು ಇಂದಿಗೂ ಉಳಿಸಿಕೊಂಡು ಬಂದಿರುವುದು ಹವ್ಯಾಸಿ ರಂಗಭೂಮಿಯೇ ಎಂದು ಹಿರಿಯ ರಂಗಕರ್ಮಿ ಹಾಗೂ ನಿರಂತರ ಫೌಂಡೇಶನ್ ನಿರ್ದೇಶಕ ಪ್ರಸಾದ್ ಕುಂದೂರು ಹೇಳಿದರು. ನಗರದ ರಂಗಾಯಣದ ಭೂಮಿಗೀತ ರಂಗಮAದಿರದಲ್ಲಿ ಕರ್ನಾಟಕ ಸರ್ಕಾರದ ರಂಗಾಯಣ ಸಂಸ್ಥೆ ಆಯೋಜಿಸಿರುವಸಿಜಿಕೆ ನೆನಪಿನ ಗ್ರೀಷ್ಮ ರಂಗೋತ್ಸವ2026’ನ್ನು ಉದ್ಘಾಟಿಸಿ ಮಾತನಾಡಿದ ಅವರು, ರಂಗಾಯಣದ ಆರಂಭಿಕ ದಿನಗಳನ್ನು ಸ್ಮರಿಸಿ, ಬಿ.ವಿ. ಕಾರಂತ ಅವರು ವೃತ್ತಿಪರ ರೆಪರ್ಟರಿಯ ಜೊತೆಗೆ ಹವ್ಯಾಸಿ ತಂಡಗಳಿಗೂ ಸಮಾನ ಗೌರವ ನೀಡಿದ್ದರು….

Read More

ಶ್ರೀ ರಾಘವೇಂದ್ರ ಸ್ವಾಮಿಗಳ ಪಂಚಲೋಹ ಶಿಲಾ ಪ್ರತಿಷ್ಠಾಪನೆ

ಮೈಸೂರು; ಇಲ್ಲಿನ ರಾಮಕೃಷ್ಣ ನಗರದ ವಿವೇಕಾನಂದ ರಸ್ತೆಯಲ್ಲಿರುವ ಶ್ರೀನಿವಾಸ ದೇವಸ್ಥಾನ ಆವರಣದಲ್ಲಿ ಶ್ರೀ ರಾಘವೇಂದ್ರಸ್ವಾಮಿಗಳ ಪಂಚಲೋಹ ಶಿಲಾ ಪ್ರತಿಷ್ಠಾಪನಾ ಮಹೋತ್ಸವವು ಸೋಮವಾರ ನೆರವೇರಿತು.ಬೆಳಿಗ್ಗೆಯಿಂದ ದೇವರಿಗೆ ಅಭಿಷೇಕ, ಹೂವಿನ ಅಲಂಕಾರ, ಗಣಪತಿ ನವಗ್ರಹ ಹೋಮ, ವಿಶೇಷ ವೇದಮಂತ್ರಗಳೊAದಿಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಪಂಚಲೋಹ ಶಿಲಾ ಪ್ರತಿಷ್ಠಾಪನೆಯನ್ನು ವಿದ್ವಾನ್ ನಿತ್ಯಾಗ್ನಿ ಹೋತ್ರಿ ಶ್ರೀದಾಮೋದರಾವಾರ್ಯ ಬಾಜಪೇಯಿ ಅವರ ನೇತೃತ್ವದಲ್ಲಿ ಜರುಗಿತು.ದೇಸ್ಥಾನದ ಅಧ್ಯಕ್ಷ ಹರೀಶ್‌ರಾವ್, ಟ್ರಸ್ಟಿಗಳಾದ ಸುಧಾರಾವ್, ಗುರುರಾಜ್‌ರಾವ್, ದಾನಿಗಳಾದ ಉದ್ಯಮಿ ಆನಂದ್ ಹಾಗೂ ನೂರಾರು ಭಕ್ತಾಧಿಗಳು ಪ್ರಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಭಕ್ತಾಧಿಗಳಿಗೆ ಪ್ರಸಾದವಾಗಿ…

Read More