ಪ್ರಾಧ್ಯಾಪಕರು ಅಪ್ಡೇಟ್ ಆಗುತ್ತಾ ಹೋದರೆ ಮಾತ್ರ ಪರಿಪೂರ್ಣ ಜ್ಞಾನವನ್ನು ವಿದ್ಯಾರ್ಥಿ ಸಮೂಹಕ್ಕೆ ನೀಡಬಹುದು
ಮೈಸೂರು; ಪ್ರಾಧ್ಯಾಪಕ ವೃತ್ತಿಯಲ್ಲಿರುವವರು ಪ್ರತಿ ದಿನ ಅಧ್ಯಯನ ಮಾಡುತ್ತಾ ಹೊಸ ಹೊಸದನ್ನು ಕಲಿಯುತ್ತಾ ಕಾಲ ಕಾಲಕ್ಕೆ ಅಪ್ಡೇಟ್ ಆಗುತ್ತಾ ಹೋದರೆ ಮಾತ್ರ ಪರಿಪೂರ್ಣ ಜ್ಞಾನವನ್ನು ವಿದ್ಯಾರ್ಥಿ ಸಮೂಹಕ್ಕೆ ವಿಸ್ತರಿಸುತ್ತಾ ಹೋಗಬಹುದೆಂದು ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಎನ್. ನಾಗರಾಜು ತಿಳಿಸಿದರು.ನಗರದ ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಏರ್ಪಡಿಸಿದ್ದ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷಾ ಉಚಿತ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪದವಿಯ ಅಂಕಗಳು ಈಗ ಉದ್ಯೋಗಕ್ಕೆ ಮಾನದಂಡವಾಗಿ ಉಳಿದಿಲ್ಲ. ಬದಲಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹತೆಯಾಗಿದೆ…