Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜೂನ್ 28 ರಿಂದ ಜುಲೈ 1 ರವರೆಗೆ ಪಲ್ಸ್ ಪೋಲಿಯೋ ಅಭಿಯಾನ

5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ: ಜಿ. ಲಕ್ಷ್ಮಿ ಕಾಂತ ರೆಡ್ಡಿಮೈಸೂರು; ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿ ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ ತಿಳಿಸಿದರು.ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಸಿದ್ಧತಾ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಶೇಕಡಾ ನೂರರಷ್ಟು ಯಶಸ್ವಿಗೊಳಿಸಲು, ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ…

Read More

ಕಾಯ್ದೆಯಡಿ ನೋಂದಣಿಯಾಗದ ಡಿ-ಅಡಿಕ್ಷನ್ ಕೇಂದ್ರಗಳ ವಿರುದ್ಧ ಕ್ರಮ: ಜಿ. ಲಕ್ಷ್ಮಿಕಾಂತ್ ರೆಡ್ಡಿ

ಮೈಸೂರು; ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವ್ಯಸನ ವಿಮುಕ್ತ ಕೇಂದ್ರಗಳು ಕಡ್ಡಾಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಅಡಿಯಲ್ಲಿ ನೋಂದಣಿಯಾಗಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಎಚ್ಚರಿಕೆದರು.ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ನೋಂದಣಿ ಯಾಗದೆ ನಡೆಸುತ್ತಿರುವ ವ್ಯಸನ ವಿಮುಕ್ತಿ ಕೇಂದ್ರಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ಸ್ಪಷ್ಟ ನಿರ್ದೇಶನಗಳನ್ನು ನೀಡಿದರು.ಜಿಲ್ಲೆಯಲ್ಲಿರುವ ಪ್ರತಿಯೊಂದು…

Read More

ಹಗಲು ಹೊತ್ತಿನಲ್ಲಿಯೂ ವಾಹನಗಳಲ್ಲಿ ಲೈಟ್ ಹಾಕಿಕೊಂಡು ಓಡಿಸುತ್ತಾರೆ ಗೊತ್ತಾ !

ಹಗಲು ಹೊತ್ತಿನಲ್ಲಿಯೂ ಈತ ಬೈಕ್, ಕಾರ್‌ನಲ್ಲಿ ಲೈಟ್ ಹಾಕಿಕೊಂಡು ಹೋಗುತ್ತಿದ್ದನ್ನೆಲ್ಲಾ, ಇವನಿಗೆ ಗ್ಯಾನ ಇಲ್ವಾ ಎಂದು ಹೀಗೆಳೆಯುತ್ತಿರಾ. ಈ ರೀತಿ ನೀವು ಅಂದು ಕೊಂಡರೆ ಅದು ತಪ್ಪು. ಯಾಕೇಂದರೆ ಹೊಸ ವಿಷಯ ತಿಳಿದುಕೊಂಡಿಲ್ಲ ಎಂದು ಅರ್ಥ. ಹಾಗಾದರೆ ಯಾಕೇ ಲೈಟ್ ಹಾಕಿಕೊಂಡು ವಾಹನ ಓಡಿಸುತ್ತಾರೆ ಗೊತ್ತಾ.. ಇಲ್ಲಿ ಕೇಳಿ. ಹೊಸ ಬೈಕ್‌ಗಳಲ್ಲಿ ಇಂಜಿನ್ ಸ್ಟಾರ್ಟ್ ಆದ ತಕ್ಷಣ ಹೆಡ್‌ಲೈಟ್ ಆನ್ ಆಗಲು ‘ಆಟೋಮ್ಯಾಟಿಕ್ ಹೆಡ್‌ಲೈಟ್ ಆನ್’ ವ್ಯವಸ್ಥೆಯೇ ಕಾರಣ. ಈ ಹೆಡ್‌ಲೈಟ್ ಯಾಕೆ ಆಫ್ ಆಗಲ್ಲ? (ಆಟೋಮ್ಯಾಟಿಕ್…

Read More

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿರುವ ಜನರ ಬಡತನ ನಿರ್ಮೂಲನೆ ಮಾಡಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ; ಸಂಸದ ಯದುವೀರ್

ಮೈಸೂರು: ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿರುವ ಜನರ ಬಡತನ ನಿರ್ಮೂಲನೆ ಮಾಡಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಮಂಗಳವಾರ ನಗರದ ಕಾಡಾ ಸಾರ್ವಜನಿಕ ಕಚೇರಿ ಕಟ್ಟಡದ ಹೊರಾಂಗಣದಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ವಿವಿಧ ಜನಕಲ್ಯಾಣ ಹಾಗೂ ಪ್ರಗತಿಪರ ಯೋಜನೆಗಳ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಕರು,ಕಾರ್ಮಿಕರು,ರೈತರು,ಜನಸಾಮಾನ್ಯರಿಗೆ ಹಲವಾರು ಯೋಜನೆಗಳು ಅನುಷ್ಠಾನಗೊಂಡಿದ್ದರೂ ಕೇಂದ್ರದ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ಸಿಗದೆ ಬಳಸಿಕೊಳ್ಳುವ ಕೆಲಸವಾಗುತ್ತಿಲ್ಲ. ಹಾಗಾಗಿ…

Read More

ಅಕ್ರಮ ವಲಸಿಗರ ಕುರಿತು ಹಲವು ತಿಂಗಳ ಹಿಂದೆಯೇ ಮಾಹಿತಿ ಲಭ್ಯವಾಗಿದ್ದರೂ, ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ; ಮಾಜಿ ಸಂಸದ ಪ್ರತಾಪ್ ಸಿಂಹ

ಮೈಸೂರು: ರಾಜ್ಯದ ಆಂತರಿಕ ಸುರಕ್ಷತೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಅಕ್ರಮ ವಲಸಿಗರ ಕುರಿತು ಹಲವು ತಿಂಗಳ ಹಿಂದೆಯೇ ಮಾಹಿತಿ ಲಭ್ಯವಾಗಿದ್ದರೂ, ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದರು.ಮಂಗಳವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ರಮ ಬಾಂಗ್ಲಾದೇಶಿ ವಲಸಿಗರ ಆಗಮನ ಹೆಚ್ಚಾಗುತ್ತಿರುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳೇ ಕಾರಣ. ಗೃಹ ಸಚಿವರು ಹಾಗೂ ಬ್ರದರ್ ಎನ್ನುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇರುವವರೆಗೂ, ಈ ರೀತಿ ಅಕ್ರಮ ಬಾಂಗ್ಲಾ ವಲಸಿಗರು…

Read More

ಅಕ್ರಮ ಬಾಂಗ್ಲಾದೇಶಿ ವಲಸಿಗರ ಮಾಹಿತಿ ನೀಡಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧವೇ ಕೇಸ್ ದಾಖಲಿಸಿರುವುದನ್ನು ಖಂಡಿಸಿ ಪ್ರತಿಭಟನೆ

ಮೈಸೂರು: ನಗರದ ರೈಲು ನಿಲ್ದಾಣದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಮಾಹಿತಿ ನೀಡಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧವೇ ಕೇಸ್ ದಾಖಲಿಸಿರುವುದನ್ನು ಖಂಡಿಸಿ ಮಂಗಳವಾರ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ನೂರಾರು ಮಂದಿ ಪ್ರತಿಭಟನಾಕಾರರು, ರೈಲ್ವೆ ಪೊಲೀಸರು, ಪೊಲೀಸ್ ಇಲಾಖೆ ಹಾಗೂ ಗೃಹ ಇಲಾಖೆಯ ವಿರುದ್ಧ ನಾನಾ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಅಕ್ರಮ ವಲಸಿಗರ ವಿರುದ್ಧ ಸಮಗ್ರ ತನಿಖೆ ನಡೆಸದೆ, ಅವರನ್ನು ಹಿಡಿದುಕೊಟ್ಟ ಕಾರ್ಯಕರ್ತರ ಮೇಲೆಯೇ…

Read More

ಪೊಲೀಸರು ಗೃಹ ಸಚಿವರನ್ನು ಓಲೈಸುವ ಸಲುವಾಗಿ ಹಿಂದೂ ಪರ ಸಂಘಟನೆ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಾರೆ; ಸಂಸದ ಯದುವೀರ್

ಮೈಸೂರು: ಮೈಸೂರಿನ ರೈಲು ನಿಲ್ದಾಣದಲ್ಲಿ ರೈಲಿನಿಂದ ಬಂದ ಕೆಲವರನ್ನು ಬಾಂಗ್ಲಾ ದೇಶದ ಪ್ರಜೆಗಳೆಂದು ಶಂಕಿಸಿ ತಡೆದು, ಪರಿಶೀಲನೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಗೃಹ ಸಚಿವರನ್ನು ಓಲೈಸುವ ಸಲುವಾಗಿ ಹಿಂದೂ ಪರ ಸಂಘಟನೆ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಮೈಸೂರು ರೈಲ್ವೆ ಪೆÇಲೀಸರು ಹಿಂದೂ ಪರ ಸಂಘಟನೆ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿ ಮಂಗಳವಾರ ಮಾತನಾಡಿದ ಅವರು, ಅಕ್ರಮ ಬಾಂಗ್ಲಾ ವಲಸಿಗರು ಮೈಸೂರಿಗೆ…

Read More

ಸಂಗೀತ ಕ್ಷೇತ್ರದ ಸಾಧಕರಿಗೆ “ಕಲಾ ಸಾರಥಿ ಪ್ರಶಸ್ತಿ” ಪ್ರಧಾನ

ಮೈಸೂರು; ವಿಶ್ವ ಸಂಗೀತ ದಿನಾಚರಣೆ ಪ್ರಯುಕ್ತ ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ನಮೋ ಯೋಗ ಭವನದಲ್ಲಿ ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಸಂಗೀತ ಕ್ಷೇತ್ರದ ಸಾಧಕರಿಗೆ “ಕಲಾ ಸಾರಥಿ” ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕಲಾವಿದರಾದ ದೇವಾನಂದ ವರಪ್ರಸಾದ್, ಕಿರಗಸೂರು ಪುರುಷೋತ್ತಮ್,ವಿದುಷಿ ಆರ್ ಸಿ ರಾಜಲಕ್ಷ್ಮಿ, ಕೆ.ಎಸ್.ಭವತಾರಣಿ, ಶಿವು ಕುಮಾರ್( ಬಿಳಿಕೆರೆ), ಅವರಿಗೆ ಕಲಾ ಸಾರಥಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಸಮಾಜ ಸೇವಕ ರಘುರಾಂ ವಾಜಪೇಯಿ, ಸಂಗೀತ ಕ್ಷೇತ್ರದ ಕಲಾವಿದರ…

Read More

ಜೂ.25ರಂದು ವಿಶೇಷ ‘ಸ್ವಾತಿ’ ಪೂಜೆ

ಮೈಸೂರು; ನಗರದ ಕಾಳಿದಾಸ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಜೂ.25ರಂದು ಗುರುವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕ್ಕೊಳ್ಳಲಾಗಿದೆ. ಅಂದು ಬೆಳಿಗ್ಗೆ 8.30ಕ್ಕೆ ಸಂಕಲ್ಪ, 9.30ಕ್ಕೆ ಅಭಿಷೇಕ, 11ಕ್ಕೆ ಅಲಂಕಾರ, 12ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 1ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ. ಸಂಜೆ 8ಕ್ಕೆ ಪ್ರಾಕಾರೋತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ತಿಳಿಸಿದ್ದಾರೆ….

Read More