Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಜಯ ವಿಠಲ ವಿದ್ಯಾಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಮತ್ತು ವಿಶ್ವ ಸಂಗೀತ ದಿನದ ಸಂಭ್ರಮ

ಮೈಸೂರು; ಇಲ್ಲಿನ ವಿಜಯ ವಿಠಲ ವಿದ್ಯಾಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಮತ್ತು ವಿಶ್ವ ಸಂಗೀತ ದಿನವನ್ನು ಉತ್ಸಾಹದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಿಶೇಷ ಯೋಗ ಅಧಿವೇಶನದಲ್ಲಿ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳು, ಪ್ರಾಣಾಯಾಮ ಮತ್ತು ಧ್ಯಾನವನ್ನು ಅಭ್ಯಸಿಸಿದರು. ದೈಹಿಕ ಮತ್ತು ಮಾನಸಿಕ ಆರೋಗ್ಯದ ಮಹತ್ವವನ್ನು ಈ ಕಾರ್ಯಕ್ರಮ ಒತ್ತಿ ಹೇಳಿತು. ನಂತರ, ವಿಶ್ವ ಸಂಗೀತ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಗಾಯನ ಮತ್ತು ವಾದ್ಯ ಸಂಗೀತ ಪ್ರೌಢಿಮೆಯನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮವು ಶಾಲಾ ಆವರಣದಲ್ಲಿ…

Read More

ಮೈಸೂರು ರೈಲು ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡಿದ್ದ 34 ಮಂದಿ ಬಿಡುಗಡೆ

*ಘಟನೆಗೆ ಸಂಬಂಧಿಸಿದಂತೆ ಆರು ಮಂದಿಯ ವಿರುದ್ಧ ಕೇಸ್ ದಾಖಲುಮೈಸೂರು; ಶಂಕಿತ ಬಾಂಗ್ಲಾ ಪ್ರಜೆಗಳೆಂದು ಮೈಸೂರು ರೈಲು ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡಿದ್ದ 34 ಮಂದಿಯನ್ನು ವಿಚಾರಣೆ, ದಾಖಲೆಗಳ ಪರಿಶೀಲನೆಯ ಬಳಿಕ ಬಿಡುಗಡೆ ಮಾಡಲಾಗಿದೆ.ಜೂನ್ 21 ರಂದು ಬೆಳಿಗ್ಗೆ ಸುಮಾರು 10:30 ಗಂಟೆಗೆ, ರೈಲು ಸಂಖ್ಯೆ 22817 (ಹೌರಾ-ಮೈಸೂರು ಎಕ್ಸ್‍ಪ್ರೆಸ್) ಮೂಲಕ ಕೆಲವು ಶಂಕಿತ ವ್ಯಕ್ತಿಗಳು ಪ್ರಯಾಣಿಸುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ, ಮೈಸೂರು ಸರ್ಕಾರಿ ರೈಲ್ವೆ ಪೆÇಲೀಸ್ ಹಾಗೂ ರೈಲ್ವೆ ರಕ್ಷಣಾ ಪಡೆ ಅಧಿಕಾರಿಗಳು ರೈಲಿನಲ್ಲಿ ಪ್ರಯಾಣಿಕರ ಗುರುತಿನ…

Read More

ಯುವಕನೊಬ್ಬ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮೈಸೂರು: ಯುವಕನೊಬ್ಬ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಒಂದೇ ಕುಟುಂಬದ ಮೂರು ಜನರು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದಂಪತಿ ಶಿವಣ್ಣ-ನಾಗರತ್ನ ಹಾಗೂ ಅವರ ಮಗಳು ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡವರು. ಇದೇ ಗ್ರಾಮದ ಯುವಕ ಉಲ್ಲಾಸ್ ಗೌಡ ಎಂಬಾತ ಮಾನಸಿಕವಾಗಿ ಈ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದ ಆರೋಪಿ.ಮುಂದಿನ ಎರಡು ದಿನಗಳಲ್ಲಿ ಯುವತಿಯ ಮದುವೆಗೆ ಸಕಲ ಸಿದ್ಧತೆ…

Read More

ಬಿಜೆಪಿ ಎಸ್ ಟಿ ಮೋರ್ಚಾ ವತಿಯಿಂದ ಜುಲೈ 7 ರಂದು ಮೈಸೂರಿನಲ್ಲಿ ಜಾಗೃತಿ ಸಮಾವೇಶ

ಮೈಸೂರು; ರಾಜ್ಯ ಕಾಂಗ್ರೆಸ್ ಸರ್ಕಾರವು ಎಸ್ ಟಿ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಮಲತಾಯಿ ಧೋರಣೆ ತೋರುತ್ತ ಬಂದಿದ್ದು, ಎಸ್ ಟಿ ಸಮುದಾಯಕ್ಕೆ ಸಂವಿಧಾನ ಬದ್ಧ ಶೇ 7ರ ಮೀಸಲಾತಿ ಜಾರಿಯಾಗಲೇ ಬೇಕೆಂದು ರಾಜ್ಯ ಬಿಜೆಪಿ ಎಸ್‍ಟಿ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಸಮಾವೇಶವನ್ನು ಹಮ್ಮಿಕೊಂಡಿದೆ. ಅದರಂತೆ ಮೈಸೂರಿನಲ್ಲಿಯೂ ಜುಲೈ ರಂದು ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶವನ್ನು ಆಯೋಜಿಸಿದೆ. ಅದರ ಹಿನ್ನೆಲೆಯಲ್ಲಿ ಮೈಸೂರು ನಗರ ಹಾಗೂ ಗ್ರಾಮಾಂತರ ಎಸ್ ಟಿ ಮೋರ್ಚಾ ಪದಾಧಿಕಾರಿಗಳ ಮೈಸೂರಿನ ಬಿಜೆಪಿ ಪಕ್ಷದ ಕಛೇರಿಯಲ್ಲಿ…

Read More

ಯೋಗ ಮತ್ತು ಧ್ಯಾನ ಸಕಲರಿಗೂ ಅತೀ ಅವಶ್ಯವಾಗಿದೆ; ಶ್ರೀಹರಿ

ಮೈಸೂರು; ನಗರದ ಶಾರದಾ ವಿಲಾಸ ಫಾರ್ಮಸಿ ಕಾಲೇಜು ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ 12 ದಿನಗಳ ಯೋಗ ಶಿಬಿರದ ಸಮಾರೋಪ ಸಮಾರಂಭವನ್ನು ನಗರದ ಶಾರದಾ ವಿಲಾಸ ಮೈದಾನದಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದ ಗೌರವ ಅಥಿತಿಗಳಾಗಿ ಆಗಮಿಸಿದ್ದ ಜಿಎಸ್‍ಎಸ್ ಸಂಸ್ಥೆಯ ಮುಖ್ಯಸ್ಥ ಶ್ರೀಹರಿ ಮಾತನಾಡಿ, ಯೋಗ ಮತ್ತು ಧ್ಯಾನ ಸಕಲರಿಗೂ ಅತೀ ಅವಶ್ಯವಾಗಿದೆ. ಭಾರತದಲ್ಲಿ ಮಾತ್ರವಲ್ಲ ಬೇರೆ ದೇಶಗಳಲ್ಲೂ ವ್ಯಾಪಕವಾಗಿ ಯೋಗ ಅಭ್ಯಾಸ ಮಾಡಲಾಗುತ್ತಿದ್ದು ಆರೋಗ್ಯ ವರ್ಧನೆಗೆ ತುಂಬಾ ಅನುಕೂಲ ಆಗಿದೆ. ಇದು ಕೇವಲ ದೈಹಿಕ ಕಸರತ್ತಾಗದೆ…

Read More

ಕಾಲಾವಕಾಶ ನೀಡದೆ ವ್ಯಾಪಾರ ಸ್ಥಗಿತ ಆದೇಶ ಸರಿಯಲ್ಲ; ಸಿ.ನಾರಾಯಣಗೌಡ

ಮೈಸೂರು: ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಒಂದು ಪಬ್‍ನಲ್ಲಿ ಸಂಭವಿಸಿದ ಅಗ್ನಿ ದುರಂತದ ಘಟನೆಯ ನಂತರ ಮೈಸೂರು ಮಹಾನಗರ ಪಾಲಿಕೆ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಏಕಾಏಕಿ ಅನೇಕ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳನ್ನು ಪರಿಶೀಲನೆ ನಡೆಸಿ, ಕೆಲವು ಸಂಸ್ಥೆಗಳನ್ನು ತಕ್ಷಣವೇ ಮುಚ್ಚಲು ಸೂಚಿಸಿರುವುದು ಉದ್ಯಮಿಗಳಿಗೆ ತೀವ್ರ ಸಂಕಷ್ಟವನ್ನು ಉಂಟುಮಾಡಿದೆ ಎಂದು ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೈಸೂರು ನಗರ ತನ್ನ ಸಾಂಸ್ಕೃತಿಕ ಪರಂಪರೆ ಮತ್ತು…

Read More

ಮೈಸೂರು ರೈಲ್ವೆ ವಿಭಾಗದಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಮೈಸೂರು; ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಅಂತರರಾಷ್ಟ್ರೀಯ ಯೋಗ ದಿನವನ್ನು ಇಂದು ಮೈಸೂರು ರೈಲ್ವೆ ಸಮುದಾಯ ಭವನದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಮಾತನಾಡಿ, ಆರೋಗ್ಯಕರ ಮತ್ತು ಸಮತೋಲನಯುತ ಸಮಾಜ ನಿರ್ಮಾಣದಲ್ಲಿ ಯೋಗದ ಮಹತ್ವವನ್ನು ತಿಳಿದರು. ಯೋಗವು ದೈಹಿಕ ಆರೋಗ್ಯ, ಮಾನಸಿಕ ಸಮತೋಲನ ಮತ್ತು ಆಂತರಿಕ ಶಾಂತಿಯನ್ನು ಉತ್ತೇಜಿಸುವ ಸಮಗ್ರ ವಿಧಾನವಾಗಿದ್ದು, ಸಮತೋಲನಯುತ ಹಾಗೂ ಅರ್ಥಪೂರ್ಣ ಜೀವನಶೈಲಿಗೆ ಸಹಕಾರಿಯಾಗಿದೆ ಎಂದು ಹೇಳಿದರು.ಇಂದಿನ ವೇಗದ ಮತ್ತು ಒತ್ತಡಭರಿತ ಜೀವನಶೈಲಿಯನ್ನು ಗಮನದಲ್ಲಿಟ್ಟುಕೊಂಡು, ಉತ್ತಮ ಆರೋಗ್ಯ, ಮಾನಸಿಕ…

Read More

ಕರಾಮುಕ್ತ ವಿವಿಯಲ್ಲಿ ಯೋಗ ದಿನಾಚರಣೆ

ಮೈಸೂರು; ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಕರಾಮುಕ್ತ ವಿವಿಯ ಡೀನ್ ಪೆÇ್ರ. ಎಂ ರಾಮನಾಥಂ ನಾಯುಡು ಮಾತನಾಡಿ,ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವ ಉಪಯೋಗ ವಿಶೀಷ್ಟತೆ ಬಗ್ಗೆ ತಿಳಿಸಿದರು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪತಂಜಲಿ ಯೋಗ ಶಿಕ್ಷಣ ಸಮಿತಿಯ ರಾಧ ಎಂ.ಡಿ ಮಾತನಾಡಿ, ಪ್ರಸ್ತುತ ವಿದ್ಯಾಮಾನಗಳಿಗೆ ಯೋಗ ಎಷ್ಟು ಅವಶ್ಯಕತೆ ಎಂಬುದನ್ನು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕುಲಸಚಿವ ಪೆÇ್ರ.ನವೀನ್ ಕುಮಾರ್ ಎಸ್ ಕೆ ಮಾತನಾಡಿ, ತಾಳ್ಮೆ, ಏಕಾಗ್ರತೆಗೆ ಯೋಗ ಎಷ್ಟು ಪರಿಣಾಮಕಾರಿ…

Read More

ಯೋಗದ ಮೂಲಕ ಸಮುದಾಯ ಸೌಹಾರ್ದತೆ:ಮೈಸೂರಿನ ಜೆ.ಪಿ.ನಗರದಲ್ಲಿ ಬೀದಿ ಮಕ್ಕಳು ಮತ್ತು ಮಹಿಳೆಯರಿಂದ `ಮನೆ ಮನೆಗೂ ಯೋಗ’ ಕಾರ್ಯಕ್ರಮ

ಮೈಸೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮೈಸೂರಿನ ಜೆ.ಪಿ.ನಗರ 2ನೇ ಹಂತದ 15ನೇ ಕ್ರಾಸ್, 24ನೇ ಮುಖ್ಯರಸ್ತೆಯಲ್ಲಿ ಇಂದು ಮನೆ ಮನೆಗೂ ಯೋಗ” ಎಂಬ ವಿಶಿಷ್ಟ ಸಮುದಾಯ ಯೋಗ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೀದಿ ಮಕ್ಕಳು, ಮಹಿಳೆಯರು, ಯುವಕರು ಹಾಗೂ ಸ್ಥಳೀಯ ನಿವಾಸಿಗಳು ಉತ್ಸಾಹದಿಂದ ಭಾಗವಹಿಸಿ ಯೋಗದ ಮೂಲಕ ಆರೋಗ್ಯ, ಸೌಹಾರ್ದತೆ ಮತ್ತು ಸಾಮಾಜಿಕ ಏಕತೆಯ ಸಂದೇಶವನ್ನು ಸಾರಿದರು. ಬೀದಿಯಲ್ಲಿಯೇ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ವಿಶ್ರಾಂತಿ ವಿಧಾನಗಳನ್ನು…

Read More

ಮೌನ ಹಾಗೂ ನಿರಂತರ ಪ್ರಯತ್ನವೇ ನಿಜವಾದ ಯೋಗ: ದತ್ತ ಪೀಠದ ಕಿರಿಯಶ್ರೀ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ

ಮೈಸೂರು: ಯೋಗದ ಮೊದಲನೇ ಲಕ್ಷಣವೇ ನಿಶ್ಯಬ್ದ ಮತ್ತು ಮೌನ. ಯಾವುದೇ ಕೆಲಸವನ್ನು ಆಯಾ ಕಾರ್ಯಕ್ಕೆ ತಕ್ಕಂತೆ ಶ್ರದ್ಧೆಯಿಂದ ಮಾಡುವುದೇ ನಿಜವಾದ ಯೋಗ ಎಂದು ಮೈಸೂರಿನ ಅವಧೂತ ದತ್ತ ಪೀಠದ ಕಿರಿಯ ಪೀಠಾಧಿಪತಿಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಹೇಳಿದರು.ವಿಶ್ವ ಯೋಗ ದಿನಾಚರಣೆ ಹಾಗೂ ವಿಶ್ವ ಸಂಗೀತ ದಿನಾಚರಣೆಯ ಅಂಗವಾಗಿ ಮೈಸೂರಿನ ಅವಧೂತ ದತ್ತ ಪೀಠದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಯೋಗಾಭ್ಯಾಸ ಹಾಗೂ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಆಶೀರ್ವಾದ ಹಾಗೂ ಆದೇಶದಂತೆ…

Read More