ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ
ಮೈಸೂರು: ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಎಸ್‌ಟಿ ಮೋರ್ಚಾ ಕೋಶಾಧ್ಯಕ್ಷರಾಗಿ ಕೆಲಸ ಮಾಡಿದ್ದರು. ಈಗ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.ಮೈಸೂರು ನಗರಪಾಲಿಕೆಯ ಸದಸ್ಯರಾಗಿ, ಹಣಕಾಸು ಸ್ಥಾಯಿ ಸಮಿತಿ, ವರ್ಕ್್ಸ ಕಮಿಟಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಶಿವಕುಮಾರ್. ಮಹಾಪೌರರಾಗಿಯೂ ಕೆಲಸ ನಿರ್ವಹಿಸಿದ್ದರು.