Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ಶೇಕಡ ನೂರರಷ್ಟು ಎಥನಾಲ್ ಬಳಕೆಗೆ ಆದೇಶ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ; ಕುರುಬೂರು ಶಾಂತಕುಮಾರ್

ಮೈಸೂರು; ಕಬ್ಬಿನಿಂದ ಹಾಗೂ ಕೃಷಿ ಉತ್ಪನ್ನಗಳಿಂದ ಉತ್ಪಾಧಿಸುವ ಎಥನಾಲ್‌ನ್ನು ಶೇಕಡ ನೂರರಷ್ಟು ಪೆಟ್ರೋಲ್. ಡೀಸೆಲ್‌ಗೆ ಪರ್ಯಾಯವಾಗಿ ಬಳಸಲು ಅನುಮತಿ ನೀಡಿರುವ ಕೇಂದ್ರ ಸರ್ಕಾರದ ಆದೇಶ ಸ್ವಾಗತರ್ಹವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 2006 ರಲ್ಲಿ ದಕ್ಷಿಣ ಭಾರತ ರಾಜ್ಯಗಳ ರೈತರ ಸಮಾವೇಶವನ್ನು ಮೈಸೂರಿನಲ್ಲಿ ನಡೆಸಿ ಕಬ್ಬಿನಿಂದ ಎಥನಾಲ್‌ನ್ನು ಉತ್ಪಾದಿಸಲು ಹಾಗೂ ಪೆಟ್ರೋಲ್ ಜೊತೆ ಮಿಶ್ರಣ ಮಾಡಲು ಅವಕಾಶ ನೀಡಬೇಕು. ಇದರಿಂದ ದೇಶ ಖರೀದಿಸುವ…

Read More

ಹಣ ಉಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಮಾಡುತ್ತಿದೆ; ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ

ಮೈಸೂರು: ರಾಜ್ಯ ಸರ್ಕಾರದ ಖಜಾನೆ ದಿವಾಳಿಯಾಗಿದೆ. ಹೀಗಾಗಿ ಹಣ ಉಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಮಾಡುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಟೀಕಿಸಿದರು.ಸೋಮವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ 8 ಲಕ್ಷ ಕೋಟಿರೂಗಳ ಸಾಲ ಮಾಡಿದೆ. ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿದೆ. ಗ್ಯಾರಂಟಿ ಯೋಜನೆಗಳಿಗೆಂದು ಹಣವನ್ನೆಲ್ಲಾ ಖರ್ಚು ಮಾಡಿದೆ. ಸರ್ಕಾರದ ಖಜಾನೆ ಬರ್ಬದ್ ಆಗಿದೆ. ಖಜಾನೆಯಲ್ಲಿ ಹಣವಿಲ್ಲದ ಕಾರಣ ಆಡಳಿತ ನಡೆಸಲು…

Read More

ಪರಿಸರ ದಿನಾಚರಣೆ ಅಂಗವಾಗಿ 6 ಮಂದಿಗೆ ಪರಿಸರ ಪ್ರೇಮಿ ಪ್ರಶಸ್ತಿ ಪ್ರದಾನ

ಮೈಸೂರು:ಅರಿವು ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ 6 ಮಂದಿಗೆ ಪರಿಸರ ಪ್ರೇಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜೂನ್ 17ರಂದು ಬೆಳಗ್ಗೆ 11.30 ಗಂಟೆಗೆ ಚಾಮುಂಡಿಪುರAನಲ್ಲಿರುವ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪರಿಸರದ ಬಗ್ಗೆ ಕಾಳಜಿ ಹೊಂದಿರುವ ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ಕಡಕೋಳ ಪಟ್ಟಣ ಪಂಚಾಯತ್ ಆರೋಗ್ಯ ನಿರೀಕ್ಷಿಕ ಮಂಜುನಾಥ್ ,ಪರಿಸರ ಪ್ರೇಮಿ ಕೃಷ್ಣಪ್ಪ (ಘಂಟಯ್ಯ),ಗಗನ್ ಗೌಡ,ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್, ಶಿಕ್ಷಕಿ ರೇಣುಕಾ ಅವರಿಗೆ ಪರಿಸರ ಪ್ರೇಮಿ…

Read More

ಸಾಹಿತಿ ಬನ್ನೂರು ರಾಜುಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿ ಪ್ರದಾನ

ಮೈಸೂರು: ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆ ಮತ್ತು ಸಾಧನೆಗಾಗಿ ಸಾಹಿತಿ ಬನ್ನೂರು ಕೆ. ರಾಜು ಅವರಿಗೆ ಪ್ರಸ್ತುತ 2026 ನೇ ಸಾಲಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿಯನ್ನು ಇಂದು ಪ್ರದಾನ ಮಾಡಲಾಯಿತು.ಮೈಸೂರು ಜಿಲ್ಲಾಡಳಿತದಿಂದ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಲು ಆಯ್ಕೆಗಿದ್ದ ಹಿರಿಯ ಸಾಹಿತಿ ಬನ್ನೂರು ಕೆ. ರಾಜು ಅವರು ಪಾರ್ಶ್ವವಾಯುವಿನಿಂದ ಅನಾರೋಗ್ಯವಾಗಿದ್ದ ಕಾರಣ, ನಗರದ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮಕ್ಕೆ ಅವರು ಆಗಮಿಸಿ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕöÈತಿ…

Read More

ಆರ್.ಟಿ.ವೆಂಕಟೇಶ್, ಅಜ್ಜಮಾಡ ರಮೇಶ್‌ಕುಟ್ಟಪ್ಪ ಅವರಿಗೆ ತೆರೆಮರೆಯ ಸಾಧಕ ಪ್ರಶಸ್ತಿ ಪ್ರದಾನ

ಮೈಸೂರು: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷದ ವಾರ್ಷಿಕೋತ್ಸವ ಹಾಗೂ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ ಆಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮೈಸೂರಿನ ಲಲಿತಾದ್ರಿಪುರದಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಆರ್ ಟಿ ವೆಂಕಟೇಶ್ ಅಜ್ಜಮಾಡ ರಮೇಶ್ ಕುಟ್ಟಪ್ಪ ತೆರೆಮರೆಯ ಸಾಧಕ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ನಡೆದ ತೆರೆಮರೆಯ ಸಾಧಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೆ ಆರ್ ಪೇಟೆ ತಾಲೂಕಿನ ಪ್ರಖ್ಯಾತ ವೈದ್ಯರಾದ…

Read More

ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಹಾಗೂ ಎಸ್.ಸಿ.ಬಸವರಾಜಗೆ ವಿಧಾನಪರಿಷತ್ ಸ್ಥಾನ ನೀಡಲು ಆಗ್ರಹಿಸಿ ನಾಯಕ ಸಮಾಜದಿಂದ ಬೃಹತ್ ಪ್ರತಿಭಟನೆ

ಮೈಸೂರು; ಜಿಲ್ಲೆಯ ಎಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಎಸ್.ಸಿ.ಬಸವರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಆಗ್ರಹಿಸಿ ನಗರದಲ್ಲಿ ಸೋಮವಾರ ನಾಯಕ ಸಮುದಾಯದಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಜಮಾಯಿಸಿದ್ದ ಮೈಸೂರು ಮತ್ತು ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆಯ ದಿವಂಗತ ಎಸ್ ಚಿಕ್ಕಮಾದು ಮತ್ತು ಹೆಚ್ ಡಿ ಕೋಟೆಯ ಶಾಸಕ ಅನಿಲ್ ಚಿಕ್ಕಮಾದು, ಹಾಗೂ ಎಸ್ ಸಿ ಬಸವರಾಜು ರವರ ಅಭಿಮಾನಿಗಳು ಹಾಗೂ ನಾಯಕ…

Read More

ಮಳೆಗಾಲದಲ್ಲಿ ನೇರಳೆ ಹಣ್ಣು ತಿನ್ನುವುದು ವೆರಿ ಡೇಂಜರ್ … ಯಾಕೇ ಗೊತ್ತಾ !

ಈಗ ನೇರಳೆ ಹಣ್ಣಿನ ಕಾಲ. ಹಲವು ರೋಗಿಗಳಿಗೆ ರಾಮಬಾಣ ವಾಗಿ ಕೆಲಸ ಮಾಡುವ ನೆರಳೆ ಹಣ್ಣು, ಮಳೆಗಾಲದಲ್ಲಿ ವೆರಿ ಡೇಂಜರ್ ! ಮಳೆಗಾಲದಲ್ಲಿ ಈ ಹಣ್ಣನ್ನು ತಿಂದರೆ ಅನಾರೋಗ್ಯಕ್ಕೀಡಾಗುವುದು ಗ್ಯಾರಂಟಿ. ಎಲ್ಲದಕ್ಕಿಂತ ಮುಖ್ಯವಾಗಿ ಯಾರಿಗೆ ಈಗಾಗಲೇ ಶ್ವಾಸಕೋಶದ ತೊಂದರೆ ಇರುತ್ತದೆಯೋ, ಅಂತವರು ಮಳೆಗಾಲದ ನೇರಳೆ ಹಣ್ಣಿನ ತಂಟೆಗೆ ಹೋಗಲೇಬಾರದು. ನೇರಳೆ ಹಣ್ಣು ಸ್ವಾಭಾವಿಕವಾಗಿ ದೇಹದಲ್ಲಿ ತಂಪು ಮೂಡಿಸುವ ಗುಣವನ್ನು ಹೊಂದಿದೆ. ಮಳೆಗಾಲದ ತಣ್ಣನೆಯ ಹವಾಮಾನದ ಜೊತೆಗೆ ಈ ಹಣ್ಣನ್ನು ತಿಂದರೆ ಶ್ವಾಸಕೋಶದ ನರಗಳು ಕುಗ್ಗುವ ಸಾಧ್ಯತೆ ಇರುತ್ತದೆ.ನಮ್ಮ…

Read More

ಶಂಕರಾಚಾರ್ಯರು ಹಿಂದೂ ಧರ್ಮವನ್ನು ಜಗತ್ತಿನ ಉದ್ದಗಲಕ್ಕೂ ವಿಸ್ತರಿಸಿದರು; ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ

ಮೈಸೂರು; ಶಂಕರಾಚಾರ್ಯರು ದೈವಾಂಶ ಸಂಭೂತರು, ಹಿಂದೂ ಧರ್ಮವನ್ನು ಜಗತ್ತಿನ ಉದ್ದಗಲಕ್ಕೂ ವಿಸ್ತರಿಸಿದರು ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಹೇಳಿದರು.ಭಾನುವಾರ ನಗರದ ಶೃಂಗೇರಿ ಶ್ರೀಶಂಕರ ವ್ಮಠದ ಸಭಾಂಗಣದಲ್ಲಿ ಕರ್ನಾಟಕ ಸೇನಾ ಪಡೆ ವತಿಯಿಂದ ಏರ್ಪಡಿಸಿದ್ದ ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ವಿಶ್ವ ತತ್ವಜ್ಞಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದೂಧರ್ಮವನ್ನು ಪುನುರುತ್ತಾನಗೊಳಿಸಿದ ಆಚಾರ್ಯತ್ರಯರು ಶ್ರೀ ಶಂಕರಾಚಾರ್ಯರು.ಅತೀ ಚಿಕ್ಕ ವಯಸ್ಸಿನಲ್ಲೇ ದೇಶ ಪರ್ಯಟನೆ ಮಾಡಿದವರು. ಈಗಿನ ವಿದ್ಯಾರ್ಥಿಗಳು ಅವರಂತೆ ಮೇಧಾವಿ ತತ್ವಙ್ನನಿಗಳಾಬೇಕು. ಸಮಯವನ್ನು ವ್ಯರ್ಥ ಮಾಡದೆ ಚೆನ್ನಾಗಿ…

Read More

100 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ

ಮೈಸೂರು:ಶ್ರೀ ಕೃಷ್ಣ ಮಿತ್ರ ಮಂಡಳಿ ಮತ್ತು ಶ್ರೀ ಕೃಷ್ಣ ಟ್ರಸ್ಟ್ ವತಿಯಿಂದ ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣಧಾಮ ಆವರಣದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿರುವ 100 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು.ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದ ಶ್ರೀ ರಾಮಕೃಷ್ಣ ವಿದ್ಯಾ ಶಾಲೆಯ ನಿವೃತ್ತ ಪ್ರಾಂಶುಪಾಲ ಎಸ್ ಬಾಲಾಜಿ, ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇತರೆ, ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ ಎಂದು ಹೇಳಿದರು.ಪ್ರತಿಯೊಂದು…

Read More

ಹೈನುಗಾರಿಕೆ ಕ್ಷೇತ್ರದಲ್ಲಿ ವೈಜ್ಞಾನಿಕ ಜ್ಞಾನಕ್ಕೆ ಉತ್ತೇಜನ

ಮೈಸೂರು: ಗ್ರಾಮೀಣ ರೈತರ ಆರ್ಥಿಕ ಸಬಲೀಕರಣ ಮತ್ತು ವೈಜ್ಞಾನಿಕ ಹೈನುಗಾರಿಕೆ ಉತ್ತೇಜಿಸುವ ಉದ್ದೇಶದಿಂದ ಹಾರ್ಟ್ ಸಂಸ್ಥೆಯ ವತಿಯಿಂದ “ಹಸು ಸಾಕಾಣಿಕೆ ಮತ್ತು ಗುಣಮಟ್ಟದ ಹಾಲು ಉತ್ಪಾದನೆ” ಕುರಿತು ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಮೈಸೂರಿನ ರಿಂಗ್ ರೋಡ್ ಸಮೀಪವಿರುವ ಹಾರ್ಟ್ ಸಂಸ್ಥೆ ಯಶಸ್ವಿಯಾಗಿ ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಹಾರ್ಟ್ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಮಾತನಾಡಿ., ಹೈನುಗಾರಿಕೆ ಗ್ರಾಮೀಣ ಆರ್ಥಿಕತೆಯ ಪ್ರಮುಖ ಆಧಾರವಾಗಿದ್ದು, ರೈತರು ಸಾಂಪ್ರದಾಯಿಕ ವಿಧಾನಗಳ ಜೊತೆಗೆ ವೈಜ್ಞಾನಿಕ ಪಶುಪಾಲನಾ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.ಉತ್ತಮ…

Read More