
ಮೈಸೂರು: ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳು ಸಾರ್ವಜನಿಕರಿಗೆ ಲಭ್ಯವಿದ್ದು, ನಾಗರಿಕರು ಆಕ್ಷೇಪಣೆಗಳ ಅರ್ಜಿಗಳನ್ನು ಸಲ್ಲಿಸಬಹುದು. 18 ವರ್ಷ ತುಂಬಿದ ಅರ್ಹ ಯುವ ಮತದಾರರು ಕೂಡ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಿ ಎಂದು ಸಹಾಯಕ ನಿರ್ದೇಶಕ(ಗ್ರಾ.ಉ) ಸಿ.ಎಸ್.ಕರುಣಾಕರ್ ತಿಳಿಸಿದರು.
ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ವತಿಯಿಂದ ಶನಿವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಎಸ್ ಐಆರ್ ಭಾಗವಾಗಿ ನಾಗರಿಕರು ತಮ್ಮ ಮತದಾರರ ಗುರುತಿನ ಚೀಟಿಗೆ ಸಂಬAಧಿಸಿದ ಆಕ್ಷೇಪಣೆ ಹಾಗೂ ತಿದ್ದುಪಡಿ ಮಾಡಿಸಲು ಸೆ.19 ಮತ್ತು 20 ರಂದು ನಡೆಯುವ “ಸಾರ್ವಜನಿಕ ವಿಶೇಷ ಅಭಿಯಾನ” ನಡೆಯುತ್ತಿದೆ ಎಂದರು.
ಅರ್ಹ ನಾಗರಿಕರ ಹೆಸರನ್ನು ಸೇರಿಸಲು ಮತ್ತು ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಎಸ್ ಐಆರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಈ ಕುರಿತು ಪೋಷಕರು ಹಾಗೂ ಸುತ್ತಮುತ್ತಲಿನವರಿಗೆ ಮಾಹಿತಿ ನೀಡಿ ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಭೇಟಿ ನೀಡಿ, ತಮ್ಮ ಹೆಸರನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳಿದ್ದರೆ ಮಾಡಿಸಿಕೊಳ್ಳಬಹುದು ಎಂದು ಹೇಳಿದರು.
ನಿಗದಿತ ಸಮೂನೆ ಪಡೆದು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಪಟ್ಟಿಯಿಂದ ಹೆಸರು ತೆಗೆದುಹಾಕಲು ಹಾಗೂ ಮತದಾರರ ಚೀಟಿಯಲ್ಲಿನ ತಿದ್ದುಪಡಿಗಳು ಮತ್ತು ವಿಳಾಸ ಬದಲಾವಣೆಗೆ ಮಾಡಬಹುದು ಎಂದು ಮಾಹಿತಿ ನೀಡಿದರು.
ಸಹಾಯಕ ಪ್ರಾಧ್ಯಾಪಕ ಡಾ.ಮಂಜು ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಯುತ್ತಿದ್ದು, ಅದರ ಭಾಗವಾಗಿ ಇದೇ ಶನಿವಾರ ಮತ್ತು ಭಾನುವಾರ ವಿಶೇಷ ಅಭಿಯಾನ ನಡೆಯುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಶ್ವನಾಥ್, ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳಾದ ಸಂತೋಷ, ಸೋಮಶೇಖರ್, ಐಇಸಿ ಸಂಯೋಜಕ ರವಿಕುಮಾರ್, ಸಹಾಯಕ ಪ್ರಾಧ್ಯಾಪಕರಾದ ನಂಜುAಡಸ್ವಾಮಿ, ವಿಶ್ವನಾಥ್ ಸೇರಿದಂತೆ ಇತರರು ಹಾಜರಿದ್ದರು