Skip to main content

3Kaala News

ಸುಭಾಷಿತ 

ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನು ಇಟ್ಟು ಕಳಿಸುತ್ತಾನೆ. ಆದರೆ ನಾವು ನಮ್ಮ ಜೋಳಿಗೆಯಲ್ಲಿ ಏನಿದೆ ಎಂದು ನೋಡಿ ಆನಂದಪಡುವುದನ್ನು ಬಿಟ್ಟು,ಬೇರೆಯವರ ಜೋಳಿಗೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳುವ ಕೆಟ್ಟ ಕುತೂಹಲದಿಂದ ಸದಾ ದುಃಖಿಯಾಗಿರುತ್ತೇವೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅಂಬೇಡ್ಕರ್ ಓದುವುದು ಎಂದರೆ ನಮ್ಮ ಜೀವನವನ್ನು ನಾವೇ ಓದಿದಂತೆ; ಪ್ರೊ. ಕೃಷ್ಣನಾಯಕ


ಮೈಸೂರು: ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸುವ ಸಮಯದಲ್ಲಿ ವಿವಿಧ ದೇಶಗಳ ಸಂವಿಧಾನಗಳನ್ನು ಓದಿ ನಮ್ಮ ಭಾರತೀಯ ಸಂವಿಧಾನವನ್ನು ರಚಿಸಿದರು. ಹಾಗಾಗಿ ಅವರನ್ನು ಕುರಿತು ಓದುವುದು ಎಂದರೆ ನಮ್ಮ ಜೀವನ ಕುರಿತು ನಾವೇ ಓದುಕೊಂಡAತೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೃಷ್ಣನಾಯಕ ತಿಳಿಸಿದರು.
ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೆಗ್ಗಡದೇವನಕೋಟೆ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,
ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ಬದುಕು, ಬರಹ, ಭಾಷಣ ಮತ್ತು ಸಾಧನೆಗಳನ್ನು ಸರ್ಕಾರದ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ಹಾಗೂ ವಿಶ್ವವಿದ್ಯಾಲಯದ (ಸ್ನಾತಕ-ಸ್ನಾತಕೋತ್ತರ-ಕಾನೂನು ಪದವಿ ಇತ್ಯಾದಿ) ವಿದ್ಯಾರ್ಥಿಗಳಿಗೆ ತಿಳಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ರಸಪ್ರಶ್ನೆ, ಪ್ರಬಂಧ, ಚಿತ್ರಕಲೆ, ಆಶುಭಾಷಣ ಇತ್ಯಾದಿ ಸ್ಪರ್ಧೆಗಳನ್ನು ನಡೆಸಲಾಗುವುದು, ಆ ಮೂಲಕ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ಪರಿಚಯವನ್ನು ಯುವ ಸಮುದಾಯಕ್ಕೆ ಮಾಡಿಕೊಡುವುದು ಯೋಜನೆಯ ಉದ್ದೇಶವಾಗಿದ್ದು. ಕಾರ್ಯಕ್ರಮವು ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ಸ್ವರ್ಧೆಯಲ್ಲಿ ಭಾಗವಹಿಸಲು ಮುಕ್ತವಾಗಿರುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ ಸ್ವರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ತೃತೀಯ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮಲ್ಲಿ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಸಹಾಯಕ ನಿರ್ದೇಶಕ ಡಾ . ಎಂ. ಡಿ ಸುದರ್ಶನ, ಐ ಕ್ಯೂ ಎಸ್ ಸಿ ಸಂಚಾಲಕಿ ಕಾತ್ಯಾಯಿನಿ, ಪ್ರಾಧ್ಯಾಪಕ ಕೆಂಪರಾಜು ಹಾಗೂ ಇನ್ನಿತರ ಉಪನ್ಯಾಸಕರು ಹಾಜರಿದ್ದರು.