Skip to main content

3Kaala News

ಸುಭಾಷಿತ 

ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನು ಇಟ್ಟು ಕಳಿಸುತ್ತಾನೆ. ಆದರೆ ನಾವು ನಮ್ಮ ಜೋಳಿಗೆಯಲ್ಲಿ ಏನಿದೆ ಎಂದು ನೋಡಿ ಆನಂದಪಡುವುದನ್ನು ಬಿಟ್ಟು,ಬೇರೆಯವರ ಜೋಳಿಗೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳುವ ಕೆಟ್ಟ ಕುತೂಹಲದಿಂದ ಸದಾ ದುಃಖಿಯಾಗಿರುತ್ತೇವೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕೇಸರಿಮಯವಾದ ಮೈಸೂರು: ಸಾಮೂಹಿಕ ಗಣಪತಿ ವಿಸರ್ಜನೆಗೆ ನಗರ ಸಜ್ಜು


ಮೈಸೂರು: ಮೈಸೂರು ಸಾರ್ವಜನಿಕ ಗಣೇಶ ವಿಸರ್ಜನಾ ಸಮಿತಿ ವತಿಯಿಂದ ಭಾನುವಾರ ಅದ್ಧೂರಿಯಾಗಿ ನಡೆಯಲಿರುವ ಭವ್ಯ ಸಾಮೂಹಿಕ ಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಸಾಂಸ್ಕöÈತಿಕ ನಗರಿ ಮೈಸೂರು ಸಜ್ಜಾಗಿದೆ. ಮೆರವಣಿಗೆ ಸಾಗುವ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳನ್ನು ಕಾರ್ಯಕರ್ತರು ಕೇಸರಿ ಧ್ವಜಗಳಿಂದ ಅಲಂಕರಿಸಿ ಹಬ್ಬದ ವಾತಾವರಣವನ್ನು ನಿರ್ಮಿಸಿದ್ದಾರೆ.
ಮಧ್ಯಾಹ್ನ 1.45 ಗಂಟೆಗೆ ಮೈಸೂರಿನ ವೀರನಗೆರೆಯ ಶ್ರೀ ವೀರ ಗಣಪತಿ ದೇವಸ್ಥಾನದ ಮುಂಭಾಗದಿAದ ಆರಂಭವಾಗಲಿರುವ ಭವ್ಯ ಮೆರವಣಿಗೆ ನಗರದ ಫೌಂಟೆನ್ ವೃತ್ತ, ಅಶೋಕ ರಸ್ತೆ, ಚರ್ಚ್ ಸರ್ಕಲ್, ದೇವರಾಜ ಪೊಲೀಸ್ ಠಾಣೆ ವೃತ್ತ, ದೊಡ್ಡ ಗಡಿಯಾರ, ಚಿಕ್ಕ ಗಡಿಯಾರ ಹಾಗೂ ದೇವರಾಜ ಅರಸು ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಲಿದೆ.
ಮೆರವಣಿಗೆಯ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಕೇಸರಿ ಧ್ವಜಗಳು ರಾರಾಜಿಸುತ್ತಿದ್ದು
ಗಣೇಶೋತ್ಸವದ ಸಂಭ್ರಮ ಮತ್ತಷ್ಟು ಹೆಚ್ಚಾಗಿದೆ. ನೂರಕ್ಕೂ ಹೆಚ್ಚು ಗಣಪತಿ ಮೂರ್ತಿಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ಸುಮಾರು 10 ಸಾವಿರಕ್ಕೂ ಅಧಿಕ ಹಿಂದೂ ಕಾರ್ಯಕರ್ತರು ಹಾಗೂ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಈ ಬಾರಿಯ ಮೆರವಣಿಗೆಯ ವಿಶೇಷ ಆಕರ್ಷಣೆಯಾಗಿ ಜಾನಪದ ಕಲಾತಂಡಗಳು, ಡೊಳ್ಳು ಕುಣಿತ, ನಗಾರಿ, ನಾದಸ್ವರ, ಕಂಸಾಳೆ, ತಮಟೆ ಸೇರಿದಂತೆ 10ಕ್ಕೂ ಹೆಚ್ಚು ಸಾಂಪ್ರದಾಯಿಕ ಕಲಾತಂಡಗಳು ಭಾಗವಹಿಸಿ ಸಾಂಸ್ಕöÈತಿಕ ವೈಭವವನ್ನು ಅನಾವರಣಗೊಳಿಸಲಿವೆ.
ಭಕ್ತಿ, ಸಂಸ್ಕöÈತಿ ಮತ್ತು ಸಂಪ್ರದಾಯಗಳ ಸಂಗಮವಾಗಿರುವ ಈ ಭವ್ಯ ಸಾಮೂಹಿಕ ಗಣಪತಿ ವಿಸರ್ಜನಾ ಮೆರವಣಿಗೆಗೆ ಸಾವಿರಾರು ಭಕ್ತರು ಸಾಕ್ಷಿಯಾಗಲಿದ್ದು, ಮೈಸೂರು ನಗರ ಮತ್ತೊಮ್ಮೆ ಕೇಸರಿಮಯವಾಗಿ ಕಂಗೊಳಿಸಲಿದೆ.