
ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ಕಳೆದ ಶುಕ್ರವಾರ ನಡೆದ ಗಣಪತಿ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆ ಮೆರವಣಿಗೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ತಿ.ನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ತಿ.ನರಸೀಪುರ ಠಾಣೆಯ ಪಿಎಸ್ಐ ಮಲ್ಲೇಶ್ ಅವರು ನೀಡಿದ ದೂರಿನ ಮೇಲೆ
ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ನೆಮ್ಮದಿಗೆ ಭಂಗ ತರುವಂತಹ ಜಾತಿ ಜಾತಿಗಳ ನಡುವೆ ದ್ವೇಷ ಅಸೂಯೆ ಮೂಡಿಸುವಂತಹ, ಅವಹೇಳನಕಾರಿಯಾಗಿ ಹಾಗೂ ಧಾರ್ಮಿಕ ಶ್ರದ್ಧೆಯನ್ನು ಅವಮಾನಿಸುವ ಉದ್ದೇಶದಿಂದ ಪ್ರಚೋದನಕಾರಿ ಘೋಷಣೆಗಳನ್ನು ಸಾರ್ವಜನಿಕವಾಗಿ ಮೆರವಣಿಗೆ ಸ್ಥಳದಲ್ಲಿ ಕೂಗಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಸಹಚರರ ವಿರುದ್ಧ ಕಲಂ 132, 191, 194, 196(1)(ಚಿ)(b) ಡಿ/ತಿ 190/ಬಿಎನ್ಎಸ್ ಅಡಿ ಪ್ರಕರಣ ದಾಖಲಾಗಿದೆ
ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.