Skip to main content

3Kaala News

ಸುಭಾಷಿತ 

ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನು ಇಟ್ಟು ಕಳಿಸುತ್ತಾನೆ. ಆದರೆ ನಾವು ನಮ್ಮ ಜೋಳಿಗೆಯಲ್ಲಿ ಏನಿದೆ ಎಂದು ನೋಡಿ ಆನಂದಪಡುವುದನ್ನು ಬಿಟ್ಟು,ಬೇರೆಯವರ ಜೋಳಿಗೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳುವ ಕೆಟ್ಟ ಕುತೂಹಲದಿಂದ ಸದಾ ದುಃಖಿಯಾಗಿರುತ್ತೇವೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಾಡಾನೆ ದಾಳಿಗೆ ವೃದ್ಧ ಬಲಿ


ಸರಗೂರು: ಕಾಡಾನೆ ದಾಳಿಗೆ ವೃದ್ಧರೊಬ್ಬರು ಸಾವಿಗೀಡಾಗಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಬಳಿ ಸೋಮವಾರ ನಡೆದಿದೆ. ಗ್ರಾಮದ ನಿವಾಸಿ ವೀರಭದ್ರೆಗೌಡ (60) ಕಾಡಾನೆ ದಾಳಿಗೆ ಮೃತಪಟ್ಟವರು.
ಇಂದು ಬೆಳಗ್ಗೆ ಶುಗರ್ ಪರೀಕ್ಷೆ ಮಾಡಿಸಿಕೊಳ್ಳಲು ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಗೆರೆ ಗ್ರಾಮದ ಬಳಿ ಕಾಡಾನೆ ಹಠಾತ್ತನೆ ದಾಳಿ ನಡೆಸಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ವೀರಭದ್ರೆಗೌಡ ಅವರನ್ನು ವಿಷಯ ತಿಳಿದ ಅರಣ್ಯಾಧಿಕಾರಿಗಳು ಇಲಾಖೆ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ವೀರಭದ್ರೆಗೌಡ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದರು.