Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿದ್ಯಾರ್ಥಿಗಳಿಗೆ ರಕ್ತದ ಗುಂಪು ಪರೀಕ್ಷೆ ಮತ್ತು ರಕ್ತದಾನ ಶಿಬಿರ

ಮೈಸೂರು; ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಕ್ತದ ಗುಂಪು ಪರೀಕ್ಷೆ ಮತ್ತು ವಿದ್ಯಾರ್ಥಿಗಳಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಮಂಗಳವಾರ ನಡೆಸಲಾಯಿತು.
ಯೂತ್ ರೆಡ್ ಕ್ರಾಸ್ ಘಟಕ, ಎನ್‌ಸಿಸಿ ಆರ್ಮಿ ವಿಂಗ್ ಮತ್ತು ಐಕ್ಯೂಎಸಿ ಇವರ ವತಿಯಿಂದ
ಲಯನ್ಸ್ ಬ್ಲಡ್ ಸೆಂಟರ್, ಜೀವದಾರ, ಮೈಸೂರು ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು. ಹಾಗೂ ವಿದ್ಯಾರ್ಥಿಗಳು ಮತ್ತು ಸ್ವಯಂಸೇವಕರಿಗೆ ರಕ್ತದ ಗುಂಪು ಪರೀಕ್ಷೆ ಮತ್ತು ರಕ್ತದಾನ ಮಾಡಲು ಅವಕಾಶ ಕಲ್ಪಿಸಲಾಯಿತು. ಕಾರ್ಯಕ್ರಮಕ್ಕೆ ಶಾರದಾ ವಿಲಾಸ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ದೇವಿಕಾ ಚಾಲನೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೈಸೂರಿನ ವೈದ್ಯಾಧಿಕಾರಿ ಡಾ. ಪರಿಣಿತಾ ಎಸ್. ಮಾತನಾಡಿ, ರಕ್ತವು ಜೀವ ಉಳಿಸುವಲ್ಲಿ ಹೊಂದಿರುವ ಮಹತ್ವ ಹಾಗೂ ರಕ್ತದಾನವು ಆರೋಗ್ಯಕ್ಕೆ ನೀಡುವ ಪ್ರಯೋಜನಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಶಾರದಾ ವಿಲಾಸ ಕಾಲೇಜಿನ ಕಾರ್ಯಕ್ರಮಾಧಿಕಾರಿ ಅಭಿಲಾಷ್ ಎಚ್.ಎಸ್. ಮತ್ತಿತರರು ಹಾಜರಿದ್ದರು