Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಂಭ್ರಮದಿ0ದ ನಡೆದ ವೀರಭದ್ರಸ್ವಾಮಿ ಜಯಂತೋತ್ಸವ

ಮೈಸೂರು; ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಮಂಗಳವಾರ ಶ್ರೀ ವೀರಭದ್ರಸ್ವಾಮಿ ಜಯಂತೋತ್ಸವವನ್ಮ್ನ ಸಂಭ್ರಮದಿAದ ಆಚರಿಸಲಾಯಿತು.
ಸುತ್ತೂರು ಶ್ರೀಕ್ಷೇತ್ರದಲ್ಲಿರುವ ಶ್ರೀ ವೀರಭದ್ರಸ್ವಾಮಿ ದೇವಸ್ಥಾನ (ಗುಡ್ಡ) ಹಾಗೂ ಶ್ರೀಮಠದ ಆವರಣದಲ್ಲಿರುವ ಶ್ರೀ ವೀರಭದ್ರಸ್ವಾಮಿ ದೇವಸ್ಥಾನಗಳಲ್ಲಿ ಮಠದ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಭದ್ರಕಾಳಿ ಸಮೇತ ಶ್ರೀ ವೀರಭದ್ರಶ್ವರಸ್ವಾಮಿಗೆ ಪ್ರಾಕಾರೋತ್ಸವ, ವಿಶೇಷ ಅಲಂಕಾರ, ರಾಜೋಪಚಾರ, ಮಹಾಮಂಗಳಾರತಿ, ವೀರಗಾಸೆ ಕುಣಿತ ಹಾಗೂ ಮಂಗಳವಾದ್ಯಗಳೊAದಿಗೆ ಜಯಂತೊತ್ಸವದ ಆಚರಣೆಯನ್ನು ನೆರವೇರಿಸಲಾಯಿತು. ಸುತ್ತಮುತ್ತಲಿನ ಗ್ರಾಮಸ್ಥರು, ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿಶ್ರೀ ವೀರಭದ್ರೇಶ್ವರಸ್ವಾಮಿ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಏರ್ಪಡಿಸಲಾಗಿತ್ತು.