Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎಂಡಿಎ 50:50 ಅಕ್ರಮ, ರದ್ದಾದ ನಿವೇಶನಗಳ ಪಟ್ಟಿ ಪ್ರಕಟಿಸಿ


*ಎಂಡಿಎ ಆಯುಕ್ತರು, ಜಿಲ್ಲಾಧಿ ಕಾರಿಗಳಿಗೆ ಸರಕಾರ ಸೂಚನೆ
*ಶಾಸಕ ಟಿ.ಎಸ್. ಶ್ರೀವತ್ಸ ಅವರ ಪತ್ರಕ್ಕೆ ಸರಕಾರದ ಸ್ಪಂದನೆ

ಮೈಸೂರು: ಇಲ್ಲಿನ ಕೆ.ಆರ್. ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರ ಮನವಿಗೆ ಸ್ಪಂದಿಸಿರುವ ಸರಕಾರ ಮೈಸೂರು ಅಭಿವೃದ್ಧಿ ಪ್ರಾಧಿ ಕಾರದಲ್ಲಿ (ಎಂಡಿಎ) ಶೇ.50:50 ಅನುಪಾತದಡಿ ರದ್ದುಗೊಂಡಿರುವ ನಿವೇಶನಗಳ ಸಂಪೂರ್ಣ ಪಟ್ಟಿಯನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಹಾಗೂ ಸಾರ್ವಜನಿಕರ ನೆರವಿಗಾಗಿ ಪ್ರತ್ಯೇಕ ಸಹಾಯವಾಣಿ ಆರಂಭಿಸಬೇಕು ಎಂದು ಎಂಡಿಎ ಆಯುಕ್ತರು ಹಾಗೂ ಜಿಲ್ಲಾಧಿ ಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದೆ.
ಶಾಸಕ ಟಿ.ಎಸ್.ಶ್ರೀವತ್ಸ ಅವರು ನಗರಾಭಿವೃದ್ಧಿ ಇಲಾಖೆ ಹಾಗೂ ಸರಕಾರಕ್ಕೆ ಪತ್ರ ಬರೆದು ಮೈಸೂರು ಅಭಿವೃದ್ಧಿ ಪ್ರಾಧಿ ಕಾರದಲ್ಲಿ (ಎಂಡಿಎ) ಶೇ.50:50 ಅನುಪಾತದಡಿ ಹಂಚಿಕೆಯಾಗಿರುವ ನಿವೇಶನಗಳನ್ನು ರದ್ದುಗೊಳಿಸಿದರುವುದಕ್ಕೆ ಅಭಿನಂದನೆ ಸಲ್ಲಿಸಿರುವುದಲ್ಲದೇ ರದ್ದುಗೊಂಡ ನಿವೇಶನಗಳ ಪಟ್ಟಿಯನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದರು.
ಶಾಸಕರು ಸೆ.1ರಂದು ಬರೆದಿರುವ ಪತ್ರವನ್ನು ಉಲ್ಲೇಖಿಸಿರುವ ಸರಕಾರ, ಪತ್ರದಲ್ಲಿ ಪ್ರಸ್ತಾಪಿಸಿರುವ ವಿಷಯವನ್ನು ಚಾಲ್ತಿಯಲ್ಲಿರುವ ಕಾಯಿದೆ, ಸುತ್ತೋಲೆ ಹಾಗೂ ನಿಯಮಗಳನ್ವಯ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಮೈಸೂರು ಅಭಿವೃದ್ಧಿ ಪ್ರಾಧಿ ಕಾರ ಆಯುಕ್ತರು, ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರು ಮತ್ತು ಮೈಸೂರು ಜಿಲ್ಲಾಧಿ ಕಾರಿಗೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಕೆ.ಲತಾ ಅವರು ಪತ್ರ ಬರೆದಿದ್ದಾರೆ.
ಮುಡಾದಲ್ಲಿ 50:50 ಅನುಪಾತ ಮತ್ತು ಬದಲಿ ನಿವೇಶನ ಹಂಚಿಕೆಗೆ ಸಂಬAಸಿದAತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ದೊರೆಯುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ರದ್ದುಗೊಳಿಸಲಾದ ನಿವೇಶನಗಳ ವಿವರ, ಸಂಬAತ ದಾಖಲೆಗಳು ಹಾಗೂ ಕ್ರಮದ ಸ್ಥಿತಿಗತಿಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕೆಂದು ಸೂಚಿಸಿದ್ದಾರೆ.
ಸಹಾಯವಾಣಿ ಆರಂಭಿಸಲು ಆಗ್ರಹ :
ಮುಡಾ ನಿವೇಶನ ಹಂಚಿಕೆ ಹಾಗೂ ರದ್ದತಿ ಕುರಿತಂತೆ ಸಾರ್ವಜನಿಕರಿಂದ ಬರುವ ದೂರು, ಆಕ್ಷೇಪಣೆ ಮತ್ತು ಮಾಹಿತಿ ವಿನಂತಿಗಳನ್ನು ಸ್ವೀಕರಿಸಲು ಪ್ರತ್ಯೇಕ ಸಹಾಯವಾಣಿ ಆರಂಭಿಸಲು ಸೂಚಿಸಲಾಗಿದೆ. ಇದರಿಂದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಸಂಬAಸಿದ ಅಧಿ ಕಾರಿಗಳ ಗಮನಕ್ಕೆ ತರಲು ಅನುಕೂಲವಾಗಲಿದೆ.