Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬಿಜೆಪಿಯವರು ಮತದಾರರ ಹೆಸರು ಡಿಲೀಟ್ ಮಾಡಿ ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್


ಮೈಸೂರು: ‘ಬಿಜೆಪಿಯವರು ಇಡೀ ಚುನಾವಣಾ ಪ್ರಕ್ರಿಯೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಚುನಾವಣಾ ಆಯೋಗವನ್ನೂ ದುರ್ಬಳಕೆ ಮಾಡಿಕೊಂಡು, ಮತದಾರರ ಹೆಸರು ಡಿಲೀಟ್ ಮಾಡಿ ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದರು.
ಗುರುವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಗೆ ಮತ ಹಾಕದವರ ಹೆಸರುಗಳನ್ನು ಎಸ್‌ಐಆರ್ ಮೂಲಕ ತೆಗೆದುಹಾಕಲಾಗುತ್ತಿದೆ. ‘ಬಿಜೆಪಿಗೆ ಅನುಕೂಲ ಮಾಡಿಕೊಡಲು ಎಸ್‌ಐಆರ್ ಮೂಲಕ ಮುಸ್ಲಿಮರು, ಕ್ರೆöÊಸ್ತರು, ಒಬಿಸಿ ವರ್ಗದವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆಯಲಾಗುತ್ತಿದೆ. ಇದಕ್ಕೆ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಸಹಕರಿಸಿರುವುದು ಸಾಬೀತಾಗಿದೆ’ ಎಂದರು.
‘ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾದ ನಿರ್ಣಯಗಳನ್ನು ಕೈಗೊಂಡು, ಬಿಜೆಪಿ ಗೆಲ್ಲಲು ಅನುಕೂಲ ಮಾಡಿಕೊಡುತ್ತಿರುವ ಆರೋಪ ಎದುರಿಸುತ್ತಿರುವ ಚುನಾವಣಾ ಆಯೋಗದ ಮುಖ್ಯ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ವಿರುದ್ಧ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಹುದ್ದೆಯಿಂದ ಕಿತ್ತೊಗೆದು ಕೂಡಲೇ ಬಂಧಿಸಬೇಕು’ ಎಂದು ಒತ್ತಾಯಿಸಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿಷಯದಲ್ಲಿ ಸಿಇಸಿ-ಇಬ್ಬರು ಆಯುಕ್ತರ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ. ಸಿಇಸಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ಆಯುಕ್ತರು ಆಕ್ಷೇಪ ಎತ್ತಿದ್ದಾರೆ. ಇದು ತೀವ್ರ ಗಂಭೀರವಾದ ಸಂಗತಿಯಾಗಿದೆ’ ಎಂದು ತಿಳಿಸಿದರು.
ದೇಶದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಅದನ್ನು ಕಾಂಗ್ರೆಸ್ ಪಕ್ಷವು ದೊಡ್ಡಮಟ್ಟದ ಹೋರಾಟದ ಮೂಲಕ ಜನಸಾಮಾನ್ಯರಿಗೆ ತಿಳಿಸಲಿದೆ. ರಾಹುಲ್ ಗಾಂಧಿ ಅವರು ಎಸ್‌ಐಆರ್ ವಿರುದ್ಧ ಆರಂಭದಿAದಲೂ ಧ್ವನಿ ಎತ್ತಿದ್ದರು. ಆದರೆ, ಆಯೋಗ ಕಿವಿಕೊಡಲಿಲ್ಲ. ಈಗ, ಇಬ್ಬರು ಆಯುಕ್ತರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ’ ಎಂದರು.
ಎಸ್‌ಐಆರ್ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಬೇಕು. ಎಸ್‌ಐಆರ್ ನಂತರ ಚುನಾವಣೆ ಆಗಿರುವ ಆರು ರಾಜ್ಯಗಳಲ್ಲೂ ಮರುಚುನಾವಣೆ ನಡೆಸಬೇಕು. ಚುನಾವಣಾ ಆಯುಕ್ತರ ಹುದ್ದೆಗೆ ಆಯ್ಕೆಗೆ ಸಂಬAಧಿಸಿದAತೆ ಹಿಂದಿನ ಪದ್ಧತಿಯನ್ನೇ ಪಾಲಿಸಬೇಕು. ಬ್ಯಾಲೆಟ್ ಮೂಲಕವೇ ಚುನಾವಣೆ ನಡೆಸಬೇಕು’ ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಜಿಲ್ಲಾ ಸಮಿತಿಯ ಅಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬೀರಿಹುಂಡಿ ಬಸವಣ್ಣ, ವಕ್ತಾರ ಮಹೇಶ್, ಮುಖಂಡರಾದ ಬಿ.ಎಂ.ರಾಮು, ಗಿರೀಶ್, ಮಹದೇವು, ಚೇತನ್ ಇದ್ದರು