Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕೆಜಿ ಕೊಪ್ಪಲ್‌ನ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ


ಮೈಸೂರು: ಧಾರ್ಮಿಕ ಮತ್ತು ಸಾಂಸ್ಕöÈತಿಕ ಕಾರ್ಯಕ್ರಮಗಳು ಸಮಾಜದಲ್ಲಿ ಸೌಹಾರ್ದತೆ ಹಾಗೂ ಏಕತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಸೋಮವಾರ ಮೈಸೂರು ನಗರದ ಕೆಜಿ ಕೊಪ್ಪಲ್ ಪ್ರದೇಶದಲ್ಲಿ ಕನ್ನೇಗೌಡ ಟೈಗರ್ ಅವರ ೩೦ನೇ ವರ್ಷದ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ಗಣೇಶ ಗುಡಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಗಣಪತಿ ದೇವರಿಗೆ ಆರತಿ ಬೆಳಗಿ ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದ ಬಳಿಕ ಅನ್ನದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ಮುಖಂಡರು, ಕಾರ್ಯಕರ್ತರು ಹಾಗೂ ನೂರಾರು ಭಕ್ತರು ಭಾಗವಹಿಸಿ ಗಣೇಶನ ಆಶೀರ್ವಾದ ಪಡೆದರು. ಅನ್ನದಾನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪ್ರಸಾದ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಮಾಜಿ ಸಚಿವ ಸಾ.ರಾ ಮಹೇಶ್, ಮಾಜಿ ಶಾಸಕ ಅಶ್ವಿನ್ ಕುಮಾರ್, ಮಾಜಿ ಮೇಯರ್ ರವಿಕುಮಾರ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ಮುಖಂಡರಾದ ಜೋಗಿ ಮಂಜು, ಅನಿಲ್, ಮೋಹನ, ರವಿ ವಿವೇಕ್, ಕಾರ್ತಿಕ್, ಕಿರಣ್ ಶರತ, ಭರತ್, ನವೀನ,ಮಹೇಶ್, ರಮೇಶ್, ದಾಸ ವೆಂಕಟೇಶ್, ಹಾಗೂ ಇನ್ನಿತರರು ಹಾಜರಿದ್ದರು