Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬಟ್ಟೆಯ ಕೈ ಚೀಲಗಳ ಮೇಲೆ ಆಕರ್ಷಕವಾದ ಚಿತ್ರಗಳನ್ನು ಬಿಡಿಸಿದ ಚಿಣ್ಣರು


ಮೈಸೂರು; ದಸರಾ ಚಿತ್ರಸಂತೆ ಅಂಗವಾಗಿ ಭಾನುವಾರ ಬೆಳಿಗ್ಗೆ ೯.೩೦ ರಿಂದ ೧೨.೩೦ ರ ವರೆಗೆ ಬಟ್ಟೆಯ ಕೈ ಚೀಲಗಳ ಮೇಲೆ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು ೨೫ಕ್ಕೂ ಹೆಚ್ಚು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಕ್ಕಳು ವಿವಿಧ ಆರ್ಕಷಕ ಚಿತ್ರಗಳನ್ನು ಬಿಡಿಸಿದರು. ಅದರಲ್ಲೂ ಕೆಲವರು ಬಟ್ಟೆ ಬ್ಯಾಗ್‌ಗಳಲ್ಲಿ ಚಿತ್ರಗಳನ್ನು ಬಿಡಿಸಿದರು. ತಮ್ಮ ಚಿತ್ರಗಳ ಮೂಲಕ ಪರಿಸರ ಕಾಳಜಿಯನ್ನು ವ್ಯಕ್ತಪಡಿಸಿದರು. ಪರಿಸರ ಸಂರಕ್ಷಿಸಬೇಕಾದ ಮಹತ್ವವನ್ನು ಚಿತ್ರಗಳ ಮೂಲಕ ತಿಳಿಸಿದರು. ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಮಾಣಪತ್ರ ವಿತರಿಸಲಾಯಿತು. ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಂಜಜ ಉeಟ ಕಂಪೆನಿಯ ಪ್ರಯೋಜಕತ್ವದಲ್ಲಿ ಆನಂದ್ ಅವರು ಬಹುಮಾನ ವಿತರಣೆ ಮಾಡಿದರು. ಚಿತ್ರಸಂತೆ ಸಮಿತಿಯ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.