Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಐಟಿಸಿ ಕಂಪನಿಯಿಂದ ಹೆಮ್ಮಿಗೆ ಸರ್ಕಾರಿ ಶಾಲೆಗೆ ಡೆಸ್ಕ್‌ ವಿತರಣೆ

​ಪಿರಿಯಾಪಟ್ಟಣ: ಸರ್ಕಾರಿ ಶಾಲೆಗಳಲ್ಲಿ ಕಲಿಕಾ ವಾತಾವರಣವನ್ನು ಉತ್ತಮಗೊಳಿಸುವ ಉದ್ದೇಶದಿಂದ ಐಟಿಸಿ ಕಂಪನಿಯಿಂದ ತಾಲೂಕಿನ ಹೆಮ್ಮಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಡೆಸ್ಕ್‌ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿ ಹೆಮ್ಮಿಗೆ ಮಹೇಶ್  ಮಾತನಾಡಿ ಮಕ್ಕಳ ಸಬಲೀಕರಣಕ್ಕಾಗಿ ಐಟಿಸಿ ಕಂಪನಿ ತನ್ನ ಶಿಕ್ಷಣ ನಿಧಿಯನ್ನು ಬಳಸಿ ಪ್ರತಿಯೊಂದು ಮಗುವೂ ಕಲಿಯಬೇಕು, ಬೆಳೆಯಬೇಕು ಮತ್ತು ಅವರು ಅಭಿವೃದ್ಧಿ ಹೊಂದಲ ಹೆಚ್ಚಿನ ಸಹಕಾರ ನೀಡುತ್ತಿದೆ

ಐಟಿಸಿ ಕಂಪನಿಯು ಶಿಕ್ಷಣ ಸೌಲಭ್ಯ ವಂಚಿತ ಮಕ್ಕಳು ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಲು ಮತ್ತು ಕಲಿಕಾ ಫಲಿತಾಂಶಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಶಾಲೆಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ನೀಡುತ್ತಿರುವುದು ಶ್ಲಾಘನೀಯ. ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕೈಜೋಡಿಸಿರುವ ಐಟಿಸಿ ಕಂಪನಿಯ ಕ್ರಮಕ್ಕೆ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.

ಐಟಿಸಿಯ ಕುಮಾರಸ್ವಾಮಿ ಎಂ.ಆರ್‌ ಮಾತನಾಡಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಉದ್ದೇಶದಿಂದ ಡೆಸ್ಕ್‌ ವಿತರಣೆ, ಶೌಚಾಲಯ ನಿರ್ಮಾಣ ಮಾಡಿಕೊಡುವುದು, ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯ ಮಾಡಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ದಿನೇಶ್ ಕುಮಾರ್, ಗ್ರಾಮದ ಮುಖಂಡರಾದ ಶಿವಣ್ಣ, ರವೀಶ್, ಹರೀಶ್, ರಾಜೇಗೌಡ ಸೇರಿದಂತೆ ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು