Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದಸರಾ, ಅಭಿಮನ್ಯು ಆಡಿಯೊ ಆಲ್ಬಂ ಬಿಡುಗಡೆ

ಮೈಸೂರು: ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರ ಸಾಹಿತ್ಯದ `ದಸರಾ ಹಾಗೂ ಅಭಿಮನ್ಯು ಬೀಳ್ಕೊಡುಗೆ’ ಹಾಡುಗಳನ್ನು ಒಳಗೊಂಡಿರುವ ಆಡಿಯೋ ಆಲ್ಬಂ ಬಿಡುಗಡೆಗೊಳಿಸುವ ಮೂಲಕ ಅಭಿಮನ್ಯುವಿಗೆ ಗಾಯನದ ಬೀಳ್ಕೊಡುಗೆ ನೀಡಲಾಯಿತು.
ನಗರದ ಕೃಷ್ಣಮೂರ್ತಿಪುರಂನ ಬಿಎಸ್‌ಎಸ್ ವಿದ್ಯೋದಯ ಸಂಸ್ಥೆ ಸಭಾಂಗಣದಲ್ಲಿ ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟ, ಟ್ರಾವಲ್ಸ್ ಅಸೋಸಿಯೇಷನ್, ಸ್ಕಾಲ್ ಇಂಟರ್‌ನ್ಯಾಷನಲ್, ಮೈಸೂರು ಗೈಡ್ ಅಸೋಸಿಯೋಷನ್, ಮೈಸೂರು ಚೇಂಬರ್ ಆಫ್ ಕಾಮರ್ಸ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಮೈಸೂರು ಕಲ್ಚರಲ್ ಅಸೋಸಿಯೋಷನ್ ಸಹಯೋಗದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಆಲ್ಬಂ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ದಸರಾ ಹಾಗೂ ಅಭಿಮನ್ಯುವಿನ ಆಲ್ಬಂ ಮತ್ತು ಛಾಯಾಚಿತ್ರ ಪ್ರದರ್ಶನವೂ ಉತ್ತಮವಾಗಿ ಮೂಡಿಬಂದಿದೆ. ಅಭಿಮನ್ಯುವಿಗೆ ದಸರಾ ಇತಿಹಾಸದಲ್ಲಿ ಪ್ರಮುಖ ಸ್ಥಾನವಿದ್ದು, ಆನೆ ನಿವೃತ್ತಿ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಇದು ಉತ್ತಮ ಅವಕಾಶವಾಗಿದೆ. ಇಂತಹ ಪ್ರಯತ್ನಗಳ ಮೂಲಕ ಮೈಸೂರಿನ ವೈಶಿಷ್ಟ÷್ಯವನ್ನು ಪ್ರವಾಸಿಗರಿಗೆ ಪರಿಚಯಿಸಬೇಕು ಎಂದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಂ?ದ ಕುಲಪತಿ ಪ್ರೊ.ಎ.ಪಿ.ಜ್ಞಾನ ಪ್ರಕಾಶ್ ಮಾತನಾಡಿ, ದಸರಾ ಆಚರಣೆ ಕೇವಲ ಒಂದು ತಿಂಗಳಿಗೆ ಸೀಮಿತವಾಗಬಾರದು. ಅಭಿಮನ್ಯುವಿನ ನಿವೃತ್ತಿ ಹಾಗೂ ಬೀಳ್ಕೊಡುಗೆ ಮೈಸೂರಿನ ಪ್ರವಾಸೋದ್ಯಮವನ್ನು ಮತ್ತಷ್ಟು ಬೆಳೆಸಲು ಉತ್ತಮ ಅವಕಾಶವಾಗಿದೆ. ಮೈಸೂರು ನಗರದ ವೈಶಿಷ್ಟ÷್ಯ, ಸಂಗೀತ ಹಾಗೂ ಸಾಹಿತ್ಯವನ್ನು ಪ್ರವಾಸೋದ್ಯಮದೊಂದಿಗೆ ಬೆಸೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪೊಲೀಸ್ ಅಕಾಡೆಮಿ ಸಹಾಯಕ ನಿರ್ದೇಶಕ ಸಂದೇಶ್ ಕುವಾರ್, ಮೈಸೂರು ಕಲ್ಚರಲ್ ಅಸೋಸಿಯೋಷನ್ ಅಧ್ಯಕ್ಷ ಎ.ಪಿ.ನಾಗೇಶ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಡಾ. ಕೆ.ಬಿ.ಲಿಂಗರಾಜು, ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ನಂಜಯ್ಯ ಹೊಂಗನೂರು, ಕೆಪಿಸಿಸಿ ವಕ್ತಾರ ಎಂ.ಲಕ್ಷ÷್ಮಣ್, ಜಿಲ್ಲಾ ಕಾಂಗ್ರೆಸ್ ನಿಕಟ ಪೂರ್ವ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಕೆ.ವಿ.ಮಲ್ಲೇಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ವೈ.ಡಿ.ರಾಜಣ್ಣ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಇನ್ನಿತರರು ಹಾಜರಿದ್ದರು.