Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮಾನವೀಯ ನೆಲೆಗಟ್ಟಿನಲ್ಲಿ ರಾಜೇಂದ್ರ ಸ್ವಾಮೀಜಿಯವರು ಮನುಕುಲಕ್ಕೆ ಸಲ್ಲಿಸಿದ ಸೇವೆ ಅಮೂಲ್ಯವಾಗಿದೆ; ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ

ನಂಜನಗೂಡು; ಗ್ರಾಮೀಣ ಪ್ರದೇಶದ ಹಳ್ಳಿಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದು ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಜನರ ಕಷ್ಟಸುಖಗಳಿಗೆ ಸ್ಪಂದಿಸುವ ಮೂಲಕ ರಾಜೇಂದ್ರ ಸ್ವಾಮೀಜಿಯವರು ಮಾತೃ ಸ್ವರೂಪಿಯಾಗಿ ಗುರ್ತಿಸಿಕೊಂಡಿದ್ದರು ಎಂದು ಸುತ್ತೂರು ಮಠಾಧ್ಯಕ್ಷ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.

   ಅವರು ಗುರುವಾರ ನಗರದ ಜೆಎಸ್‌ಎಸ್ ಮಂಗಳ ಮಂಟಪದಲ್ಲಿ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಭಕ್ತವೃಂದದಿಂದ ಆಯೋಜಿಸಿದ್ದ ಡಾ.ಶಿವರಾತ್ರಿರಾಜೇಂದ್ರ ಸ್ವಾಮೀಜಿಯವರ 111ನೇ ಜಯಂತಿ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಮಾನವೀಯ ನೆಲೆಗಟ್ಟಿನಲ್ಲಿ ರಾಜೇಂದ್ರ ಸ್ವಾಮೀಜಿಯವರು ಮನುಕುಲಕ್ಕೆ ಸಲ್ಲಿಸಿದ ಸೇವೆ ಅಮೂಲ್ಯವಾಗಿದ್ದು ಜನರ ಭಾವನೆಗಳಿಗೆ ಸ್ಪಂದಿಸುವ ಮೂಲಕ ಶಿಕ್ಷಣ, ಆರೋಗ್ಯ ಹಾಗೂ ದಾಸೋಹ ಕ್ಷೇತ್ರದಲ್ಲಿ ಸಮಾಜಕ್ಕೆ ಗಣನೀಯವಾಗಿ ನೆರವಾಗಿದ್ದಾರೆ. ಅವರ ಜಯಂತಿ ಮಹೋತ್ಸವದ ಸಮಯದಲ್ಲಿ ಸಾಂಸ್ಕೃತಿಕ, ಕ್ರೀಡಾ ಹಾಗೂ ಶೈಕ್ಷಣಿಕ ಕ್ಷೇತ್ರಗಳ ಸಾಧಕ ವಿದ್ಯಾರ್ಥಿಗಳನ್ನು ಗುರ್ತಿಸಿ ಪ್ರೋತ್ಸಾಹಿಸುವ ಮೂಲಕ ಪ್ರೋತ್ಸಾಹಿಸುತ್ತಿರುವುದು ಉತ್ತಮ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ಬಸವೇಶ್ವರರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಕಾಯಕ ಹಾಗೂ ದಾಸೋಹದ ಮಹತ್ವವನ್ನು ಸಮಾಜಕ್ಕೆ ತಿಳಿಸಿಕೊಡುವ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದು ಲಕ್ಷಾಂತರ ಮಂದಿಗೆ ಅಕ್ಷರದ ಬೆಳಕನ್ನು ನೀಡಿದ ರಾಜೇಂದ್ರ ಸ್ವಾಮೀಜಿಯವರ ದೂರದೃಷ್ಟಿತ್ವದ ಫಲವಾಗಿ ಅಕ್ಷರ, ಅನ್ನ ಹಾಗೂ ಆರೋಗ್ಯ ಸೇವೆಗಳು ಜೆಎಸ್‌ಎಸ್ ಸಂಸ್ಥೆಯ ಮೂಲಕ ಜನರಿಗೆ ತಲುಪುತ್ತಿದೆ ಈಗಿನ ಮಠಾಧೀಶರಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯವರು ಜೆಎಸ್‌ಎಸ್ ಸಂಸ್ಥೆಯ ಸೇವೆಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಜೊತೆಗೆ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ತಿಳಿಸಿದರು.

ನಿವೃತ್ತ ಪೊಲೀಸ್ ಮಹಾನಿರೀಕ್ಷಕ ಡಾ.ಬಿ.ಆರ್.ರವಿಕಾಂತೇಗೌಡ ಸಮಾರಂಭದಲ್ಲಿ ರಾಜೇಂದ್ರ ಶ್ರೀಗಳಿಗೆ ನುಡಿ ನಮನ ಸಲ್ಲಿಸಿದರು. 

  ಇದೇ ಸಂದರ್ಭ ವಿವಿಧ ಶಿಕ್ಷಣ, ಕ್ರೀಡಾ ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಗಣನೀಯ ಸಾಧನೆ ತೋರಿರುವ ನಂಜನಗೂಡು ತಾಲೂಕಿನ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಸಮಾಜ ಸೇವಕರಾದ ಯು.ಎನ್.ಪದ್ಮನಾಭರಾವ್,  

 ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಶೋಭ ರವಿಕಾಂತೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಹಳ್ಳಿ ಸುಬ್ಬಣ್ಣ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಎಸ್.ಎಂಕೆಂಪಣ್ಣ, ನಿಕಟಪೂರ್ವ ಅಧ್ಯಕ್ಷ ಬುಲೆಟ್ ಮಹದೇವಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ಎಪಿಎಂಸಿ ಮಾಜಿ ಸದಸ್ಯ ಗುರುಸ್ವಾಮಿ, ಮುಖಂಡರಾದ ಆರ್ .ವಿ.ಮಹದೇವಸ್ವಾಮಿ, ನಂಜುಂಡಸ್ವಾಮಿ ಬೊಮ್ಮಾಯಿ, ಅರುಣ್ ಗೌಡ, ಎಂ.ಮಾದಪ್ಪ, ಹೊಸಪುರ ಮಾದಪ್ಪ, ನಾಗರಾಜಯ್ಯ ಮೊದಲಾದವರು ಉಪಸ್ಥಿತರಿದ್ದರು.

ಚಿತ್ರ(1) 

ನಂಜನಗೂಡು ನಗರದ ಜೆಎಸ್‌ಎಸ್ ಮಂಗಳ ಮಂಟಪದಲ್ಲಿ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ 111ನೇ ಜಯಂತಿ ಮಹೋತ್ಸವ ಸಮಾರಂಭದ ಉದ್ಘಾಟನೆಯನ್ನು ಸುತ್ತೂರು ಮಠಾಧ್ಯಕ್ಷ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ನೆರವೇರಿಸಿದರು