
ಪಿರಿಯಾಪಟ್ಟಣ : ಖಾಸಗಿ ಸ್ಲೀಪರ್ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಿರಿಯಾಪಟ್ಟಣದ ಬೆಂಗಳೂರು-ಮAಗಳೂರು ರಾಷ್ಟಿçÃಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.
ಬಸ್ ಚಾಲಕ ಸುನೀಲ್ (28), ಅಫ್ತಾಬ್ (23), ಸಿಬಿಲ್ ಆದಮ್ (32) ಮತ್ತು ಕ್ಯಾಲಿಕಟ್ ನಿವಾಸಿ ಶಿಬಿಲ್ ಆಡಮ್ (32) ಮೃತಪಟ್ಟವರು. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಕೇರಳಂ ರಾಜ್ಯದವರು.
ಬೆಂಗಳೂರಿನಿAದ ಮೈಸೂರಿನ ಮೂಲಕ ಕೇರಳದತ್ತ ತೆರಳುತ್ತಿದ್ದ ಕಾವೇರಿ ಟ್ರಾವೆಲ್ಸ್ ಸ್ಲೀಪರ್ ಬಸ್ಗೆ ಕೇರಳದಿಂದ ಮೈಸೂರಿನತ್ತ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ ಲ್ಲಿದ್ದ ಹಲವಾರು ಪ್ರಯಾಣಿಕರ ಕೈಕಾಲು, ಸೊಂಟ ಹಾಗೂ ಬೆನ್ನಿನ ಮೂಳೆಗಳಿಗೆ ತೀವ್ರ ಪೆಟ್ಟಾಗಿದೆ. ಗಾಯಾಳುಗಳಿಗೆ ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮೈಸೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಸಣ್ಣಪುಟ್ಟ ಗಾಯಗೊಳಗಾದ ಲಾರಿ ಚಾಲಕ ಅಪಘಾತವಾದ ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಒಂದು ಕಾಲು ಬಸ್ ನೊಳಗೆ ಸಿಲುಕಿಕೊಂಡಿದ್ದರಿAದ ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.
ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ: ಅಪಘಾತದ ಪರಿಣಾಮ ಬೆಂಗಳೂರು-ಮAಗಳೂರು ರಾಷ್ಟಿçÃಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ರಸ್ತೆಯುದ್ದಕ್ಕೂ ಸುಮಾರು ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದರಿAದ, ಸವಾರರು, ಪ್ರಯಾಣಿಕರು ಗಂಟೆ ಗಟ್ಟಲೆ ನಿಂತು ಪರದಾಡುವಂತಾಯಿತು. ಬಳಿಕ ಕ್ರೇನ್ ಹಾಗೂ ಜೆಸಿಬಿ ಯಂತ್ರಗಳ ನೆರವಿನಿಂದ ಅಪಘಾತಕ್ಕೀಡಾದ ಬಸ್ ಮತ್ತು ಲಾರಿಯನ್ನು ರಸ್ತೆಯ ಬದಿಗೆ ಸ್ಥಳಾಂತರಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡ ಡಿವೈಎಸ್ಪಿ ರವಿ ಹಾಗೂ ವೃತ್ತ ನಿರೀಕ್ಷಕ ಗೋವಿಂದ ರಾಜ್ ಅವರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇಂದು ಬೆಳಗಿನ ಜಾವ 3.15ರ ಸುಮಾರಿಗೆ ಮೈಸೂರಿನಿಂದ ಕೇರಳ ಕಡೆ ಹೊರಟಿದ್ದ ಖಾಸಗಿ ಬಸ್ ಹಾಗೂ ಕೇರಳ ಕಡೆಯಿಂದ ಮೈಸೂರಿಗೆ ಬರುತ್ತಿದ್ದ ಲಾರಿ ನಡುವೆ ಪಿರಿಯಾಪಟ್ಟಣದ ಕಿರನಲ್ಲಿ ಗೇಟ್ ಬಳಿ ಅಪಘಾತವಾಗಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಅವರೆಲ್ಲರೂ ಕೇರಳ ಮೂಲದವರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸುದ್ದಿಗಾರರಿಗೆ ತಿಳಿಸಿದರು.