Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನರೇಂದ್ರ ಮೋದಿರವರ ಆಡಳಿತದಿಂದ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ : ವಿಕ್ರಂರಾಜ್ 

ಪಂಚವಳ್ಳಿಯಲ್ಲಿ ಸೇವಾ ಸಂಕಲ್ಪ ಕಾರ್ಯಕ್ರಮ 

ಪಿರಿಯಾಪಟ್ಟಣ : ದೇಶ ಸೇವೆಗೆ ತಮ್ಮನ್ನು ತಾವು ಅರ್ಪಿಸಿಕೊಂಡಿರುವ ಮೋದಿಯವರ ಸೇವಾಕಾರ್ಯ ಸ್ಮರಣೀಯವಾದದ್ದು ಹಾಗೂ ಅವರ ಆಡಳಿತದಿಂದ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಮಹಾ ಶಕ್ತಿ ಕೇಂದ್ರದ ಉಸ್ತುವಾರಿ ವಿಕ್ರಂರಾಜ್ ತಿಳಿಸಿದರು.

ತಾಲೂಕಿನ ಪಂಚವಳ್ಳಿಯಲ್ಲಿ ಸೇವಾ ಸಂಕಲ್ಪ ಅಭಿಯಾನ ಪ್ರಯುಕ್ತ ಬಸವೇಶ್ವರ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿರವರು ಇಡೀ ವಿಶ್ವವೇ ಆಶ್ಚರ್ಯ ಪಡುವಂತ ರೀತಿಯಲ್ಲಿ ದೇಶವನ್ನು ಮಾದರಿಯಾಗಿ ಮುನ್ನಡೆಸುತ್ತಿದ್ದಾರೆ ಕಳೆದ 12 ವರ್ಷಗಳ ಆಡಳಿತ ಅವಧಿಯಲ್ಲಿ ನರೇಂದ್ರ ಮೋದಿರವರು ಕೃಷಿ, ಆರೋಗ್ಯ, ಆಧುನಿಕತೆ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಪರಿಣಾಮಕಾರಿಯಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಪ್ರತಿಯೊಂದು ಲೋಕಸಭಾ ಕ್ಷೇತ್ರಗಳಲ್ಲಿ ಆಯಾ ಕ್ಷೇತ್ರಕ್ಕೆ ಅನುಗುಣವಾಗಿ ಅಗತ್ಯವಿರುವ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವ ಸಂಸದರಲ್ಲಿ ಹೊಸ ಚೈತನ್ಯ ಮೂಡಿಸಿದ್ದಾರೆ ಅವರ ನಾಯಕತ್ವದಲ್ಲಿ ದೇಶವು ಮುಂದುವರೆಯುತ್ತಿದ್ದು ದೇಶದ ಜನರಿಗೆ ಹಲವಾರು ಯೋಜನೆಗಳನ್ನು ತಂದು ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ ಅವರ ಆಡಳಿತದಿಂದ ಇಡೀ ವಿಶ್ವವೇ ಭಾರತದ ಕಡೆಗೆ ತಿರುಗಿ ನೋಡುವಂತೆ ಮಾಡಿದ್ದಾರೆ. ಸಾಮಾಜಿಕ, ಆರ್ಥಿಕ, ಮೂಲಸೌಕರ್ಯ, ರಕ್ಷಣೆ, ವಿದೇಶಾಂಗ ಕ್ಷೇತ್ರಗಳಲ್ಲಿ ಅನೇಕ ರೀತಿಯ ಬದಲಾವಣೆಗಳನ್ನು ತರುವ ಮೂಲಕ ಭಾರತವು ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದ ಉಸ್ತುವಾರಿ ಸವಿತಾ ಚೌಹಾಣ್ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರು ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜತೆಗೆ ಬಡ ಜನತೆಗೆ ಅನುಕೂಲಕರವಾಗಿರುವ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಯಕರ್ತರು ಮನೆ ಮನೆಗೆ ತೆರಳಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ನೀಡಬೇಕು ಮೋದಿರವರು ಹಲವಾರು  ಕ್ಷೇತ್ರಗಳಲ್ಲಿದ್ದ ಏಕತಾನತೆಯನ್ನು ಹೋಗಲಾಡಿಸಿ, ಆ ಕ್ಷೇತ್ರಗಳಲ್ಲಿ ಹೊಸ ಯೋಜನೆಗಳನ್ನು ಅಥವಾ ಹೊಸ ಕ್ರಮಗಳನ್ನು ಜಾರಿಗೊಳಿಸುವ ಮೂಲಕ ಭಾರತದ ಭವ್ಯ ಭವಿಷ್ಯಕ್ಕೆ ನಾಂದಿ ಹಾಡಿದೆ ಎಂದು ಹೇಳಿದರು

ಈ ಸಂದರ್ಭದಲ್ಲಿ ಸವಿತಾ ಮುಖಂಡರಾದ ಕಾಳೆಗೌಡ, ಪಂಚವಳ್ಳಿ, ಶರವಣ ಕುಮಾರ್, ಕಿರನಹಳ್ಳಿ ಪ್ರಸನ್ನ, ತಾತನಹಳ್ಳಿ ಹರೀಶ್, ಕಲ್ಕೆರೆ ವಿದ್ಯಾಧರ, ಮುದ್ದಪ್ಪ, ಪುಷ್ಪಕರ, ಪುಟ್ಟಸ್ವಾಮಪ್ಪ, ಪ್ರಹ್ಲಾದ, ಕೆಂಪರಾಜು, ಮಲ್ಲೇಶ್ ಸೇರಿದಂತೆ ಇತರರು ಇದ್ದರು