Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸುತ್ತೂರು ಶ್ರೀ ಮಠದಲ್ಲಿ ವಿಜಯ ದಶಮಿ ವಿಶೇಷ ಪೂಜೆ

ಮೈಸೂರು; ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶ್ರೀ ಮಠದಲ್ಲಿ ನವರಾತ್ರಿ ಪ್ರಯುಕ್ತ ಅಕ್ಟೋಬರ್ 21 ಬುಧವಾರ ವಿಜಯ ದಶಮಿಯಂದು ಶ್ರೀಚಾಮುಂಡಿ ಪಾದದ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಬನ್ನಿಪೂಜೆಯನ್ನುಶ್ರೀಶಿವರಾತ್ರಿದೇಶಿಕೇಂದ್ರಮಹಾಸ್ವಾಮಿಯವರ ದಿವ್ಯ ಸಾನಿಧ್ಯದಲ್ಲಿ ಏರ್ಪಡಿಸಲಾಗಿದೆ. ಬೆಳಗ್ಗೆ ಮುಖ್ಯಮಂತ್ರಿಗಳು ಹಾಗು ಉಪಮುಖ್ಯಮಂತ್ರಿಗಳು, ಸಂಜೆ 5 ಕ್ಕೆ ರಾಜ್ಯಪಾಲರು ಆಗಮಿಸುತ್ತಾರೆ. ಸಚಿವರುಗಳು, ಜನಪ್ರತಿನಿಧಿಗಳು, ಸಾಹಿತಿಗಳು, ಕಲಾವಿದರು, ಅಧಿಕಾರಿಗಳು ಹಾಗೂ ಗಣ್ಯರು ಪಾಲ್ಗೊಳ್ಳಿಲಿದ್ದಾರೆ.
ಭಕ್ತಾಧಿಗಳು ಹಾಗೂ ಸಾರ್ವಜನಿಕರು ಆಗಮಿಸಿ ಪೂಜಾಕೈಂಕರ್ಯಗಳಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿ, ಪೂಜ್ಯರಿಂದ ಬನ್ನಿಆಶೀರ್ವಾದ ಪಡೆಯಲು ಕೋರಿದೆ.