Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎಚ್‌ಎಸ್‌ಟಿಆರ್ ನೇಮಕಾತಿಯಲ್ಲಿ ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಇಂಟಿಗ್ರೇಟೆಡ್ ಪದವೀಧರರಿಗೆ ನ್ಯಾಯ ಒದಗಿಸಿ: ಎಬಿವಿಪಿ ಆಗ್ರಹ


ಮೈಸೂರು : ಪ್ರಾದೇಶಿಕ ಶಿಕ್ಷಣ ಸಂಸ್ಥೆ , ಮೈಸೂರಿನಲ್ಲಿ ಇಂಟಿಗ್ರೇಟೆಡ್ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ, ಅರ್ಹತೆಗೆ ತಕ್ಕಂತೆ ಅವಕಾಶ ಕಲ್ಪಿಸಬೇಕೆಂದು ಎಬಿವಿಪಿ ಮೈಸೂರು ಜಿಲ್ಲಾ ಸಂಚಾಲಕ ನಂದನ್ ಕುಮಾರ್ ಹೆಚ್. ಆಗ್ರಹಿಸಿದ್ದಾರೆ.
ಈ ಕುರಿತು ಶುಕ್ರವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿರುವ ಅವರು,
1964ರಿಂದ ಶಿಕ್ಷಕರ ಶಿಕ್ಷಣ ಮತ್ತು ತರಬೇತಿಗೆ ವಿಶೇಷ ಒತ್ತು ನೀಡುತ್ತಾ ಬಂದಿರುವ ದೇಶದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಮೈಸೂರು ಕೂಡ ಒಂದಾಗಿದೆ. ಈ ಸಂಸ್ಥೆಯು ಶಿಕ್ಷಕರ ತರಬೇತಿ ಮತ್ತು ಗುಣಮಟ್ಟದ ಶಿಕ್ಷಣವನ್ನು ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.
ಇಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ವಿಶೇಷ ತರಬೇತಿ ಪಡೆದು ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಹೈಸ್ಕೂಲ್ ಟೀಚರ್ ನೇಮಕಾತಿಯಲ್ಲಿ ಅರ್ಹತಾ ಮಾನದಂಡಗಳ ಕಾರಣದಿಂದ ಅನ್ಯಾಯವಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇತರ ಶಿಕ್ಷಣ ಸಂಸ್ಥೆಗಳಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವ ಸಂದರ್ಭದಲ್ಲಿ, ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಪದವೀಧರರಿಗೆ ಸಮಾನ ಅವಕಾಶ ದೊರೆಯದಿರುವುದು ಅವರ ಭವಿಷ್ಯಕ್ಕೆ ಧಕ್ಕೆಯುಂಟುಮಾಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ವಿಶೇಷ ತರಬೇತಿ ಹಾಗೂ ಪದವಿ ಪಡೆದಿರುವ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಶಿಕ್ಷಕರ ನೇಮಕಾತಿಯಲ್ಲಿ ಅವಕಾಶ ಪಡೆಯಲು ಅರ್ಹರಾಗಿದ್ದಾರೆ. ಆದರೆ, ಪ್ರಸ್ತುತ ನೇಮಕಾತಿ ಪ್ರಕ್ರಿಯೆಯಲ್ಲಿ ಅವರಿಗೆ ಸೂಕ್ತ ಅವಕಾಶ ದೊರೆಯದಿರುವುದು ಅವರ ಉದ್ಯೋಗಾವಕಾಶಗಳ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ, ಈ ಸಮಸ್ಯೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಮಸ್ಯೆಯನ್ನು ಈಗಾಗಲೇ ಸಂಬAಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ, ಇದುವರೆಗೆ ಯಾವುದೇ ಸಮರ್ಪಕ ಪರಿಹಾರ ದೊರೆತಿಲ್ಲ. ಹೀಗಾಗಿ, ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದ್ದು, ಅವರ ಹಿತದೃಷ್ಟಿಯಿಂದ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಬೇಕಾಗಿದೆ.
ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಮೈಸೂರಿನ ಹಿರಿಯ ವಿದ್ಯಾರ್ಥಿಗಳು ಹಾಗೂ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಒಟ್ಟಾಗಿ ಮನವಿ ಸಲ್ಲಿಸಿ, ಇಂಟಿಗ್ರೇಟೆಡ್ ಪದವೀಧರರ ಶೈಕ್ಷಣಿಕ ಅರ್ಹತೆಗಳನ್ನು ಊSಖಿಖ ನೇಮಕಾತಿಯಲ್ಲಿ ಸೂಕ್ತವಾಗಿ ಪರಿಗಣಿಸಿ, ಅವರಿಗೆ ನ್ಯಾಯ ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
ಮುಖ್ಯಮಂತ್ರಿಗಳು ಹಾಗೂ ಸಂಬAಧಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಅರ್ಹ ವಿದ್ಯಾರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆಯಲ್ಲಿ ಸಮಾನ ಅವಕಾಶ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ಮೈಸೂರು ಜಿಲ್ಲಾ ಘಟಕ ಆಗ್ರಹಿಸುತ್ತದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು