Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರಿನ ಪಾರ್ಕ್ ನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ


ಮೈಸೂರು: ನಗರದ ಜಾಕಿ ಕ್ವಾಟ್ರಸ್ ಬಳಿ ಪಾರ್ಕ್ನಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು, ಅದನ್ನು ಸೆರೆ ಹಿಡಿಯಲಾಯಿತು. ಪಾರ್ಕ್ ಬಳಿ ಇದ್ದ ಸ್ಥಳೀಯರು ಪೊದೆಯೊಳಗೆ ಚಲಿಸುತ್ತಿದ್ದ ಸುಮಾರು 10 ಅಡಿ ಉದ್ದದ ಹೆಬ್ಬಾವನ್ನು ಕಂಡು ಸ್ಥಳೀಯರು ತೀವ್ರ ಆತಂಕಗೊAಡರು. ತಕ್ಷಣ ಉರಗ ತಜ್ಞ ಸ್ನೇಕ್ ಪ್ರದೀಪ್ ಅವರಿಗೆ ಕರೆ ಮಾಡಿದ್ದಾರೆ. ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಬಂದ ಸ್ನೇಕ್ ಪ್ರದೀಪ್, ಟಾರ್ಚ್ ಬೆಳಕಿನಲ್ಲಿ ಅತ್ಯಂತ ಜಾಗರೂಕತೆಯಿಂದ ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಸಂರಕ್ಷಿಸಿ,
ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ನಗರದ ಹೊರ ವಲಯದಲ್ಲಿರುವ ಸಾಮಾಜಿಕ ಅರಣ್ಯದ ಅಂಚಿನಲ್ಲಿ ಸುರಕ್ಷಿತವಾಗಿ ಬಿಟ್ಟಿದ್ದಾರೆ.