
ಮೈಸೂರು; ನಗರ ಕೇಂದ್ರ ಗ್ರಂಥಾಲಯ ಮೈಸೂರು ಹಾಗೂ ಬೆಂಗಳೂರಿನ ಜ್ಞಾನಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಇಂದು ಕೆಎಎಸ್ ಪೂರ್ವಭಾವಿ ಪರೀಕ್ಷೆಗೆ ಸಂಬAಧಿಸಿದ ಮೂರನೇ ಅಣಕು ಪರೀಕ್ಷೆಯ ಮೊದಲ ಪತ್ರಿಕೆಯ ಅಣಕು ಪರೀಕ್ಷೆ ನಡೆಸಲಾಯಿತು.
ಅಣಕು ಪರೀಕ್ಷೆಗೆ ಚಾಲನೆ ನೀಡಿದ ನಿವೃತ್ತ ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಲು ನಿರಂತರ ಅಭ್ಯಾಸ ಮತ್ತು ಪರಿಶ್ರಮವನ್ನು ರೂಢಿಸಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳಲ್ಲಿ ಸಾಧನೆಯ ಹಂಬಲ ಹಾಗೂ ಆರೋಗ್ಯಕರ ಸ್ಪರ್ಧಾ ಮನೋಭಾವ ಇರಬೇಕು ಎಂದರು.
ಜೀವನದಲ್ಲಿ ನಡೆಯುವ ಘಟನೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಆಗುವುದೆಲ್ಲ ಒಳ್ಳೆಯದಕ್ಕೆ, ಆಗುತ್ತಿರುವುದೆಲ್ಲ ಒಳ್ಳೆಯದೇ' ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ಯಾವುದೇ ನಕಾರಾತ್ಮಕ ಆಲೋಚನೆಗಳಿಗೆ ಅವಕಾಶ ನೀಡದೆ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಸಲಹೆ ನೀಡಿದರು. ಕುವೆಂಪು ಅವರ ಶ್ರೀರಾಮಾಯಣ ದರ್ಶನಂ’ ಕೃತಿಯ ಆಶಯಗಳನ್ನು ಸ್ಮರಿಸಿ ವಿದ್ಯಾರ್ಥಿಗಳು ಉನ್ನತ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮಾಜಿ ರಾಷ್ಟçಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಆಶಯದಂತೆ ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಾಣಬೇಕು. ಕನಸುಗಳನ್ನು ನನಸಾಗಿಸಲು ದೃಢಸಂಕಲ್ಪದಿAದ ನಿರಂತರ ಪ್ರಯತ್ನ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು.
ಮೈಸೂರು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಮಂಜುನಾಥ .ಬಿ ಮಾತನಾಡಿ, ಅ.30 ರಂದು ಬೆಳಿಗ್ಗೆ 11 ಗಂಟೆಗೆ ಪೀಪಲ್ಸ್ ಪಾರ್ಕ್ ಗ್ರಂಥಾಲಯದಲ್ಲಿ ಮೂರನೇ ಅಣುಕು ಪರೀಕ್ಷೆಯ 2ನೇ ಪತ್ರಿಕೆಯ ಅಣುಕು ಪರೀಕ್ಷೆಯು ನಡೆಯಲಿದೆ ಎಂದರು ಹಾಗೂ ಕಾರ್ಯಕ್ರಮದಲ್ಲಿ ಪೀಪಲ್ಸ್ ಪಾರ್ಕ್ ನಗರ ಕೇಂದ್ರ ಗ್ರಂಥಾಲಯದ ಸಹಾಯಕ ಗ್ರಂಥಪಾಲಕಿ ಸೌಮ್ಯ ಎಸ್. ಮತ್ತು ಸಿಬ್ಬಂದಿಗಳು ಹಾಜರಿದ್ದರು.