Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ


ಮೈಸೂರು; ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ “ಒತ್ತಡ ನಿರ್ವಹಣೆ” ಕುರಿತು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಚಾರ್ಯ ಎಚ್. ಸತ್ಯಪ್ರಸಾದ್, ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ, ಆತ್ಮವಿಶ್ವಾಸ ಮತ್ತು ವ್ಯಕ್ತಿತ್ವ ವಿಕಸನವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ಥೆöÊರ್ಯ, ಸಕಾರಾತ್ಮಕ ಮನೋಭಾವವನ್ನು ಬೆಳೆಸುವ ದೃಷ್ಟಿಯಿಂದ ಈ ಕಾರ್ಯಕ್ರಮ ಮಹತ್ವಪೂರ್ಣವಾದುದು ಎಂದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಚರಿತ.ಆರ್, ದೇವಿಕ.ಬಿ, ಚಿರಾಗ್.ಪಿ ಮತ್ತು ದಿಗಂತ್.ಆರ್.ಎಸ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆಯ ಮಹತ್ವದ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಪರೀಕ್ಷೆಯ ಭಯ, ಅಂಕಗಳ ಒತ್ತಡ, ಪೋಷಕರ ನಿರೀಕ್ಷೆಗಳು, ಸಮಯದ ಅಭಾವ, ಮತ್ತು ಸ್ಪರ್ಧಾತ್ಮಕ ಮನೋಭಾವದಿಂದ ಉಂಟಾಗುವ ಮಾನಸಿಕ ಒತ್ತಡಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಒತ್ತಡವನ್ನು ಸಮರ್ಥವಾಗಿ ನಿರ್ವಹಿಸಲು ಸಕಾರಾತ್ಮಕ ಚಿಂತನೆ, ಸಮಯ ನಿರ್ವಹಣೆ, ನಿಯಮಿತ ವ್ಯಾಯಾಮ, ಸಮರ್ಪಕ ನಿದ್ರೆ ಮತ್ತು ಆರೋಗ್ಯಕರ ಜೀವನಶೈಲಿ ಬಹಳ ಮುಖ್ಯ ಎಂದರು. ವಿಶೇಷವಾಗಿ ಪರೀಕ್ಷಾ ಸಮಯದಲ್ಲಿ ಆತ್ಮವಿಶ್ವಾಸವನ್ನು ಕಳೆದುಕೊಳ್ಳದೆ ಸೂಕ್ತ ಅಧ್ಯಯನ ಯೋಜನೆಯನ್ನು ರೂಪಿಸಿಕೊಂಡು ಶಾಂತಚಿತ್ತದಿAದ ಪರೀಕ್ಷೆಗಳನ್ನು ಎದುರಿಸಿ ಸಫಲವಾಗಬೇಕೆಂದರು.
ಒತ್ತಡವನ್ನು ತಪ್ಪಿಸುವುದಕ್ಕಿಂತ ಅದನ್ನು ಸಮರ್ಥವಾಗಿ ನಿರ್ವಹಿಸುವ ಕೌಶಲವನ್ನು ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯ ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ತಿಳಿಸಲಾಯಿತು.