
ಮೈಸೂರು: ಕರ್ನಾಟಕ ಸೈಕಲ್ ಪೋಲೋ ಸಂಸ್ಥೆಯು ಮೈಸೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸೈಕಲ್ ಪೋಲೋ ಪಂದ್ಯಾವಳಿಯಲ್ಲಿ ಮೈಸೂರಿನ ಸರಸ್ವತಿಪುರಂನ ವಿಜಯ ವಿಠ್ಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ, ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ಸ್ಪರ್ಧೆಯಲ್ಲಿ ಗಗನ್ ಎಂ. ಗೌಡ ಹಾಗೂ ರಕ್ಷಿತ್ಎಸ್ ಕಿರಿಯರ ಮತ್ತು ಸಬ್-ಜೂನಿಯರ್ ವಿಭಾಗಗಳೆರಡರಲ್ಲೂ ಪ್ರಥಮ ಸ್ಥಾನ ಪಡೆದರೆ, ಜೀವಿಕ ಬಿ. ಎಸ್, ಪೂಜಾ ಎಂ., ಸಾನ್ವಿ ಪಿ. ಹಾಗೂ ತನಿಷ್ಕಎಸ್ ಅವರು ಕಿರಿಯರ ಮತ್ತು ಹಿರಿಯರ ವಿಭಾಗಗಳಲ್ಲಿ ಪ್ರಥಮ ಹಾಗೂ ಸಬ್-ಜೂನಿಯರ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಹಾಗೆಯೇ ಮೊಹಿತ್ಎಸ್. ಗೌಡ ಸಬ್-ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ವರ್ಷಿಣಿ ಜಿ. ಜೋಶಿ ಅದೇ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಶಿಷ್ಟ ಸಾಧನೆಗೈದ ಈ ಎಲ್ಲಾ ವಿದ್ಯಾರ್ಥಿಗಳು ಒಡಿಶಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸೈಕಲ್ ಪೋಲೋ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.