Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಂಟೇನರ್ ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು


ಮೈಸೂರು: ಕಂಟೇನರ್ ಲಾರಿಯ ಹಿಂಬದಿ ಚಕ್ರ ಹರಿದು ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಮೈಸೂರಿನ ಐಪಿಎಸ್ ನಗರ ಸಮೀಪದ ರಿಂಗ್ ರಸ್ತೆಯಲ್ಲಿ ಭಾನುವಾರ ನಡೆದಿದೆ.
ಮೈಸೂರಿನ ನಂದಿನಿ ಬಡಾವಣೆ ನಿವಾಸಿ ಮಹಾದೇವಪ್ಪ ಎಂಬವರ ಪತ್ನಿ ಕಾತ್ಯಾಯಿನಿ (57) ಮೃತಪಟ್ಟ ದುರ್ದೈವಿ.
ಪತಿ ಮಹಾದೇವಪ್ಪ ಅವರೊಂದಿಗೆ ನಂಜನಗೂಡಿನ ಸಂಬAಧಿಕರ ಮನೆಯ ಶುಭಕಾರ್ಯ ಮುಗಿಸಿಕೊಂಡು, ಸ್ಕೂಟರ್‌ನಲ್ಲಿ ಮೈಸೂರಿಗೆ ವಾಪಸ್ಸಾಗುತ್ತಿದ್ದ ವೇಳೆ ಐಪಿಎಸ್ ನಗರದ ರಿಂಗ್ ರಸ್ತೆ ಬಳಿ ಬ್ಯಾರಿಕೇಡ್‌ಗಳನ್ನು ಬಳಸಿ ಮುಂದೆ ಸಾಗುತ್ತಿದ್ದಾಗ, ಪಕ್ಕದಲ್ಲಿ ಬಂದ ಕಂಟೇನರ್ ಲಾರಿ ಸ್ಕೂಟರ್‌ಗೆ ತಾಗಿದ್ದು, ಸ್ಕೂಟರ್ ಮೇಲಿನ ನಿಯಂತ್ರಣ ಕಳೆದುಕೊಂಡ ಮಹಾದೇವಪ್ಪ ಬಲಭಾಗಕ್ಕೆ ಬಿದ್ದಿದ್ದಾರೆ. ಹಿಂಬದಿಯಲ್ಲಿದ್ದ ಕಾತ್ಯಾಯಿನಿ ರಸ್ತೆಗೆ ಬಿದ್ದಿದ್ದು, ಕಂಟೇನರ್ ಲಾರಿಯ ಹಿಂಬದಿ ಚಕ್ರ ಅವರ ಮೇಲೆ ಹರಿದಿದೆ. ಇದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಘಟನೆಯಿಂದಾಗಿ ಆ ಮಾರ್ಗದಲ್ಲಿ ವಾಹನ ಸಂಚಾರ ಕೆಲ ನಿಮಿಷಗಳ ಕಾಲ ಅಸ್ತವ್ಯಸ್ತಗೊಂಡಿತ್ತು.
ವಿಷಯ ತಿಳಿಯುತ್ತಿದ್ದಂತೆ ಸಿದ್ದಾರ್ಥನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ಬಳಿಕ ಕಂಟೇನರ್ ಚಾಲಕ ಲಾರಿಯನ್ನು ನೂರು ಮೀಟರ್ ದೂರಕ್ಕೆ ಕೊಂಡೊಯ್ದು ರಸ್ತೆ ಬದಿಯಲ್ಲಿ ನಿಲ್ಲಿಸಿ ಪರಾರಿಯಾಗಿದ್ದಾನೆ.