
ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ ವಿದ್ಯಾರ್ಥಿಗಳು
ಮೈಸೂರು: ನಗರದ ನಾರಾಯಣ ಶಾಸ್ತಿç ರಸ್ತೆಯಲ್ಲಿರುವ ಸದ್ವಿದ್ಯಾ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿAದ ಆಚರಿಸಲಾಯಿತು. ಕಾರ್ಯಕ್ರಮವು ನಾಡಗೀತೆಯ ಗಾಯನದೊಂದಿಗೆ ಆರಂಭಗೊAಡಿತು. ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ, ಇತಿಹಾಸ ಹಾಗೂ ನಾಡಿನ ಮಹನೀಯರ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕನ್ನಡದ ಕುರಿತಾದ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ತಮ್ಮ ಕನ್ನಡ ಜ್ಞಾನವನ್ನು ಪ್ರದರ್ಶಿಸಿದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ನಂತರ ತಾಯಿ ಭುವನೇಶ್ವರಿಯ ರಥಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಮರ್ಪಿಸಲಾಯಿತು. ಬಳಿಕ ಕನ್ನಡ ನಾಡಿನ ಹಿರಿಮೆ, ಗರಿಮೆ ಹಾಗೂ ಭಾಷಾಭಿಮಾನವನ್ನು ಸಾರುವ ಜಾಥಾಕ್ಕೆ ಸಂಸ್ಥೆಯ ಕಾರ್ಯದರ್ಶಿ ಎಂ.ಡಿ. ಗೋಪಿನಾಥ್ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ; ಅದು ನಮ್ಮ ನಾಡಿನ ಅಸ್ಮಿತೆ, ಸಂಸ್ಕöÈತಿ, ಪರಂಪರೆ ಹಾಗೂ ಸ್ವಾಭಿಮಾನದ ಪ್ರತೀಕವಾಗಿದೆ. ಕನ್ನಡ ನಾಡು, ನುಡಿ, ನೆಲ, ಜಲ ಮತ್ತು ಭಾಷೆಯ ಶ್ರೀಮಂತ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಕನ್ನಡದ ಕಂಪು ವಿದ್ಯಾರ್ಥಿಗಳ ಮನದಲ್ಲಿ ಸದಾ ಪಸರಿಸಲಿ, ಕನ್ನಡ ಭಾಷೆಯ ಮೇಲಿನ ಅಭಿಮಾನ ಕೇವಲ ರಾಜ್ಯೋತ್ಸವಕ್ಕೆ ಸೀಮಿತವಾಗದೆ ನಿತ್ಯ ಜೀವನದ ಭಾಗವಾಗಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಬಾಲಾಜಿ, ಸಹಕಾರ್ಯದರ್ಶಿ ಕೆ.ಎನ್. ಫಣೀಶ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ರಾಮಚಂದ್ರ ಭಟ್ ಉಪಸ್ಥಿತರಿದ್ದರು.