
ಮೈಸೂರು: ಬಾಲಿವುಡ್ನ ಖ್ಯಾತ ನಟ ರಣವೀರ್ಸಿಂಗ್ ಅವರು ತಾನು ಮಾಡಿದ ತಪ್ಪಿಗಾಗಿ ಮಂಗಳವಾರ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ಮುಂದೆ ಕುಳಿತು ಕ್ಷಮೆಯಾಚಿಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಆಗಮಿಸಿದ ಅವರು, ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಾರ್ಥಿಸಿ ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿ, ತನ್ನನ್ನು ಕ್ಷಮಿಸಿ ತಾಯಿ ಎಂದು ಅಂಗಲಾಚಿದರು. ಬೆಟ್ಟದ ತಾಯಿಯಲ್ಲಿ ಕ್ಷಮೆಯಾಚಿಸಿದರು.
ಏನಿದು ಪ್ರಕರಣದ ಹಿನ್ನೆಲೆ : ೨೦೨೫ರ ನವೆಂಬರ್ ೨೮ರಂದು ಗೋವಾದಲ್ಲಿ ನಡೆದ ಅಂತಾರಾಷ್ಟಿçÃಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ್ದ ನಟ ರಣವೀರ್ ಸಿಂಗ್, ಕಾಂತಾರ ಚಲನಚಿತ್ರದಲ್ಲಿ ಚಿತ್ರಿಸಲಾದ ಪವಿತ್ರ ದೈವ (ದೈವ ಕೋಲ) ಸಂಪ್ರದಾಯವನ್ನು ಬಹಿರಂಗವಾಗಿ ಅಪಹಾಸ್ಯ ಮಾಡಿದ್ದರು. ವೇದಿಕೆಯಲ್ಲಿದ್ದ ಸಿಂಗ್ ಅವರು ಪಂಜುರ್ಲಿ/ಗುಳಿಗ ದೈವದ (ಕರಾವಳಿ ಕರ್ನಾಟಕ ಪ್ರದೇಶದಲ್ಲಿ ಪೂಜಿಸಲ್ಪಡುವ ಪವಿತ್ರ ಶಕ್ತಿ) ದೈವಿಕ ಅಭಿವ್ಯಕ್ತಿಗಳನ್ನು ಅಸಭ್ಯ, ಅವಹೇಳನಕಾರಿ ಮತ್ತು ಹಾಸ್ಯಮಯ ರೀತಿಯಲ್ಲಿ ಅನುಕರಿಸಿದ್ದಾರೆ. ಪವಿತ್ರ ದೈವವನ್ನು “ಭೂತ” (“ಸ್ತಿçà ಭೂತ”) ಎಂದು ಮೌಖಿಕವಾಗಿ ಉಲ್ಲೇಖಿಸಿದ್ದಾರೆ. ಚಿತ್ರದಲ್ಲಿ ಅದು ನಮ್ಮ ರಾಜ್ಯದ ಅಧಿದೇವತೆ ಚಾಮುಂಡೇಶ್ವರಿಯಾಗಿದ್ದು, ನಮ್ಮ ಸಂಸ್ಕöÈತಿ ಮತ್ತು ಧಾರ್ಮಿಕ ನಂಬಿಕೆಯಲ್ಲಿ ದೈವವು ದೆವ್ವವಲ್ಲ. ದೇವರನ್ನು “ಭೂತ” ಎನ್ನುವ ಮೂಲಕ ರಣವೀರ್ ಅವರಿಂದ ದೇವದೂಷಣೆಯಾಗಿದೆ ಮತ್ತು ಹಿಂದೂ ನಂಬಿಕೆಗಳಿಗೆ ಉದ್ದೇಶಪೂರ್ವಕ ನೋವುಂಟು ಮಾಡಲಾಗಿದೆ. ಲಕ್ಷಾಂತರ ಅನುಯಾಯಿಗಳನ್ನು ಹೊಂದಿರುವ ನಟರೊಬ್ಬರು ಅಂತಾರಾಷ್ಟಿçÃಯ ವೇದಿಕೆಯಲ್ಲಿ ಇಂಥ ವ್ಯಂಗ್ಯ ಪ್ರದರ್ಶಿಸುವ ಮೂಲಕ ಕಾಂತಾರ ಚಲನಚಿತ್ರ ಮಾತ್ರವಲ್ಲದೇ, ತುಳು ಸಂಪ್ರದಾಯದಲ್ಲಿ ಆಳವಾಗಿ ಬೇರೂರಿರುವ ಆಧ್ಯಾತ್ಮಿಕ ನಂಬಿಕೆಗಳನ್ನು ಅಪಹಾಸ್ಯ ಮಾಡಿದ್ದಾರೆ. ಇದು ದೈವ ಭಕ್ತರು ಮತ್ತು ಸಾರ್ವಜನಿಕರಿಗೆ ತೀವ್ರ ಮಾನಸಿಕ ಯಾತನೆ, ಕೋಪ ಮತ್ತು ಅಸಮಾಧಾನ ಉಂಟುಮಾಡಿದೆ. ಇದು ಸಾರ್ವಜನಿಕ ಶಾಂತಿ ಭಂಗಗೊಳಿಸುವ ಮತ್ತು ಸಮುದಾಯಗಳ ನಡುವೆ ದ್ವೇಷ ಉತ್ತೇಜಿಸಬಹುದು ಎಂದು ಆರೋಪಿಸಿ ದೂರು ನೀಡಲಾಗಿತ್ತು.
ದೂರಿನ ಸಂಬAಧ ರಣವೀರ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಎಫ್ಐಆರ್ ರದ್ದುಪಡಿಸುವಂತೆ ಕೋರಿ ರಣವೀರ್ ಸಿಂಗ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಬಳಿಕ ಬೇಷರತ್ ಕ್ಷಮೆಯಾಚಿಸಿರುವ ಪ್ರಮಾಣ ಪತ್ರವನ್ನು ಕೋರ್ಟ್ಗೆ ಸಲ್ಲಿಸಿದ್ದರು. ಜೊತೆಗೆ, ಚಾಮುಂಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ ಎಂದು ರಣವೀರ್ ಪರ ವಕೀಲರು ಹೈಕೋರ್ಟ್ಗೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಒಂದು ತಿಂಗಳಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಬೇಕೆಂದು ಹೈಕೋರ್ಟ್ ನಿರ್ದೇಶನ ನೀಡಿ, ಅವರ ವಿರುದ್ಧದ ಪ್ರಕರಣ ಇತ್ಯರ್ಥಪಡಿಸಿತ್ತು.
ಈ ಹಿನ್ನಲೆಯಲ್ಲಿ ಇಂದು ಬೆಳಗ್ಗೆ ೭.೩೦ ವೇಳೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ರಣವೀರ್ ಸಿಂಗ್, ಯಾವುದೇ ಸೆಲೆಬ್ರಿಟಿ ಹಮ್ಮಿಲ್ಲದೆ ತೀರಾ ಸಾಮಾನ್ಯರಂತೆ ದೇವಸ್ಥಾನದಲ್ಲಿ ದೇವಿಯ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು. ಗರ್ಭಗುಡಿಯ ಬಳಿ ಅತ್ಯಂತ ಭಕ್ತಿಭಾವದಿಂದ ಕುಳಿತು ಪ್ರಾರ್ಥನೆ ಸಲ್ಲಿಸಿದರು. ಈ ಮೂಲಕ ತಮ್ಮ ಹಳೆಯ ಹೇಳಿಕೆಗೆ ದೇವಿಯ ಸನ್ನಿಧಿಯಲ್ಲಿ ಪಶ್ಚಾತ್ತಾಪ ವ್ಯಕ್ತಪಡಿಸಿ, ಕ್ಷಮೆಯಾಚಿಸಿದರು.
ಯಾವುದೇ ಮುನ್ಸೂಚನೆ ಇಲ್ಲದೆ ಹಠಾತ್ತನೆ ಬಾಲಿವುಡ್ ತಾರೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು, ಅಲ್ಲಿ ನೆರೆದಿದ್ದ ಭಕ್ತರಲ್ಲಿ ಮತ್ತು ಅವರ ಅಭಿಮಾನಿಗಳಲ್ಲಿ ಆಶ್ಚರ್ಯವನ್ನುಂಟು ಮಾಡಿತ್ತು.