
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಜೂನ್ 3 ರಂದು ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರ ಹೆಸರನ್ನ ಹಂಗಾಮಿ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಹಿರಿಯ ಶಾಸಕರು ಅನುಮೋದನೆ ನೀಡಿದರು.
ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಲು ಎಲ್ಲಾ ಶಾಸಕರು ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಸಿಎಲ್ ಪಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಸಿಎಲ್ಪಿ ನಾಯಕನಾಗಿ ಆಯ್ಕೆಯಾದ ಬಳಿಕ ಲೋಕಭವನಕ್ಕೆ ತೆರಳಿದ ಡಿ.ಕೆ.ಶಿವಕುಮಾರ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಜೂನ್ 3 ಬುಧವಾರ ಲೋಕಭವನದ ಗಾಜಿನಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ 14 ರಿಂದ 15 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
ಸಚಿವರಾಗುವ ಸಂಭಾವ್ಯರ ಪಟ್ಟಿ ಹೀಗಿದೆ ನೋಡಿ
ಯು. ಟಿ ಖಾದರ್, ಕೃಷ್ಣೇಭೈರೇಗೌಡ, , ಪ್ರಿಯಾಂಕ್ ಖರ್ಗೆ, ಕೆಜೆ ಜಾರ್ಜ್, ಡಾ.ಜಿ. ಪರಮೇಶ್ವರ್ ,ಎಂಬಿ ಪಾಟೀಲ್, ಭೈರತಿ ಸುರೇಶ್, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಲಕ್ಷಿ÷್ಮÃ ಹೆಬ್ಬಾಳ್ಕರ್, ರೂಪಾ ಶಶಿಧರ್, ಯತೀಂದ್ರ ಸಿದ್ದರಾಮಯ್ಯ, ಚಲುವರಾಯಸ್ವಾಮಿ , ಹ್ಯಾರಿಸ್ ಸಾಂಭವ್ಯ ಸಚಿವರಾಗುವವರು ಎಂದು ಹೇಳಲಾಗುತ್ತಿದೆ.