Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಜಯ ವಿಠ್ಠಲದಲ್ಲಿ ವಿಶ್ವ ಪರಿಸರ ದಿನಾಚರಣೆ


ಮೈಸೂರು; ನಗರದ ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಗಿಡಕ್ಕೆ ನೀರೆರೆಯುವುದರ ಮೂಲಕ ಕರ‍್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಚಾರ್ಯ ಎಚ್.ಸತ್ಯಪ್ರಸಾದ್, ಪರಿಸರವನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಅತ್ಯಾವಶ್ಯಕವಾಗಿದೆ ಎಂದು ಹೇಳಿದರು.
ಪರಿಸರವು ನಮಗೆ ಶುದ್ಧ ಗಾಳಿ, ನೀರು, ಆಹಾರ ಹಾಗೂ ಸುಂದರವಾದ ಬದುಕನ್ನು ನೀಡುತ್ತದೆ. ಆದರೆ ಮಾಲಿನ್ಯ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ನಾವು ಮರಗಳನ್ನು ಬೆಳೆಸುವುದು, ನೀರನ್ನು ಉಳಿಸುವುದು ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡುವುದರ ಮೂಲಕ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಬಹುದು. ಒಂದು ಭೂಮಿ ಒಂದು ಅವಕಾಶ ಎಂಬ ಸಂದೇಶವನ್ನು ಮನಗಂಡು ಪ್ರಕೃತಿಯನ್ನು ಸಂರಕ್ಷಿಸುವ ಸಂಕಲ್ಪ ಮಾಡಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಇಂದಿರಾ, ವಿಂಧ್ಯಾ ಪ್ರಸಾದ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.