3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕ್ರೀಡಾ ವಸತಿ ನಿಲಯಗಳಲ್ಲಿ ಯೋಗ ತರಬೇತುದಾರರನ್ನು ನೇಮಿಸಿಕೊಂಡು ಯೋಗ ತರಬೇತಿ ಆರಂಭಿಸಿ;ರಮೇಶ್ ಶೆಟ್ಟಿ


ಮೈಸೂರು: ಮೈಸೂರು ಜಿಲ್ಲೆಯ ಕ್ರೀಡಾ ವಸತಿ ನಿಲಯಗಳಲ್ಲಿ ಯೋಗ ತರಬೇತಿ ಆರಂಭಿಸಿ, ಅರ್ಹ ಯೋಗ ತರಬೇತುದಾರರನ್ನು ನೇಮಿಸಿ, ಯೋಗ ಕ್ರೀಡೆಗೆ ಉತ್ತೇಜನ ನೀಡಬೇಕೆಂದು ಅಂತರರಾಷ್ಟಿçÃಯ ಯೋಗ ಶಿಕ್ಷಕ ರಮೇಶ್ ಶೆಟ್ಟಿ ಒತ್ತಾಯಿಸಿದರು.
ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಮ,
ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಅನೇಕ ಯೋಗ ಪ್ರತಿಭೆಗಳು ಹೊರಹೊಮ್ಮುತ್ತಿದ್ದು, ರಾಜ್ಯ ಹಾಗೂ ರಾಷ್ಟಿçÃಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಉತ್ತಮ ಸಾಧನೆ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ. ಯೋಗ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳಿದ್ದರೂ, ಪ್ರತಿಭಾವಂತ ವಿದ್ಯಾರ್ಥಿಗಳು ಇನ್ನಷ್ಟು ಅಭಿವೃದ್ಧಿ ಹೊಂದಲು ಅಗತ್ಯವಾದ ತರಬೇತಿ ವ್ಯವಸ್ಥೆ ಹಾಗೂ ಪರಿಣತ ಮಾರ್ಗದರ್ಶನದ ಕೊರತೆ ಕಂಡು ಬರುತ್ತಿದೆ ಎಂದು ದೂರಿದರು.
ಮೈಸೂರು ಯೋಗ ನಗರಿ'' ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಇಲ್ಲಿನ ಯೋಗ ಪರಂಪರೆ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿದೆ. ಆದರೆ ಯೋಗ ಕ್ರೀಡಾಪಟುಗಳಿಗೆ ನಿರಂತರ, ತಾಂತ್ರಿಕ ಹಾಗೂ ವೈಜ್ಞಾನಿಕ ತರಬೇತಿ ದೊರೆಯಬೇಕಾದರೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದರು. ವಿಶೇಷವಾಗಿ ಯೋಗದಲ್ಲಿ ಎನ್‌ಐಎಸ್ ಪದವಿ ಅಥವಾ ಸಮಾನ ಅರ್ಹತೆ ಪಡೆದ ಯೋಗ ತರಬೇತುದಾರರನ್ನು ಕ್ರೀಡಾ ವಸತಿ ನಿಲಯಗಳಲ್ಲಿ ನೇಮಕ ಮಾಡಿದಲ್ಲಿ, ವಿದ್ಯಾರ್ಥಿಗಳಿಗೆ ತಾಂತ್ರಿಕ. ಸ್ಪರ್ಧಾತ್ಮಕ ಹಾಗೂ ವೈಜ್ಞಾನಿಕ ತರಬೇತಿ ಲಭ್ಯವಾಗಲಿದೆ. ಇದರೊಂದಿಗೆ ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಉತ್ತಮ ವೇದಿಕೆ ಸಿಗಲಿದೆ ಎಂದು ಹೇಳಿದರು. ಯೋಗ ಕ್ರೀಡೆಯನ್ನು ಕೇವಲ ಆರೋಗ್ಯದ ಚಟುವಟಿಕೆಯಾಗಿ ಮಾತ್ರವಲ್ಲದೆ, ಕ್ರೀಡಾ ಕ್ಷೇತ್ರದಲ್ಲಿಯೂ ಬೆಳೆಸಲು ಅಗತ್ಯ ಕ್ರಮ ಕೈಗೊಂಡರೆ, ಮೈಸೂರಿನ ಇನ್ನಷ್ಟು ಯೋಗ ಪ್ರತಿಭೆಗಳು ರಾಷ್ಟಿçÃಯ ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಲು ಅವಕಾಶ ದೊರೆಯಲಿದೆ.ಆದ್ದರಿಂದ ಮೈಸೂರು ಜಿಲ್ಲೆಯ ಕ್ರೀಡಾ ವಸತಿ ನಿಲಯಗಳಲ್ಲಿ ಯೋಗ ತರಬೇತಿಯನ್ನು ಆರಂಭಿಸಿ, ಅರ್ಹ ಯೋಗ ತರಬೇತುದಾರರನ್ನು ನೇಮಿಸಿ, ಯೋಗ ಕ್ರೀಡೆಗೆ ಉತ್ತೇಜನ ನೀಡುವಂತೆ ಸಂಬAಧಪಟ್ಟ ಇಲಾಖೆಗೆ ಮನವಿ ಮಾಡಲಾಗಿದೆ.ಯೋಗಕ್ಕೆ ಸೂಕ್ತ ಮಾರ್ಗದರ್ಶನ ಹಾಗೂ ಮೂಲಸೌಕರ್ಯ ದೊರೆತಾಗ ಮಾತ್ರ "ಯೋಗ ನಗರಿ ಮೈಸೂರು" ಎಂಬ ಹೆಗ್ಗಳಿಕೆ ಇನ್ನಷ್ಟು ಅರ್ಥಪೂರ್ಣವಾಗಲಿದೆ ಎಂದು ತಿಳಿಸಿದರು. ಯೋಗಕ್ಕೆ ಸೂಕ್ತ ಮಾರ್ಗದರ್ಶನ ಹಾಗೂ ಮೂಲಸೌಕರ್ಯ ದೊರೆತಾಗ ಮಾತ್ರಯೋಗ ನಗರಿ ಮೈಸೂರು” ಎಂಬ ಹೆಗ್ಗಳಿಕೆ ಇನ್ನಷ್ಟು ಅರ್ಥಪೂರ್ಣವಾಗಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಹಿಮಾಲಯ ಫೌಂಡೇಶನ್ ಅಧ್ಯಕ್ಷ ಅನಂತು ಮತ್ತಿತರರು ಹಾಜರಿದ್ದರು.