3Kaala News

ಸುಭಾಷಿತ 

ಭೌತಿಕ ಬದುಕಿಗೆ ಆಧ್ಯಾತ್ಮದ ಜ್ಞಾನ ಅವಶ್ಯಕ. ಮನುಷ್ಯ ಧರ್ಮದಿಂದ ವಿಮುಖನಾದರೇ, ಜೀವನ ಅಶಾಂತಿಯ ಕಡಲಾಗುತ್ತದೆ. ಮನುಷ್ಯನ ಬದುಕು ಇನ್ನೊಬ್ಬರಿಗೆ ಮಾದರಿಯಾಗಬೇಕಲ್ಲದೆ, ಮಾರಕವಾಗಬಾರದು.  ಸುಳ್ಳು ಹೇಳಲು ಹಲವು ದಾರಿ, ಆದರೆ ಸತ್ಯಕ್ಕೆ ಇರುವುದೊಂದೇ ದಾರಿ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಾಹಿತಿ ಬನ್ನೂರು ರಾಜುಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿ ಪ್ರದಾನ


ಮೈಸೂರು: ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆ ಮತ್ತು ಸಾಧನೆಗಾಗಿ ಸಾಹಿತಿ ಬನ್ನೂರು ಕೆ. ರಾಜು ಅವರಿಗೆ ಪ್ರಸ್ತುತ 2026 ನೇ ಸಾಲಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿಯನ್ನು ಇಂದು ಪ್ರದಾನ ಮಾಡಲಾಯಿತು.
ಮೈಸೂರು ಜಿಲ್ಲಾಡಳಿತದಿಂದ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಲು ಆಯ್ಕೆಗಿದ್ದ ಹಿರಿಯ ಸಾಹಿತಿ ಬನ್ನೂರು ಕೆ. ರಾಜು ಅವರು ಪಾರ್ಶ್ವವಾಯುವಿನಿಂದ ಅನಾರೋಗ್ಯವಾಗಿದ್ದ ಕಾರಣ, ನಗರದ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮಕ್ಕೆ ಅವರು ಆಗಮಿಸಿ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಮೈಸೂರು ಜಿಲ್ಲೆಯ ಸಹಾಯಕ ನಿರ್ದೇಶಕ ಡಾ. ಎಂ.ಡಿ ಸುದರ್ಶನ್ ಅವರು, ಮೈಸೂರಿನ ಅಗ್ರಹಾರದಲ್ಲಿರುವ ಬನ್ನೂರು ಕೆ. ರಾಜು ಅವರ ಮನೆಗೆ ಭೇಟಿ ನೀಡಿ, ಅವರಿಗೆ ಮೈಸೂರು ಪೇಟ ತೊಡಿಸಿ , ಶಾಲು ಹೊದಿಸಿ , ಫಲ ತಾಂಬೂಲ ಸಹಿತ ಪ್ರಶಸ್ತಿ ಫಲಕ ನೀಡಿ ಅವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಸಾಮಾಜಿಕ ಚಳವಳಿಗಾರರಾದ ಅರವಿಂದ್ ಶರ್ಮ ಉಪಸ್ಥಿತರಿದ್ದರು.