3Kaala News

ಸುಭಾಷಿತ 

ಭೌತಿಕ ಬದುಕಿಗೆ ಆಧ್ಯಾತ್ಮದ ಜ್ಞಾನ ಅವಶ್ಯಕ. ಮನುಷ್ಯ ಧರ್ಮದಿಂದ ವಿಮುಖನಾದರೇ, ಜೀವನ ಅಶಾಂತಿಯ ಕಡಲಾಗುತ್ತದೆ. ಮನುಷ್ಯನ ಬದುಕು ಇನ್ನೊಬ್ಬರಿಗೆ ಮಾದರಿಯಾಗಬೇಕಲ್ಲದೆ, ಮಾರಕವಾಗಬಾರದು.  ಸುಳ್ಳು ಹೇಳಲು ಹಲವು ದಾರಿ, ಆದರೆ ಸತ್ಯಕ್ಕೆ ಇರುವುದೊಂದೇ ದಾರಿ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪಬ್‌ನಲ್ಲಿ ಅಗ್ನಿ ದುರಂತ; ಮೃತರ ದರ್ಶನ ಪಡೆದು, ಕುಟುಂಬದವರಿಗೆ ಸ್ವಾಂತಾನ ಹೇಳಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ


*ಪಬ್‌ನವರು ಲೈಸನ್ಸ್ ಪಡೆದಿರಲಿಲ್ಲ, ಗಾಯಾಳುಗಳ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ
*ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಚಿವರ ಸಭೆ
ಮೈಸೂರು: ಮೈಸೂರಿನ ದಟ್ಟಗಳ್ಳಿ 3 ನೇ ಹಂತದ ನೇತಾಜಿ ವೃತ್ತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್ ರೆಸ್ಟೋ ಪಬ್‌ನ ಮಸಾಯಿ ಮರಾ ಕೆಫೆಯಲ್ಲಿ ಸೋಮವಾರ ನಡೆದ ಅಗ್ನಿ ಅವಘಡದಲ್ಲಿ ಗಾಯಗೊಂಡವರ ಪರಿಸ್ಥಿತಿಯನ್ನು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ವೀಕ್ಷಿಸಿ, ಅವರಿಗೆ ಧೈರ್ಯ ತುಂಬಿದರು.
ಮಂಗಳವಾರ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ಆಗಮಿಸಿದ ಸಚಿವರು, ಅಲ್ಲಿ ದಾಖಲಾಗಿರುವ ಘಟನೆಯಲ್ಲಿ ಗಾಯಗೊಂಡವರ ಪರಿಸ್ಥಿತಿಯನ್ನು ವೀಕ್ಷಿಸಿ, ವೈದ್ಯರಿಂದ ಮಾಹಿತಿಯನ್ನು ಪಡೆದರು. ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ಚಿಕಿತ್ಸೆಯನ್ನು ನೀಡುವಂತೆ ಸೂಚಿಸಿದರು.
ಬಳಿಕ ನಂತರ ಕೆ.ಆರ್. ಆಸ್ಪತ್ರೆ ಶವಗಾರಕ್ಕೆ ಭೇಟಿ ನೀಡಿ ಘಟನೆಯಲ್ಲಿ ಮೃತಪಟ್ಟವರ ಅಂತಿಮ ದರ್ಶನ ಪಡೆದರು. ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಗಾಯಗೊಂಡವರ ಕುಟುಂಬಗಳಿಗೆ ಧೈರ್ಯ ತುಂಬಿದರು. ದಟ್ಟಗಳ್ಳಿ ಬಳಿ ಇರುವ ರೆಸ್ಟೋರೆಂಟ್ ನಲ್ಲಿ ಆದ ಅವಘಡದ ಬಗ್ಗೆ ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಅವಘಡ ನಡೆದ ರೆಸ್ಟೋರೆಂಟ್ ಗೆ ನೀಡಿರುವ ಪರವಾನಗಿ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು ಪರವಾನಗಿ ಪಡೆಯದೇ ಬಾರ್ ಅಂಡ್ ರೆಸ್ಟೋರೆಂಟ್ ನಡೆಸುತ್ತಿರುವ ಬಗ್ಗೆ ಕೇವಲ ಸದರಿ ರೆಸ್ಟೋರೆಂಟ್ ಮಾಲೀಕರ ಮೇಲೆ ಮಾತ್ರವಲ್ಲ ಅಧಿಕಾರಿಗಳ ಮೇಲೂ ಸಹ ಕ್ರಮವಾಗಬೇಕು ಎಂದರು.
ಮೈಸೂರು ನಗರದಲ್ಲಿರುವ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್ ಗಳು, ವಾಣಿಜ್ಯ ಮಳಿಗೆಗಳು ಸರ್ಕಾರ ನಿಗದಿಪಡಿಸಿರುವ ಪರವಾನಗಿ ಹಾಗೂ ಮಾನದಂಡಗಳನ್ನು ಪಾಲಿಸುತ್ತಿರುವ ಬಗ್ಗೆ ಒಂದು ವಾರದೊಳಗೆ ಪರಿಶೀಲಿಸಿ ವರದಿ ನೀಡಬೇಕು. ಇಂತಹ ಅಗ್ನಿ ಅವಘಡಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮುಂದೆ ಈ ರೀತಿಯ ಘಟನೆಗಳು ಜರುಗದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಹಾಗೂ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಸೂಚಿಸಿದರು. ನಂತರ ಅವಘಡ ಸಂಭವಿಸಿದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೋಮವಾರ ನಗರದ ದಟ್ಟಗಹಳ್ಳಿಯ ಮಾರ ಹೆಸರಿನ ಬಾರ್ ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಇಬ್ಬರು ಕೆಲಸಗಾರರು ಜೀವ ಕಳೆದುಕೊಂಡಿದ್ದಾರೆ. ಆಫ್ರಿಕಾ ಥೀಮ್‌ನಲ್ಲಿ ರೆಡಿಯಾದ ಮಾರ ಬಾರ್‌ನಲ್ಲಿ ಒಣ ಹುಲ್ಲು ಹಾಗೂ ಬಿದಿರುಗಳಿಂದ ಶೃಂಗಾರ ಮಾಡಲಾಗಿತ್ತು. ಅದಕ್ಕೆ ವಿದ್ಯುತ್ ಶಾರ್ಟ್ ಸರ್ಕೂ್ಯಟ್ ಅದ ತಕ್ಷಣ ಬೆಂಕಿ ಹತ್ತಿಕೊಂಡು ಈ ದುರಂತ ಸಂಭವಿಸಿದೆ ಎಂದು ತಿಳಿಸಿದರು.
ಈ ಪಬ್ ಬಾರ್ ನಡೆಸಲು ಅಬಕಾರಿ ಇಲಾಖೆಯಿಂದ ಲೈಸೆನ್ಸ್ ಪಡೆದಿರಲಿಲ್ಲ. ಇದರಲ್ಲಿ ಅಬಕಾರಿ ಡಿಸಿ ಕರ್ತವ್ಯ ಲೋಪ ಇದ್ದು, ಇದರ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ಕಳಿಸಲು ತಿಳಿಸಿದ್ದೇನೆ ಎಂದು ಹೇಳಿದರು.
ಘಟನೆಯಲ್ಲಿ ಗಾಯಗೊಂಡವರ ಪೈಕಿ ಒಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಅವರ ಶ್ವಾಸಕೋಶಕ್ಕೂ ತೊಂದರೆಯಾಗಿದ್ದು, ಕಾರ್ಬನ್ ಡೈಆಕ್ಸೆöÊಡ್ ಇನ್ಹೇಲ್ ಮಾಡಿರುವ್ಯದರಿಂದ, ಕನಿಷ್ಠ ಎರಡು ದಿನಗಳ ಕಾಲ ವೈದ್ಯರ ನಿಗಾದಲ್ಲಿ ಇಡಲಾಗಿದೆ. ಇನ್ನುಳಿದ ಆರು ಜನರಿಗೆ ತೀವ್ರವಾದ ಗಾಯಗಳಾಗಿಲ್ಲ ಎಂದು ತಿಳಿಸಿದರು.
ಈ ಘಟನೆಯಲ್ಲಿ ಗಾಯಗೊಂಡಿರುವ ಪಬ್ ಮ್ಯಾನೇಜರ್ ಪರಿಸ್ಥಿತಿಯೂ ಗಂಭೀರವಾಗಿದೆ.ಪಬ್ ಮಾಲೀಕರ ಮೇಲೆ ಈಗಾಗಲೇ ದೂರು ದಾಖಲಿಸಿಕೊಳ್ಳಲಾಗಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಪಬ್‌ನವರು ಲೈಸನ್ಸ್ ಪಡೆದಿರಲಿಲ್ಲ; ಪಬ್‌ನವರು ಸಿಎಲ್-9 ಲೈಸೆನ್ಸ್ ಪಡೆದಿರಲಿಲ್ಲ. ಕೆಳಗಡೆ ಇದ್ದ ಸಿಎಲ್-2 ವೈನ್ ಸ್ಟೋರ್‌ನಿಂದ ರೆಸ್ಟೋರೆಂಟ್‌ಗಳಿಗೆ ಅಕ್ರಮವಾಗಿ ಲಿಕ್ಕರ್ ಸಪ್ಲೆöÊ ಮಾಡುತ್ತಿದ್ದರು, ಇದು ನಿಯಮಗಳ ಉಲ್ಲಂಘನೆಯಾಗಿದೆ. ಈ ಕುರಿತಂತೆ ಪರಿಶೀಲನೆ ನಡೆಸಿ ಸಂಬAಧ ಪಟ್ಟ ಅಬಕಾರಿ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ರಿAಗ್ ರಸ್ತೆಯಲ್ಲಿರುವ ಸುಮಾರು ರೆಸ್ಟೋರೆಂಟ್ ಹಾಗೂ ಪಬ್‌ಗಳಲ್ಲಿ ಅಕ್ರಮವಾಗಿ ಲಿಕ್ಕರ್ ಸರಬರಾಜು ಮಾಡಲಾಗುತ್ತಿದೆಯೇ ಮತ್ತು ಅವರ ಬಳಿ ಸೂಕ್ತ ಲೈಸೆನ್ಸ್ ಇದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲು ಅಬಕಾರಿ ಮತ್ತು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಮೈಸೂರಿನ ಎಲ್ಲಾ ವಾಣಿಜ್ಯ ಮಳಿಗೆಗೆ ಅಗ್ನಿ ಸುರಕ್ಷತಾ ಕ್ರಮಗಳು ಇದೆಯೇ ಎಂಬುದನ್ನು ಪರಿಶೀಲಿಸಿ, ಲೋಪವೆಸಗಿದವರ ವಿರುದ್ಧ ಕ್ರಮ ಜರುಗಿಸಲು ಅಗ್ನಿಶಾಮಕ ಇಲಾಖೆಗೆ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈ ಬಗ್ಗೆ ಮತ್ತೊಂದು ಸಭೆ ನಡೆಸಲಾಗುವುದು ಎಂದು ಹೇಳಿದರು.
ಈ ವೇಳೆ ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ ಜಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಟ್ಕಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಶಾಸಕ ಹರೀಶ್‌ಗೌಡ ಮತ್ತಿತರರು ಹಾಜರಿದ್ದರು.