Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ರೈಲು ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡಿದ್ದ 34 ಮಂದಿ ಬಿಡುಗಡೆ


*ಘಟನೆಗೆ ಸಂಬಂಧಿಸಿದಂತೆ ಆರು ಮಂದಿಯ ವಿರುದ್ಧ ಕೇಸ್ ದಾಖಲು
ಮೈಸೂರು
; ಶಂಕಿತ ಬಾಂಗ್ಲಾ ಪ್ರಜೆಗಳೆಂದು ಮೈಸೂರು ರೈಲು ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡಿದ್ದ 34 ಮಂದಿಯನ್ನು ವಿಚಾರಣೆ, ದಾಖಲೆಗಳ ಪರಿಶೀಲನೆಯ ಬಳಿಕ ಬಿಡುಗಡೆ ಮಾಡಲಾಗಿದೆ.
ಜೂನ್ 21 ರಂದು ಬೆಳಿಗ್ಗೆ ಸುಮಾರು 10:30 ಗಂಟೆಗೆ, ರೈಲು ಸಂಖ್ಯೆ 22817 (ಹೌರಾ-ಮೈಸೂರು ಎಕ್ಸ್‍ಪ್ರೆಸ್) ಮೂಲಕ ಕೆಲವು ಶಂಕಿತ ವ್ಯಕ್ತಿಗಳು ಪ್ರಯಾಣಿಸುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ, ಮೈಸೂರು ಸರ್ಕಾರಿ ರೈಲ್ವೆ ಪೆÇಲೀಸ್ ಹಾಗೂ ರೈಲ್ವೆ ರಕ್ಷಣಾ ಪಡೆ ಅಧಿಕಾರಿಗಳು ರೈಲಿನಲ್ಲಿ ಪ್ರಯಾಣಿಕರ ಗುರುತಿನ ಪರಿಶೀಲನೆ ಹಾಗೂ ವಿಚಾರಣೆಯನ್ನು ನಿಯಮಾನುಸಾರ ನಡೆಸಿದರು.
ಜಿಆರ್‍ಪಿ ಹಾಗೂ ಆರ್‍ಪಿಎಫ್ ವತಿಯಿಂದ ಜಂಟಿ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ, ಹಿಂದೂ ಜಾಗರಣ ವೇದಿಕೆ, ಮೈಸೂರು ಮಂಡಲದ ಕೆಲ ಕಾರ್ಯಕರ್ತರು ರೈಲ್ವೆ ಆವರಣಕ್ಕೆ ಪ್ರವೇಶಿಸಿ, ನಡೆಯುತ್ತಿದ್ದ ಪರಿಶೀಲನಾ ಕಾರ್ಯದಲ್ಲಿ ಮಧ್ಯಪ್ರವೇಶ ಮಾಡಿದರು. ಬಳಿಕ ಅವರು ಬಾಂಗ್ಲಾದೇಶದ ಪ್ರಜೆಗಳಾಗಿರಬಹುದು ಎಂದು ಶಂಕಿಸಿದ 34 ಮಂದಿಯನ್ನು ಹೆಚ್ಚಿನ ಪರಿಶೀಲನೆಗಾಗಿ ಮೈಸೂರು ಜಿಆರ್‍ಪಿ ಪೆÇಲೀಸ್ ಠಾಣೆಗೆ ಕರೆತರಲಾಯಿತು.
ಮೈಸೂರು ಸರ್ಕಾರಿ ರೈಲ್ವೆ ಪೆÇಲೀಸರು ಆ 34 ಮಂದಿಯ ಗುರುತು ಹಾಗೂ ದಾಖಲೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಅವರ ವಿರುದ್ಧ ಯಾವುದೇ ಪ್ರತಿಕೂಲ ಮಾಹಿತಿ ಅಥವಾ ದಾಖಲೆಗಳು ಪತ್ತೆಯಾಗದ ಹಿನ್ನೆಲೆಯಲ್ಲಿ, ಎಲ್ಲಾ 34 ಮಂದಿಯನ್ನು ಬಿಡುಗಡೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ, ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಹಾಗೂ ಕಾನೂನು ಜಾರಿಗೊಳಿಸುವ ಅಧಿಕಾರ ಹೊಂದಿರುವ ಮೈಸೂರು ಸರ್ಕಾರಿ ರೈಲ್ವೆ ಪೆÇಲೀಸ್ ಠಾಣೆಯು, ಈ ಘಟನೆಗೆ ಸಂಬಂಧಿಸಿದಂತೆ ಆರು ಮಂದಿಯ ವಿರುದ್ಧ ಅಪರಾಧ ಸಂಖ್ಯೆ 12/2026ರಡಿ ಭಾರತೀಯ ನ್ಯಾಯ ಸಂಹಿತೆಯ (ಃಓS) ಸಂಬಂಧಿತ ವಿಧಿಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
ಪ್ರಕರಣದ ತನಿಖೆಯನ್ನು ಸರ್ಕಾರಿ ರೈಲ್ವೆ ಪೆÇಲೀಸರು ಕೈಗೊಂಡಿದ್ದಾರೆ. ಈ ಸಂಬಂಧ ಪ್ರಥಮ ಮಾಹಿತಿ ವರದಿ ಯನ್ನು ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಮೈಸೂರು ಸರ್ಕಾರಿ ರೈಲ್ವೆ ಪೆÇಲೀಸ್ ಠಾಣೆಯೇ ದಾಖಲಿಸಿದ್ದು, ಇಂತಹ ಪ್ರಕರಣಗಳ ತನಿಖೆ ನಡೆಸಲು ಅಧಿಕಾರ ಹೊಂದಿರುವ ಸಂಸ್ಥೆಯಾಗಿದೆ. ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ರೈಲ್ವೆ ರಕ್ಷಣಾ ಪಡೆ ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಲ್ಲ. ತನಿಖೆಯ ಅವಶ್ಯಕತೆಗೆ ಅನುಗುಣವಾಗಿ ಸರ್ಕಾರಿ ರೈಲ್ವೆ ಪೆÇಲೀಸರಿಗೆ ಆರ್‍ಪಿಎಫ್ ಅಗತ್ಯವಿರುವ ಎಲ್ಲಾ ಸಹಕಾರವನ್ನು ನೀಡುತ್ತಿದೆ.
ಅಧಿಕೃತ ಸಂಸ್ಥೆಗಳು ಕೈಗೊಳ್ಳುವ ಪರಿಶೀಲನೆ ಹಾಗೂ ತನಿಖಾ ಪ್ರಕ್ರಿಯೆಗಳಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹಸ್ತಕ್ಷೇಪ ಮಾಡದೆ, ಕಾನೂನು ಸುವ್ಯವಸ್ಥೆ, ಸುರಕ್ಷತೆ ಹಾಗೂ ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡಲು ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಮೈಸೂರು ರೈಲ್ವೆ ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಧರ್ಮರಾಜ ಕಲಗೊಂಡ ತಿಳಿಸಿದ್ದಾರೆ.