Skip to main content

3Kaala News

ಸುಭಾಷಿತ 

ಪ್ರಯತ್ನ ಎಂಬುದು ಬೀಜದ ಹಾಗೆ ಬಿತ್ತುತ್ತಲೇ ಇರಿ ಚಿಗುರಿದರೆ ಮರವಾಗಲಿ ಇಲ್ಲವೆಂದರೆ ಮಣ್ಣಿಗೆ ಗೊಬ್ಬರವಾಗಲಿ.
ಇವತ್ತು ನಿನ್ನನ್ನು ಏನು ನೋಯಿಸುತ್ತಿದೆಯೋ ನಾಳೆ ಅದೇ ನಿನ್ನನ್ನು ಬಲಗೊಳಿಸುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜೂ.25ರಂದು ವಿಶೇಷ ‘ಸ್ವಾತಿ’ ಪೂಜೆ


ಮೈಸೂರು; ನಗರದ ಕಾಳಿದಾಸ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಜೂ.25ರಂದು ಗುರುವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕ್ಕೊಳ್ಳಲಾಗಿದೆ. ಅಂದು ಬೆಳಿಗ್ಗೆ 8.30ಕ್ಕೆ ಸಂಕಲ್ಪ, 9.30ಕ್ಕೆ ಅಭಿಷೇಕ, 11ಕ್ಕೆ ಅಲಂಕಾರ, 12ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 1ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ. ಸಂಜೆ 8ಕ್ಕೆ ಪ್ರಾಕಾರೋತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ತಿಳಿಸಿದ್ದಾರೆ. ಮಾಹಿತಿಗೆ ಮೊಬೈಲ್ 9342188323, 7598832271 ಸಂಪರ್ಕಿಸಬಹುದು.